ಕಾರವಾರದ ಯುದ್ಧನೌಕೆಯಲ್ಲಿ ಬೆಂಕಿ ಅವಘಡ: ಅಧಿಕಾರಿ ಸಾವು

ಕಾರವಾರ, ಏಪ್ರಿಲ್ 26: ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ನೌಕಾನೆಲೆಯಲ್ಲಿ ಉಂಟಾದ ಅಗ್ನಿ ಅವಘಡಕ್ಕೆ ಒಬ್ಬ ಅಧಿಕಾರಿ ಬಲಿಯಾಗಿದ್ದಾರೆ. ನೌಕಾನೆಲೆಯ ಕೆಲವು ಸಿಬ್ಬಂದಿಗೆ ಗಾಯಗಳಾಗಿವೆ. ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕಾರವಾರದ ಅರಗಾ ಗ್ರಾಮದಲ್ಲಿರುವ ಕದಂಬ ನೌಕಾನೆಲೆಯಲ್ಲಿ ಐಎನ್‌ಎಸ್ ವಿಕ್ರಮಾದಿತ್ಯ ಯುದ್ಧನೌಕೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿತ್ತು. ಲೆಫ್ಟಿನೆಂಟ್ ಜನರಲ್ ಡಿ.ಎಸ್. ಚೌವ್ಹಾಣ್ ಬೆಂಕಿಯ ಜ್ವಾಲೆಗೆ ಸಿಲುಕಿ ಸುಟ್ಟುಗಾಯಗಳಿಂದ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಏಳು ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ.

ಐಎನ್‌ಎಸ್ ವಿಕ್ರಮಾದಿತ್ಯದ ಬಾಯ್ಲರ್ ಕಂಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ಹೆಚ್ಚಿನ ಅನಾಹುತ ಸಂಭವಿಸದಂತೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದರಿಂದ ನಡೆಯಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.

ಐಎನ್‌ಎಸ್ ವಿಕ್ರಮಾದಿತ್ಯಕ್ಕೆ ಹಾನಿಯಾಗಿಲ್ಲ. ಗಾಯಾಳುಗಳನ್ನು ವಾಯುನೆಲೆಯಲ್ಲಿರುವ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

fire in INS Vikramaditya in Karwar Karnataka Naval base Kadamba

ಶುಕ್ರವಾರ ಬೆಳಿಗ್ಗೆ ಬಾಯ್ಲರ್ ಕಂಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿ ಆಕಸ್ಮಿಕದ ಈ ಘಟನೆಯ ಬಗ್ಗೆ ಸಮಿತಿ ತನಿಖೆಗೆ ನೌಕಾದಳ ಆದೇಶಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+