ಉತ್ತರಕನ್ನಡ ಜಿಲ್ಲೆಯತ್ತ ಪ್ರಯಾಣ ಬೆಳೆಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹೊನ್ನಾವರ, ಜೂನ್.24 : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಜೂ.25 ರಂದು ಹೊನ್ನಾವರಕ್ಕೆ ಆಗಮಿಸಲಿದ್ದಾರೆ.

ಈ ಕುರಿತು ಆಪ್ತ ಕಾರ್ಯದರ್ಶಿ ಅಂಜನಿಗೌಡ ಪ್ರಕಟಣೆ ನೀಡಿದ್ದು, ರೈಲಿನ ಮೂಲಕ ಬೆಂಗಳೂರಿನಿಂದ ಬೆಳಗ್ಗೆ 7.15ಕ್ಕೆ ತಾಳಗುಪ್ಪಕ್ಕೆ ಬಂದು ಅಲ್ಲಿಂದ ರಸ್ತೆ ಮಾರ್ಗದಲ್ಲಿ ಹೊನ್ನಾವರಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಬೆಳಿಗ್ಗೆ 9.30ಕ್ಕೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿ, ನಂತರ 11ಕ್ಕೆ ಇಡಗುಂಜಿ ದೇವಸ್ಥಾನಕ್ಕೆ ಭೇಟಿ ನೀಡುವರು. ಆ ನಂತರ ಇಡಗುಂಜಿಯ ಮಂಗಲಮೂರ್ತಿ ಕಲ್ಯಾಣಮಂಟಪದಲ್ಲಿ ನಡೆಯಲಿರುವ ತಮ್ಮ ಆಪ್ತ ಗಣಪಯ್ಯ ಗೌಡ ಅವರ ಮಗ ಬಾಲಚಂದ್ರ ಅವರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

Former Prime Minister HD Deve Gowda will arrive at Honnavar on June 25.

ಸಮಾರಂಭ ಮುಗಿದ ಮೇಲೆ ಹೊನ್ನಾವರದಿಂದ ಹೊರಟು ಮಧ್ಯಾಹ್ನ 2.30ಕ್ಕೆ ಯಲ್ಲಾಪುರ ತಲುಪಿ ಪ್ರವಾಸಿ ಮಂದಿರದಲ್ಲಿ ತಂಗಿ, ಅಲ್ಲಿಂದ ಚಂದಗುಳಿ ಶ್ರೀಗಣಪತಿ ದೇವಸ್ಥಾನ, ಶ್ರೀಲಕ್ಷ್ಮೀನಾರಾಯಣ ದೇವಸ್ಥಾನ, ಬೆಳಗುಂಡ್ಲಿ ಎಂ.ಟಿ.ಹೆಗಡೆ ಅವರ ಮನೆಗೆ ಭೇಟಿ ನೀಡಲಿದ್ದಾರೆ. ನಂತರ ಅಲ್ಲಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+