ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಟಾದಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ಅನಿಲ ಸೋರಿಕೆ

|
Google Oneindia Kannada News

ಕುಮಟಾ, ಸೆಪ್ಟೆಂಬರ್ 26: ತುಂಬಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿರುವ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ ಹಂದಿಗೋಣ ಗ್ರಾಮದ ಬಳಿ ನಡೆದಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಟ್ಯಾಂಕರ್ ನಿಂದ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗುತ್ತಿದೆ. ಹೀಗಾಗಿ ಯಾರನ್ನೂ ಸಮೀಪ ಬಿಡುತ್ತಿಲ್ಲ. ಇದರೊಂದಿಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ ಹೆದ್ದಾರಿಯಲ್ಲಿ ವಾಹನಗಳು ಸಂಚರಿಸಲಾಗುತ್ತಿಲ್ಲ.

ಟ್ಯಾಂಕರ್ ಬಿದ್ದ ಸ್ಥಳದಿಂದ ಎರಡೂ ಕಡೆ ಅರ್ಧ ಕಿಲೋ ಮೀಟರ್ ದೂರದಲ್ಲಿ ವಾಹನಗಳನ್ನು ತಡೆ ಹಿಡಿಯಲಾಗಿದೆ. ಇದರಿಂದ ಸುಮಾರು 4 ಕಿ.ಮೀ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.

ಶಾಲಾ ವಾಹನಕ್ಕೆ ಬೆಂಕಿ: ನಾಲ್ವರು ಮಕ್ಕಳು ಸಜೀವ ದಹನಶಾಲಾ ವಾಹನಕ್ಕೆ ಬೆಂಕಿ: ನಾಲ್ವರು ಮಕ್ಕಳು ಸಜೀವ ದಹನ

Uttara Kannada: Gas Tanker Topples at Handigonuvillage near Kumta

Recommended Video

China - Pakistan ಒಟ್ಟಿಗೆ ಬಂದ್ರು ನಾವ್ Ready to Fight | Oneindia Kannada

ಮುಂಜಾಗ್ರತಾ ಕ್ರಮವಾಗಿ ಸಮೀಪದ ಮನೆಗಳಲ್ಲಿ ವಿದ್ಯುತ್ ಉಪಕರಣಗಳನ್ನು ಬಳಸದಂತೆ ಹಾಗೂ ಬೆಂಕಿ ಹಚ್ಚದಂತೆ ಪೊಲೀಸರು ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

English summary
Gas tanker topples at handigonu village near in kumta losing driver controll. Police stopped vehicles on both the sides,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X