ಗೋವಾ-ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಬಿಗ್ ಅಪ್ಡೇಟ್
ಕಾರಾವಾರ, ಏಪ್ರಿಲ್ 03: ಗೋವಾ-ಕರ್ನಾಟಕದ ಗಡಿಭಾಗದಿಂದ ಉಡುಪಿ ಜಿಲ್ಲೆ ಕುಂದಾಪುರದವರೆಗೆ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಚತುಷ್ಪಥ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದೆ. ಕರ್ನಾಟಕ ರಾಜ್ಯದ ಎನ್ಎಚ್-17ರ ಗೋವಾ/ ಕರ್ನಾಟಕ ಗಡಿಯಿಂದ ಕುಂದಾಪುರದವರೆಗಿನ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಯೋಜನೆ ಇದಾಗಿದ್ದು, 187 ಕಿ.ಮೀ. ಉದ್ದವನ್ನು ವ್ಯಾಪಿಸಿರುವ ಈ ಹೆದ್ದಾರಿಯು ಒಂದು ಕಡೆ ಅರಬ್ಬಿ ಸಮುದ್ರ ತೀರವನ್ನು ಮತ್ತೊಂದು ಕಡೆ ಪಶ್ಚಿಮ ಘಟ್ಟಗಳನ್ನು ಒಳಗೊಂಡಿದೆ. ಗೋವಾ-ಕರ್ನಾಟಕದ ಸಂಪರ್ಕ ರಸ್ತೆ ಇದಾಗಿದೆ.
ಈ ಕಾಮಗಾರಿಯ ಬಗ್ಗೆ ಇದೀಗ ಮತ್ತೊಂದು ಅಪ್ಡೇಟ್ ಸಿಕ್ಕಿದ್ದು, ರಾಷ್ಟ್ರೀಯ ಹೆದ್ದಾರಿ 17ರ ಮಾರ್ಗವಾಗಿ ಬರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ವಿಟ್ಟಲ್ ಘಾಟ್ ಮತ್ತು ಭಟ್ಕಳ ತಾಲೂಕಿನ ಮೂಡ್ ಭಟ್ಕಳ ಹಾಗೂ ಕಾಯ್ಕಿಣಿ ಪ್ರದೇಶಗಳಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಅಸ್ತು ಎಂದಿದೆ. ಈ ಬಗ್ಗೆ ಉತ್ತರ ಕನ್ನಡದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿವರವಾಗಿ ತಿಳಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಿ ವಿವರ ಹಂಚಿಕೊಂಡಿರುವ ವಿಶ್ವೇಶ್ವರ ಹೆಗಡೆ ಕಾಗೇರಿ, ದಿನಾಂಕ 20.12.2024 ರಂದು, ನನ್ನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗೋವಾ ಕರ್ನಾಟಕ ಗಡಿಯಿಂದ ಕುಂದಾಪುರವರೆಗಿನ ಚತುಷ್ಪಥ ರಾಷ್ಟೀಯ ಹೆದ್ದಾರಿ ಸಂಖ್ಯೆ 66ರ ರಸ್ತೆಯಲ್ಲಿ ಅಂಕೋಲಾದ ವಿಟ್ಟಲ್ ಘಾಟ್ ಮತ್ತು ಭಟ್ಕಳ ತಾಲೂಕಿನ ಮೂಡ್ ಭಟ್ಕಳ ಹಾಗೂ ಕಾಯ್ಕಿಣಿ ಪ್ರದೇಶಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ನಿರ್ಮಾಣದ ಅವಶ್ಯಕತೆಯನ್ನು ಕೇಂದ್ರ ರಸ್ತೆ, ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಮನವಿ ನೀಡಿ ಗಮನಕ್ಕೆ ತಂದಿದ್ದೆ. ಸ್ಥಳೀಯ ನಾಗರಿಕರ ಬಹುಕಾಲದ ಬೇಡಿಕೆಯಾದ ಈ ವಿಷಯದ ಗಂಭೀರತೆಯನ್ನು ಮನಗಂಡ ಸಚಿವರು ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದ್ದರು.
ಅದರ ಫಲವಾಗಿ, ಈಗ ಈ ಕಾಮಗಾರಿಗಳಿಗಾಗಿ ತಾತ್ಕಾಲಿಕ ಅಂದಾಜು ಮೊತ್ತ ರೂ. 47 ಕೋಟಿ 48 ಲಕ್ಷಗಳನ್ನು ಮಂಜೂರು ಮಾಡಲಾಗಿದ್ದು. 40.37 ಕೋಟಿ ರೂಪಾಯಿ ಮೊತ್ತಕ್ಕೆ ಈ ಯೋಜನೆಯ ಟೆಂಡರ್ ಕರೆಯಲಾಗಿದ್ದು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿಯು ಪ್ರಾರಂಭವಾಗಲಿದೆ. ಈ ಮೂಲಕ, ಈ ಪ್ರದೇಶದ ಜನರ ಬಹುದಿನಗಳ ಆಶಯವು ಈಡೇರಿದಂತಾಗಿದೆ.
ನಾನು ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಈ ಕಾಮಗಾರಿಯ ಮಹತ್ವವನ್ನು ಮನಗಂಡು ಕಾಮಗಾರಿಗಳಿಗೆ ಅನುದಾನವನ್ನು ಮಂಜೂರು ಮಾಡಿದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಹಾಗೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಅವರ ಈ ಸಹಕಾರದಿಂದಾಗಿ ಈ ಪ್ರದೇಶದ ಜನರ ರಸ್ತೆ ಸಂಪರ್ಕದಲ್ಲಿ ಮಹತ್ತರವಾದ ಸುಧಾರಣೆಯಾಗಲಿದೆ.

ಈ ಅಂಡರ್ ಪಾಸ್ ನಿರ್ಮಾಣದಿಂದ ಈ ಪ್ರದೇಶಗಳಲ್ಲಿ ಸಂಚಾರ ವ್ಯವಸ್ಥೆಯು ಸುಗಮವಾಗುವುದರ ಜೊತೆಗೆ, ರಸ್ತೆ ಅಪಘಾತಗಳ ಸಂಖ್ಯೆಯೂ ಕಡಿಮೆಯಾಗಲಿದೆ. ಇದು ಸ್ಥಳೀಯ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳಿಗೂ ಉತ್ತೇಜನ ನೀಡಲಿದೆ. ಈ ಯೋಜನೆಯ ಅನುಷ್ಠಾನಕ್ಕಾಗಿ ಶ್ರಮಿಸಿದ ಅಧಿಕಾರಿಗಳು ಹಾಗೂ ಸಹಕರಿಸಿದ ಎಲ್ಲರಿಗೂ ನನ್ನ ಧನ್ಯವಾದಗಳು. ಈ ಯೋಜನೆಯು ನಮ್ಮ ಸರ್ಕಾರದ ಜನಪರ ಕಾಳಜಿ ಮತ್ತು ಅಭಿವೃದ್ಧಿಪರ ದೃಷ್ಟಿಕೋನಕ್ಕೆ ಒಂದು ನಿದರ್ಶನವಾಗಿದೆ. ಮುಂಬರುವ ದಿನಗಳಲ್ಲಿಯೂ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯಗಳನ್ನು ನಾವು ಮುಂದುವರಿಸುತ್ತೇವೆ ಎಂದು ಉತ್ತರ ಕನ್ನಡದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಗೋವಾ-ಕುಂದಾಪುರ ಹೆದ್ದಾರಿಯ ಬಗ್ಗೆ ಕೇಂದ್ರ ಸಚಿವರು ಹೇಳಿದ್ದೇನು?
ಈ ಹಿಂದೆ ಗೋವಾ-ಕರ್ನಾಟಕದ ಗಡಿಭಾಗದಿಂದ ಉಡುಪಿ ಜಿಲ್ಲೆ ಕುಂದಾಪುರದವರೆಗೆ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ 17ರ ಬಗ್ಗೆ ಮಾಹಿತಿ ನೀಡಿದ್ದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಸರ್ಕಾರವು ದೇಶದ ಮೂಲೆ ಮೂಲೆಗಳಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ನಿರ್ಮಿಸಲು ಮತ್ತು ನವ ಭಾರತವನ್ನು ಸಂಪರ್ಕದ ಮೂಲಕ ಸಮೃದ್ಧಿಯ ಯುಗದತ್ತ ಕೊಂಡೊಯ್ಯಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಈ ಹಿನ್ನೆಲೆಯಲ್ಲಿ ಗೋವಾ-ಕುಂದಾಪುರದವರೆಗೆ ಹೆದ್ದಾರಿ ನಿರ್ಮಾಣವಾಗುತ್ತಿದ್ದು, ಸುಮಾರು 187 ಕಿ.ಮೀ ಉದ್ದದ ಈ ಮಾರ್ಗವು ಒಂದು ಬದಿಯಲ್ಲಿ ಅರೇಬಿಯನ್ ಸಮುದ್ರ ಕರಾವಳಿ ಮತ್ತು ಇನ್ನೊಂದು ಬದಿಯಲ್ಲಿ ಪಶ್ಚಿಮ ಘಟ್ಟಗಳನ್ನು ಹೊಂದಿದೆ. ಇದರ ರಮಣೀಯ ನೋಟದಿಂದಾಗಿ ಈ ಯೋಜನೆಯು ಪಶ್ಚಿಮ ಮತ್ತು ದಕ್ಷಿಣ ಭಾರತದ ನಡುವಿನ ಪ್ರಮುಖ ಕರಾವಳಿ ಹೆದ್ದಾರಿ ಸಂಪರ್ಕವಾಗಲಿದೆ ಎಂದು ತಿಳಿಸಿದ್ದರು.
ಇನ್ನು ಈ ಆಯಕಟ್ಟಿನ ಹೆದ್ದಾರಿಯು ವಿವಿಧ ಭೂಪ್ರದೇಶಗಳ ಮೂಲಕ ಹಾದುಹೋಗುತ್ತದೆ, ಸುಮಾರು 50% ಉದ್ದವು ರೋಲಿಂಗ್ ಭೂಪ್ರದೇಶ (45 ಕಿಮೀ) ಮತ್ತು ಪರ್ವತ ಪ್ರದೇಶ (24 ಕಿಮೀ) ಮೂಲಕ ಹಾದುಹೋಗುತ್ತದೆ. ಪ್ರಯಾಣಿಕರಿಗೆ ವಿಶ್ವ ದರ್ಜೆಯ ರಸ್ತೆ ಮೂಲಸೌಕರ್ಯ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿರುವ ಈ ಜೋಡಣೆಯು ಪನ್ವೇಲ್, ಚಿಪ್ಲುನ್, ರತ್ನಗಿರಿ, ಪಣಜಿ, ಮಾರ್ಗೋವಾ, ಕಾರವಾರ, ಉಡುಪಿ, ಸುರತ್ಕಲ್, ಮಂಗಳೂರು, ಕೋಝಿಕ್ಕೋಡ್, ಕೊಚ್ಚಿ, ತಿರುವನಂತಪುರಂ ಮತ್ತು ಕನ್ಯಾಕುಮಾರಿ ಸೇರಿದಂತೆ ಪ್ರಮುಖ ನಗರಗಳು ಮತ್ತು ಪಟ್ಟಣಗಳನ್ನು ಸಂಪರ್ಕಿಸುತ್ತದೆ ಎಂದು ತಿಳಿಸಿದ್ದರು.
ಇನ್ನು ಈ ಹೆದ್ದಾರಿ ಅಭಿವೃದ್ಧಿಯು ಕರಾವಳಿ ಭಾಗದ ಆರ್ಥಿಕ ಅಭಿವೃದ್ಧಿಗೆ ಹೊಸ ಭರವಸೆಗಳನ್ನು ನೀಡುತ್ತದೆ. ಹೊಸ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಬಹುಪಟ್ಟು ಅವಕಾಶಗಳನ್ನು ಒದಗಿಸುತ್ತದೆ. ಈ ಹೆದ್ದಾರಿ ಅಭಿವೃದ್ಧಿಯಿಂದ ಸ್ಥಳೀಯ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಉದ್ಯೋಗಗಳ ಸೃಷ್ಟಿಗೆ ಕಾರಣವಾಗುತ್ತದೆ ಎಂದಿದ್ದರು. ಅಲ್ಲದೇ ಒಂದು ವೇಳೆ ಈ ಹೆದ್ದಾರಿ ನಿರ್ಮಾಣವಾದರೆ ಗೋವಾದಿಂದ ಕರ್ನಾಟಕದ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಈ ಭಾಗದಲ್ಲಿ ನಡೆಯುವ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತದೆ. ಕರ್ನಾಟಕದ ಜನರು ಕಡಿಮೆ ವೆಚ್ಚದಲ್ಲಿ ಗೋವಾವನ್ನು ಹಾಗೂ ಗೋವಾದ ಜನರು ಕಡಿಮೆ ವೆಚ್ಚದಲ್ಲಿ ಕರ್ನಾಟಕಕ್ಕೆ ಪ್ರಯಾಣ ಬೆಳೆಸಬಹುದು. ಇದರಿಂದ ಅಂತರ್ ರಾಜ್ಯ ಸಂಪರ್ಕ ಹೆಚ್ಚುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications