• search
  • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇಂದಿನಿಂದ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಪ್ರವೇಶ ಮುಕ್ತ

|

ಕಾರವಾರ, ಅಕ್ಟೋಬರ್ 5: ಕೊರೊನಾ ವೈರಸ್ ವ್ಯಾಪಕವಾಗಿ ಹರಡಿದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಮುಚ್ಚಿದ್ದ ಪುರಾಣ ಪ್ರಸಿದ್ಧ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನ ಇದೀಗ ಭಕ್ತರಿಗೆ ಮುಕ್ತವಾಗಿದೆ. ಇಂದು, ಅ.5ರ ಸೋಮವಾರದಿಂದ ಭಕ್ತರು ದೇಗುಲಕ್ಕೆ ಭೇಟಿ ನೀಡಬಹುದಾಗಿದೆ.

ಶ್ರೀರಾಮಚಂದ್ರಾಪುರ ಮಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಂತೆ ಪೂಜೆ- ಪುನಸ್ಕಾರ ಪುನರಾರಂಭಕ್ಕೆ ನಿರ್ಧರಿಸಲಾಗಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ಜಿ.ಕೆ.ಹೆಗಡೆ ಮತ್ತು ಉಪಾದಿವಂತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

ಗೋಕರ್ಣ ಈಗ ಟೆಕ್ಕಿಗಳ ಹೊಸ ಲಾಗ್ ಇನ್ ತಾಣ!

ಕೊರೊನಾ ವೈರಸ್ ವ್ಯಾಪಕವಾಗಿ ಹರಡಿದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಮುಚ್ಚಿದ್ದ ದೇಗುಲ ಇದೀಗ ಭಕ್ತರಿಗೆ ಮುಕ್ತವಾಗಿದೆ. ಸಾರ್ವಜನಿಕರು ದೇಗುಲಕ್ಕೆ ಭೇಟಿ ನೀಡಿ ಆತ್ಮಲಿಂಗ ದರ್ಶನ ಪಡೆಯಬಹುದಾಗಿದೆ ಮತ್ತು ವಿಶೇಷ ಪೂಜೆ ಸೇರಿದಂತೆ ಎಲ್ಲ ಸೇವಾವಕಾಶ ಕಲ್ಪಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಭಕ್ತರು ಕಟ್ಟುನಿಟ್ಟಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಮನವಿ ಮಾಡಲಾಗಿದೆ.

ದೇವಾಲಯದಲ್ಲಿ ವಸ್ತ್ರ ಸಂಹಿತೆ ಕೂಡ ಜಾರಿ ಮಾಡಲಾಗಿದ್ದು, ಭಾರತೀಯ ಉಡುಗೆಯೊಂದಿಗೆ ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆಯಲು ದೇವಾಲಯದ ಆಡಳಿತ ಮಂಡಳಿ ಭಕ್ತರಲ್ಲಿ ವಿನಂತಿಸಿದೆ.

English summary
Gokarna Sri Mahabaleshwar Temple, which was closed for the past six months due to the spread of coronavirus, is open to devotees from today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X