ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ಸಿನ ಹಿಂಬಾಗಿಲ ಕೆಲಸಕ್ಕೆ ಸರ್ಕಾರ ಬಗ್ಗಲ್ಲ: ಆರ್.ಅಶೋಕ್

|
Google Oneindia Kannada News

ಕಾರವಾರ, ಜನವರಿ 25: ಕಾಂಗ್ರೆಸ್ ಹಿಂಬಾಗಿಲಿನ ಮೂಲಕ ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದೆ. ಇದಕ್ಕೆಲ್ಲ ಸರ್ಕಾರ ಬಗ್ಗಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಉತ್ತರ ಕನ್ನಡದ ಭಟ್ಕಳದಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರಿಗಾಗಿಯೇ ಕೃಷಿ ಕಾಯ್ದೆ ಜಾರಿ ಮಾಡಲಾಗಿದೆ. ಆದರೆ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್, ಇದೀಗ ರೈತರನ್ನು ಎತ್ತಿಕಟ್ಟುವ ಮೂಲಕ ಹಿಂಬಾಗಿಲಿನಿಂದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಅಕ್ರಮ ಕಲ್ಲು ಕ್ವಾರಿಗಳಿಗೆ ಮೂಗುದಾರ ಹಾಕಲು ಮುಂದಾದ ಉತ್ತರ ಕನ್ನಡ ಜಿಲ್ಲಾಡಳಿತಅಕ್ರಮ ಕಲ್ಲು ಕ್ವಾರಿಗಳಿಗೆ ಮೂಗುದಾರ ಹಾಕಲು ಮುಂದಾದ ಉತ್ತರ ಕನ್ನಡ ಜಿಲ್ಲಾಡಳಿತ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆಗಳು ರೈತರ ಪರವಾಗಿದೆ. ಆದರೆ ಇದರ ವಿರುದ್ಧ ಕೆಲ ದಿನಗಳ ಹಿಂದೆ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಇದೀಗ ಪ್ರತಿಭಟನೆಗೆ ಕುಮ್ಮಕ್ಕು ನೀಡಿರುವುದು ಪಕ್ಕಾ ಆಗಿದೆ. ಇಂತಹ ಕಾಂಗ್ರೆಸ್ ಪ್ರೇರಿತ ಪ್ರತಿಭಟನೆಗಳಿಗೆ ಯಾರೂ ಕೂಡ ಬೆಲೆ ಕೊಡಬೇಕಾದ ಅವಶ್ಯಕತೆ ಇಲ್ಲ ಎಂದಿದ್ದಾರೆ.

 Karwar: Govt Does Not Favor Congress Back Door Work: Revenue Minister R Ashok

ಇನ್ನು, ಆನಂದ್ ಸಿಂಗ್ ರಾಜೀನಾಮೆ‌ ಗುಮಾನಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಕಂದಾಯ ಸಚಿವ ಆರ್.ಅಶೋಕ್, ಸಚಿವ ಆನಂದ್ ಸಿಂಗ್ ಅವರು ಏಕಾಏಕಿ ತೀರ್ಮಾನ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿದ್ದಾರೋ, ಕೊಟ್ಟಿಲ್ಲವೋ ನನಗೆ ಇನ್ನು ಸ್ಪಷ್ಟವಾಗಿ ಗೊತ್ತಾಗಿಲ್ಲ.

 Karwar: Govt Does Not Favor Congress Back Door Work: Revenue Minister R Ashok

Recommended Video

ಗಣರಾಜ್ಯೋತ್ಸವಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಬ್ರೇಕ್- ರಾಜಧಾನಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ | Oneinda Kannada

ಈ ಬಗ್ಗೆ ನಾನು ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿ ಮುಖ್ಯಮಂತ್ರಿಗಳ ಜೊತೆ ಮಾತಾಡುತ್ತೇವೆ. ಅಲ್ಲದೆ ಈ ಬಗ್ಗೆ ಆನಂದ್ ಸಿಂಗ್ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

English summary
The Agricultural Act has been implemented for farmers, Minister R. Ashok said that in Bhatkala, Uttar Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X