ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಶಿವರಾಮ್ ಹೆಬ್ಬಾರ್‌ಗೆ ಪ್ರತಿಷ್ಠೆಯಾದ ಲೋಕಲ್ ಫೈಟ್!

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಡಿಸೆಂಬರ್ 15: ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆ ಕಣ ರಂಗೇರಿದೆ. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಸಚಿವರಾದ ಬಳಿಕ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಆದ್ದರಿಂದ, ಸಚಿವರಿಗೆ ಚುನಾವಣೆ ಪ್ರತಿಷ್ಠೆಯಾಗಿದೆ.

ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದರು. ಆಗ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆಡಳಿತ್ತು, ಕಾಂಗ್ರೆಸ್ ಬೆಂಬಲಿತ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ತನ್ನ ಹಿಡಿತವನ್ನು ಸಹ ಇಟ್ಟುಕೊಂಡಿತ್ತು.

ಪಂಚಾಯಿತಿ ಚುನಾವಣೆ; ರಾಜಕೀಯ ಪಕ್ಷಗಳಿಗೆ ಸೂಚನೆ ಪಂಚಾಯಿತಿ ಚುನಾವಣೆ; ರಾಜಕೀಯ ಪಕ್ಷಗಳಿಗೆ ಸೂಚನೆ

ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಪಡೆಯುವ ಮೂಲಕ ಗ್ರಾಮೀಣ ಮಟ್ಟದಲ್ಲಿ ಪಕ್ಷ ಬಲ ಪಡಿಸಬೇಕು ಎಂದು ಪ್ರಯತ್ನ ನಡೆಸಲಾಗುತ್ತಿದೆ. ಕಾಂಗ್ರೆಸ್ ಸಹ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನ ಮುಂದುವರೆಸಿದೆ.

ಗ್ರಾಮ ಪಂಚಾಯಿತಿ ಚುನಾವಣೆ; ಪ್ರಚಾರಕ್ಕೆ ಮಾರ್ಗಸೂಚಿ ಗ್ರಾಮ ಪಂಚಾಯಿತಿ ಚುನಾವಣೆ; ಪ್ರಚಾರಕ್ಕೆ ಮಾರ್ಗಸೂಚಿ

ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದು ಉಪ ಚುನಾವಣೆಯಲ್ಲಿ ಗೆದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟದಲ್ಲಿ ಕಾರ್ಮಿಕ ಸಚಿವರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿದ್ದಾರೆ. ಉಸ್ತುವಾರಿಯಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದು.

ಗ್ರಾಮ ಪಂಚಾಯಿತಿ; ಅಭ್ಯರ್ಥಿಗೆ ಲಾಭದಾಯಕ ಹುದ್ದೆ ಮಾಹಿತಿ ಗ್ರಾಮ ಪಂಚಾಯಿತಿ; ಅಭ್ಯರ್ಥಿಗೆ ಲಾಭದಾಯಕ ಹುದ್ದೆ ಮಾಹಿತಿ

ಕಾಂಗ್ರೆಸ್ ಪಕ್ಷದಲ್ಲಿದ್ದ ಹೆಬ್ಬಾರ್

ಕಾಂಗ್ರೆಸ್ ಪಕ್ಷದಲ್ಲಿದ್ದ ಹೆಬ್ಬಾರ್

ಈ ಹಿಂದೆ ಗ್ರಾಮ ಪಂಚಾಯಿತಿ ಚುನಾವಣೆ ನಡೆದ ವೇಳೆಯಲ್ಲಿ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ ಪಕ್ಷದಲ್ಲಿದ್ದರು. ಆಗ ಕೇವಲ ತಮ್ಮ ಕ್ಷೇತ್ರದಲ್ಲಿ ಬೆಂಬಲಿತರನ್ನ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಬರಲು ಪ್ರಯತ್ನ ನಡೆಸುತ್ತಿದ್ದರು. ಆದರೆ, ಹೆಬ್ಬಾರ್ ಈಗ ಬಿಜೆಪಿಗೆ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲಾ ಮಟ್ಟದ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ.

ಜಿಲ್ಲೆಯ ಮೇಲಿನ ಹಿಡಿತ

ಜಿಲ್ಲೆಯ ಮೇಲಿನ ಹಿಡಿತ

ಶಿವರಾಮ್ ಹೆಬ್ಬಾರ್ ನೇತೃತ್ವದಲ್ಲಿಯೇ ಈಗ ಚುನಾವಣೆ ಎದುರಿಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಮೂಲಕ ರಾಜ್ಯ ಮಟ್ಟದ ನಾಯಕರಿಗೂ ಜಿಲ್ಲೆಯ ಮೇಲಿನ ತನ್ನ ಹಿಡಿತವನ್ನು ತೋರಿಸುವುದು ಹೆಬ್ಬಾರ್‌ ಅವರಿಗೆ ಅನಿವಾರ್ಯವಾಗಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಅಧಿಕಾರ ಹಿಡಿದರೆ ಮುಂದಿನ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ವಿಧಾನ ಪರಿಷತ್, ವಿಧಾನಸಭೆ ಚುನಾವಣೆಗೆ ಸಹಕಾರಿಯಾಗಲಿದೆ.

ಪಂಚಾಯಿತಿ ಫಲಿತಾಂಶ

ಪಂಚಾಯಿತಿ ಫಲಿತಾಂಶ

ಗ್ರಾಮೀಣ ಮಟ್ಟದಲ್ಲಿ ಹಿಡಿತ ಸಾಧಿಸಿ ಮುಂದಿನ ದಿನದಲ್ಲಿ ಜಿಲ್ಲಾ ಪಂಚಾಯತಿ ಅಧಿಕಾರ ಸಹ ಬಿಜೆಪಿ ಹಿಡಿಯಬೇಕು ಎನ್ನುವ ಯೋಚನೆ ಈಗಿನಿಂದಲೇ ಮಾಡುತ್ತಿದ್ದು, ಹೆಬ್ಬಾರ್ ಭವಿಷ್ಯದಲ್ಲಿ ಜಿಲ್ಲೆಯಲ್ಲಿ ತನ್ನ ನಾಯಕತ್ವ ಇನ್ನಷ್ಟು ಗಟ್ಟಿ ಮಾಡಿಕೊಳ್ಳಲು ಈ ಪಂಚಾಯತಿ ಚುನಾವಣೆಯ ಫಲಿತಾಂಶ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಹೆಬ್ಬಾರ್ ಹೆಚ್ಚಿನ ಸ್ಥಾನ ಗೆಲ್ಲಿಸಿಕೊಂಡು ಬರಲು ಪ್ರಯತ್ನ ನಡೆಸಿದ್ದಾರೆ.

Recommended Video

ಬೆಂಗಳೂರು: ಚಿಂತಕರ ಚಾವಡಿ ಪರಿಷತ್ ನಲ್ಲಿ ಗಲಾಟೆ-ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ | Oneindia Kannada
ಕ್ಷೇತ್ರ ಮರೆಯದ ಹೆಬ್ಬಾರ್

ಕ್ಷೇತ್ರ ಮರೆಯದ ಹೆಬ್ಬಾರ್

ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ತಿರುಗಾಟದ ಜೊತೆಗೆ ಶಿವರಾಮ್ ಹೆಬ್ಬಾರ್ ಯಲ್ಲಾಪುರ ಕ್ಷೇತ್ರವನ್ನು ಮರೆತಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆಸುವವರು ಯಾರೂ ಕಾಣುತ್ತಿಲ್ಲ. ಹೆಬ್ಬಾರ್ ಏಕಚಕ್ರಾಧಿಪತಿಯಾಗಿ ಸಾಗುತ್ತಿದ್ದು, ಈ ಬಾರಿ ಹೆಬ್ಬಾರ್ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಪಂಚಾಯತಿ ಚುನಾವಣೆಯಲ್ಲಿ ಗೆಲ್ಲುತ್ತಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಪಂಚಾಯತಿ ಚುನಾವಣೆಯನ್ನು ನಿರ್ಲಕ್ಷ ಮಾಡದೇ ಗಂಭೀರವಾಗಿ ತೆಗೆದುಕೊಂಡಿದ್ದಾರೆ.

English summary
Gram panchayat election big challenge for minister Shivaram Hebbar. This is the 1st election after he took charge as in-charge minister of Uttara Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X