• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲೋಕಲ್ ಫೈಟ್: ಉತ್ತರ ಕನ್ನಡದಲ್ಲಿ ಕಾಂಗ್ರೆಸ್ ಹಿಂದಿಕ್ಕಿದ ಬಿಜೆಪಿ

By ದೇವರಾಜ್ ನಾಯ್ಕ್
|

ಕಾರವಾರ, ಡಿಸೆಂಬರ್ 30: ಉತ್ತರ ಕನ್ನಡ ಜಿಲ್ಲೆಯ 227 ಗ್ರಾಮ ಪಂಚಾಯತಿಗಳಿಗೆ ಎರಡು ಹಂತದಲ್ಲಿ ನಡೆದಿದ್ದ ಚುನಾವಣೆಯ ಮತ ಎಣಿಕೆ ಸದ್ಯ ಪ್ರಗತಿಯಲ್ಲಿದೆ. ಈಗಾಗಲೇ ಬಂದಿರುವ ಫಲಿತಾಂಶಗಳ ಆಧಾರದಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಕ್ಷಗಳು ಬರುವುದಿಲ್ಲವಾದರೂ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೆಂಬಲಿತರು ಪಕ್ಷೇತರರಾಗಿ ಪಕ್ಷದ ತೀರ್ಮಾನದಂತೆ ಸ್ಪರ್ಧಾ ಕಣದಲ್ಲಿದ್ದರು. ಈ ಪೈಕಿ ಸಾಕಷ್ಟು ಮಂದಿ ಬಂಡಾಯ ಅಭ್ಯರ್ಥಿಗಳೂ ಕಣದಲ್ಲಿದ್ದು, ಪಕ್ಷದ ತೀರ್ಮಾನದಂತೆ ಕಣಕ್ಕಿಳಿದಿದ್ದವರಿಗೆ ಪಕ್ಷಗಳ ಕಾರ್ಯಕರ್ತರು ಪ್ರಚಾರ ನಡೆಸಿ, ಗೆಲುವಿಗಾಗಿ ಶ್ರಮಿಸಿದ್ದರು.

ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿ ಸಾವನ್ನಪ್ಪಿದ್ದ ಅಭ್ಯರ್ಥಿ ಗೆಲುವು

ಒಟ್ಟು 2,662 ಸ್ಥಾನಗಳ ಪೈಕಿ 184 ಮಂದಿ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದರು. 11 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆಯಾಗಿದೇ ಖಾಲಿ ಉಳಿದಿದ್ದು, 2,467 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ 7,187 ಅಭ್ಯರ್ಥಿಗಳಿಗೆ ಮತದಾರರು ನೀಡಿದ್ದ ಮತಗಳ ಎಣಿಕೆ ಪ್ರಗತಿಯಲ್ಲಿದೆ.

ಈಗಾಗಲೇ ಶೇ.30ರಷ್ಟು ಮತ ಎಣಿಕೆ ಕಾರ್ಯ ಮುಗಿದಿದ್ದು, ಈ ಪೈಕಿ ಬಹುತೇಕ ಕಡೆ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಮೊದಲಿನಂದಲೂ ಬಹುತೇಕ ಕ್ಷೇತ್ರಗಳಲ್ಲಿ ಸ್ಥಾನಗಳನ್ನು ಕಾಯ್ದುಕೊಂಡು ಬಂದಿದ್ದ ಕಾಂಗ್ರೆಸ್ ಈ ಬಾರಿ ದ್ವಿತೀಯ ಸ್ಥಾನಕ್ಕೆ ಇಳಿದಿದೆ. ಜೆಡಿಎಸ್ ನಗಣ್ಯವಾಗಿದ್ದು, ಅತೀ ಕಡಿಮೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

   ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಬೆನ್ನಲ್ಲೆ ಡಿಕೆಶಿ ಮೆಗಾ ಪ್ಲಾನ್! | Oneindia Kannada

   ಒಟ್ಟಾರೆಯಾಗಿ ರಾತ್ರಿಯ ಹೊತ್ತಿಗೆ ಮತ ಎಣಿಕೆಯ ಸ್ಪಷ್ಟ ಚಿತ್ರಣ ಸಿಗಲಿದ್ದು, ಎಣಿಕೆ ಪೂರ್ಣಗೊಂಡ ಬಳಿಕ ಯಾರಿಗೆ ಗೆಲುವು, ಯಾರಿಗೆ ಸೋಲು ಎಂಬುದು ತಿಳಿದು ಬರಲಿದೆ.

   English summary
   The vote counting for 227 Gram Panchayats in Uttara Kannada District are currently underway. Based on the results already, the BJP is leading in the district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X