ಪ್ರವಾಹದ ಭೀತಿ: ಕದ್ರಾ ಜಲಾಶಯದ ಅಕ್ಕಪಕ್ಕದ ನಿವಾಸಿಗಳಿಗೆ ಪ್ರಮುಖ ಸೂಚನೆ
Kadra Dam: ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಕ್ಕೆ ನದಿ ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಲಾಶಯಗಳಿಗೂ ಜೀವಕಳೆ ಬಂದಂತಾಗಿದೆ. ಹಾಗೆಯೇ ಇದೀಗ ಕದ್ರಾ ಜಲಾಶಯವೂ ಕೂಡ ಭರ್ತಿಯಾಗುವ ಹಂತವನ್ನು ತಲುಪಿರುವ ಹಿನ್ನೆಲೆ ಈ ಭಾಗದ ಸುತ್ತಮುತ್ತಲಿನ ಜನರಿಗೆ ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಈ ಭಾಗದ ಹಳ್ಳ-ಕೊಳ್ಳ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಜಲಾನಯನ ಪ್ರದೇಶದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

ಇನ್ನು ಕದ್ರಾ ಜಲಾಶಯದ ಗರಿಷ್ಠ ಮಟ್ಟವು 34.50 ಮೀಟರ್‌ಗಳಾಗಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟವು 29.70 ಮೀಟರ್ ತಲುಪಿದೆ. ಜಲಾಶಯಕ್ಕೆ ಒಳಹರಿವಿನ ಪ್ರಮಾಣ 30,000 ಕ್ಯೂಸೆಕ್ಸ್ ಆಗಿರುರುವುದರಿಂದ ಈ ಭಾಗದ ಜನರಿಗೆ ಪ್ರವಾದ ಭೀತಿ ಶುರುವಾಗಿದೆ.
ಇನ್ನು ಮುಂಜಾಗ್ರತಾ ಕ್ರಮವಾಗಿ ಕದ್ರಾ ಅಣೆಕಟ್ಟಿನ ಕೆಳಭಾಗದಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ. ಈ ಮಳೆಗಾಲದ ಅವಧಿಯಲ್ಲಿ ಜಲಾಶಯದ ಮಟ್ಟವು ಏರಿಕೆಯಾದಗಲೆಲ್ಲ ಯಾವುದೇ ಸಮಯದಲ್ಲಾದರೂ ನೀರನ್ನು ಹೊರಗಡೆ ಬಿಡಲಾಗುವುದು.
ಆದ್ದರಿಂದ ಸಾರ್ವಜನಿಕ ಸುರಕ್ಷತಾ ಹಿತದೃಷ್ಟಿಯಿಂದ ಅಣೆಕಟ್ಟೆಯ ಕೆಳಭಾಗದಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಹಾಗೂ ಪ್ರಾಣಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸಾಗಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಈ ಮೂಲಕ ಕೋರಲಾಗಿದೆ. ದೋಣಿ ಸಂಚಾರ, ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ಸಡೆಸದಂತೆ ಸೂಚನೆ ನೀಡಲಾಗಿದೆ.
ರಸ್ತೆಗಳು ಜಲಾವೃತ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಹಾಗೆಯೇ ಬೆಳಗಾವಿ ಜಿಲ್ಲೆಯಲ್ಲೂ ಕೂಡ ಸುರಿದ ಮಳೆ ಅವಾಂತರವನ್ನೇ ಸೃಷ್ಟಿಸಿದೆ.
ಸುರಿದ ಧಾರಾಕಾರ ಮಳೆಯಿಂದಾಗಿ ಬೆಳಗಾವಿಯ ಹಲವೆಡೆ ರಸ್ತೆಗಳು ಕೆರೆಯಂತಾಗಿದ್ದು, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಮತ್ತೊಂದೆಡೆ ನಗರದ ಗಾಂಧಿನಗರ ಬಳಿ ರಾಷ್ಟ್ರೀಯ ಹೆದ್ದಾರಿಯ ಬ್ರೀಡ್ಜ್ ಕೆಳಗೆ ಸಂಪೂರ್ಣ ಜಲಾವೃತವಾಗಿದ್ದು, ಪರಿಣಾ ಸಂಚಾರ ಅಸ್ತವ್ಯಸ್ತವಾಗಿದೆ.












Click it and Unblock the Notifications