ಭಟ್ಕಳದಲ್ಲಿ ಭಾರೀ ಮಳೆ; ಗುಡ್ಡ ಕುಸಿತ, ಪಟ್ಟಣ ಜಲಾವೃತ

ಕಾರವಾರ, ಆಗಸ್ಟ್‌, 02: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಕ್ಕೆ ದೊಡ್ಡ ಅನಾಹುತ ಸೃಷ್ಟಿಯಾಗಿದೆ. ಭಟ್ಕಳದ ಕೆಲ ಪ್ರದೇಶಗಳು ಸಂಪೂರ್ಣ ಮಳೆ ನೀರಿನಲ್ಲಿ ಮುಳುಗಡೆಯಾಗಿದ್ದು, ಮುಟ್ಟಳ್ಳಿ ಗ್ರಾಮದ ಮನೆಯೊಂದರ ಮೇಲೆ ಗುಡ್ಡ ಕುಸಿದಿದ್ದು, ತಾಯಿ ಮತ್ತು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ಕೆಲ ದಿನಗಳಿಂದ ಉತ್ತರ ಕನ್ನಡದಲ್ಲಿ ಬಿಸಿಲು ಇತ್ತು. ಇದೀಗ ಮಳೆರಾಯನ ಅಬ್ಬರ ಜೋರಾಗಿದೆ. ಸೋಮವಾರ ಸಂಜೆಯಿಂದ ಮಂಗಳವಾರ ಮುಂಜಾನೆವರೆಗೂ ಮಳೆ ಸುರಿದ ಪರಿಣಾಮ ಭಟ್ಕಳ ಪಟ್ಟಣ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಡೆಯಾಗಿದೆ.

ಮಣ್ಣಕುಳ್ಳಿ, ಚೌಥನಿ ಮೂಡಳ್ಳಿ, ಮೂಡಭಟ್ಕಳ, ಮುಟ್ಟಳ್ಳಿ, ಮುಂಡೊಳ್ಳಿ ಗ್ರಾಮಗಳು ಸಂಪೂರ್ಣ ಜಲಾವೃತಗೊಂಡಿದ್ದು, ಇನ್ನು ಹಲವು ಪ್ರದೇಶಗಳಿಗೆ ನೀರು ನುಗ್ಗುತ್ತಲ್ಲೇ ಇದೆ. ಜನರು ಸಂಕಷ್ಟಕ್ಕೆ ಸಿಲುಕಿದ್ದು, ಉಳಿದುಕೊಳ್ಳಲು ಸೂರು ಇಲ್ಲದಂತಾಗಿದೆ.

ಇನ್ನು ಕೆಲವು ಮನೆಗಳು ಕುಸಿಯುವ ಹಂತದಲ್ಲಿದ್ದು, ಅಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅದರಲ್ಲೂ ಬೆಟ್ಟ, ಗುಡ್ಡಗಳ ಪ್ರದೇಶದಲ್ಲಿ ವಾಸವಿರುವ ಜನರ ಬದುಕು ಅತಂತ್ರವಾಗಿದೆ. ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಜಿಲ್ಲಾಡಳಿತ ಕಾಳಜಿ ಕೇಂದ್ರ ತೆರೆದಿದೆ.

 ನಾಲ್ವರು ಶವವಾಗಿ ಪತ್ತೆ

ನಾಲ್ವರು ಶವವಾಗಿ ಪತ್ತೆ

ಮುಟ್ಟಳ್ಳಿ ಗ್ರಾಮದಲ್ಲಿ ಲಕ್ಷ್ಮಿ ನಾಯ್ಕ ಎನ್ನುವವರ ಮನೆಯ ಮೇಲೆ ಗುಡ್ಡ ಕುಸಿದಿದೆ. ಇದರ ಪರಿಣಾಮ ಮನೆಯಲ್ಲಿ ಮಲಗಿದ್ದ ನಾಲ್ವರು ಮೃತಪಟ್ಟಿದ್ದಾರೆ. 60 ವರ್ಷದ ಲಕ್ಷ್ಮೀ ನಾರಾಯಣ ನಾಯ್ಕ, 45 ವರ್ಷದ ಮಗಳು ಲಕ್ಷ್ಮೀ ನಾಯ್ಕ , 38 ವರ್ಷದ ನಾರಾಯಣ ನಾಯ್ಕ, 16 ವರ್ಷದ ಪ್ರವೀಣ್ ರಾಮಕೃಷ್ಣ ನಾಯ್ಕ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಸ್ಥಳೀಯರು ಸೇರಿದಂತೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರತೆಗೆದಿದ್ದಾರೆ.

 ನೀರಲ್ಲಿ ಮುಳುಗಿದ ಜನರ ಬದುಕು

ನೀರಲ್ಲಿ ಮುಳುಗಿದ ಜನರ ಬದುಕು

ಭಟ್ಕಳ ಪಟ್ಟಣ ಸಂಪೂರ್ಣ ಮುಳುಗಡೆಯಾಗಿ ರಸ್ತೆಗಳಲ್ಲಿ ನೀರು ನದಿಯಂತೆ ಹರಿದು ಹೋಗುತ್ತಿದೆ. ಮನೆ, ಅಂಗಡಿ ಮುಂಗಟ್ಟುಗಳು ಜಲಾವೃತಗೊಂಡಿವೆ.‌ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಜಲಾವೃತಗೊಂಡ ಕಾರಣ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಭಟ್ಕಳದ ಕಡೆ ಪ್ರಯಾಣಕ್ಕೆ ನಿರ್ಬಂಧ ಹೇರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ದಶಕಗಳ ಬಳಿಕ ಭಟ್ಕಳದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಇಲ್ಲಿನ ಹಿರಿಯರು ಹೇಳುತ್ತಿದ್ದಾರೆ. ಭಾರೀ ಮಳೆಗೆ ಇಲ್ಲಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, ಎಸ್‌ಡಿಆರ್‌ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಮಳೆಯಲ್ಲಿ ಸಿಲುಕಿದವರನ್ನು ದಡ ಸೇರಿಸುವ ಕೆಲಸವನ್ನು ಮಾಡುತ್ತಿವೆ. ಶಾಸಕ ಸುನಿಲ್ ನಾಯ್ಕ ಕೂಡ ಜಲಾವೃತಗೊಂಡ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

 ಭಾರೀ ಮಳೆಯಾಗುವ ಮುನ್ಸೂಚನೆ

ಭಾರೀ ಮಳೆಯಾಗುವ ಮುನ್ಸೂಚನೆ

ಹವಾಮಾನ ಇಲಾಖೆ ಇನ್ನು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ಸಾಕಷ್ಟು ಮುಂಜಾಗ್ರಾತಾ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ 4 ದಿನಗಳ ಕಾಲ ಜಿಲ್ಲೆಯಲ್ಲಿ ಮಳೆ ಮುಂದುವರೆಯಲಿದ್ದು, ಬಂದರು ಪ್ರದೇಶಗಳಿಗೆ ನಿರ್ಬಂಧ ಹೇರಲಾಗಿದೆ. ಬಂದರು ಪ್ರದೇಶಗಳಲ್ಲಿ ಯಾವುದೇ ರೀತಿಯಾದ ಚಟುವಟಿಕೆಗಳನ್ನು ಮಾಡದಂತೆ ಜಿಲ್ಲಾಡಳಿತ ಸೂಚಿಸಿದೆ.

 ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಆಗಸ್ಟ್‌ 2ರಿಂದ ಆಗಸ್ಟ್‌ 6ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ನದಿ ಹಾಗೂ ಕಡಲತೀರದ ಬಳಿ ತೆರಳದಂತೆ ಅಲ್ಲಿನ ಜನರಿಗೆ ಸೂಚಿಸಲಾಗಿದೆ. ಯಾಂತ್ರೀಕೃತ ಮೀನುಗಾರಿಕಾ ನಿಷೇಧವು ಮುಕ್ತಾಯವಾದ ಬೆನ್ನಲ್ಲೇ ಮಳೆ ಜೋರಾಗಿದ್ದು, ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಸೋಮವಾರದಿಂದ ಮೀನುಗಾರಿಕೆ ಆರಂಭವಾಗಿ ಹಲವು ದೋಣಿಗಳು ಆಳ ಸಮುದ್ರಕ್ಕೆ ಹೋಗಿದ್ದವು. ಮೀನುಗಾರರು ಹೆಚ್ಚಿನ ಪ್ರಮಾಣದಲ್ಲಿ ಮೀನು ಸಿಗುವ ನಿರೀಕ್ಷೆಯಲ್ಲಿರುವಾಗಲೇ ಮಳೆರಾಯ ಅಬ್ಬರಿಸಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+