ಕಾರು-ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತ

ಕಾರವಾರ, ನವೆಂಬರ್ 1: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗೇರುಸೊಪ್ಪ ಬಳಿ ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 11 ಮಂದಿಗೆ ಗಂಭೀರ ಗಾಯವಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಉತ್ತರಕನ್ನಡ‌ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಬಳಿ ಈ ಭೀಕೆ ಅಪಘಾತ ಸಂಭವಿಸಿದೆ. ಈ ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆ ಪಕ್ಕದ ಕಂದಕಕ್ಕೆ ಬಸ್‌ ಪಲ್ಟಿ ಆಗಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ಬರುತ್ತಿದ್ದ ವೇಳೆ ಕೆಎಸ್ಆರ್‌ಟಿಸಿ ಬಸ್ ಅಪಘಾತಕ್ಕೆ ಒಳಗಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Honnavar Accident One Death 11 Injured as Car Collides with KSRTC Bus in Uttara Kannada

ಸುಳಿಮನೆ ಮುರ್ಕಿ ಕ್ರಾಸ್‌ನಲ್ಲಿ ನಿಯಂತ್ರಣ ತಪ್ಪಿ ಕಾರು-ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದುಕೊಂಡಿವೆ. ಈ ವೇಳೆ ಘಟನೆಯಲ್ಲಿ ಗಾಯಗೊಂಡವರನ್ನು 108 ಹಾಗೂ ಖಾಸಗಿ ಅಂಬುಲೆನ್ಸ್ ಮೂಲಕ ಹೊನ್ನಾವರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅಪಘಾತಕ್ಕೀಡಾದ ಸಾರಿಗೆ ಬಸ್‌ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಇನ್ನೂ ಈ ಘಟನೆ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಮೂವರು ಸಾವು: ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಈ ಭೀಕರ ಅಪಘಾತದ ವೇಳೆ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ಇತ್ತೀಚೆಗಷ್ಟೇ ನಡೆದಿದೆ. ಅಸಾದುಲ್ಲ (35), ಸಾಧಿಕ್ (31), ಫೈರೋಜ್ (33) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಮೂವರೂ ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ಹಿಂದಿರುಗುವ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.

ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದು, ಈ ಹಿನ್ನಂತೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡ ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿ ಮಾಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+