ಐ.ಎಸ್.ಡಿ ಕರೆ ಪರಿವರ್ತನೆ ಜಾಲ; ಭಟ್ಕಳದಲ್ಲಿ ಓರ್ವನ ಬಂಧನ

ಭಟ್ಕಳ, ಜೂನ್ 14; ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.

ಬಂಧಿತ ಆರೋಪಿಯನ್ನು ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್ ಮುಕ್ತೇಸರ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್​​​​​​​​​​ನಲ್ಲಿ ಜಾಲವೊಂದು ಅನಧಿಕೃತ ಟೆಲಿಫೋನ್ ಎಕ್ಸ್​​​ಚೇಂಜ್ ಮೂಲಕ ಐಎಸ್​​ಡಿ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ, ದೂರಸಂಪರ್ಕ ಇಲಾಖೆಯನ್ನು ವಂಚಿಸುತ್ತಿತ್ತು.

ಈ ಸಂಬಂಧ ಇಬ್ರಾಹಿಂ ಮತ್ತು ಗೌತಮ್ ಎಂಬುವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಬಂಧನವಾಗುತ್ತಿದ್ದಂತೆ ನಿಸಾರ್ ಬೆಂಗಳೂರಿನಿಂದ ಭಟ್ಕಳಕ್ಕೆ ಬಂದಿದ್ದ. ಆರೋಪಿ ನಿಸಾರ್ ಒಂದೇ ಬಾರಿಗೆ 32 ಸಿಮ್ ಕಾರ್ಡ್​ಗಳನ್ನು ಬಳಸುವ ಸಿಮ್ ಬಾಕ್ಸ್ ಹೊಂದಿದ್ದ ಎಂದು ತಿಳಿದುಬಂದಿದೆ.

 Illegal SIMBOX Racket One Arrested In Bhatkal

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಂಧಿತರಾಗಿರುವ ಇಬ್ರಾಹಿಂ ಹಾಗೂ ಗೌತಮ್ ಬಾಯ್ಬಿಟ್ಟ ಮಾಹಿತಿ ಆಧರಿಸಿ ಎಟಿಸಿ ತಮಿಳುನಾಡು‌ ಮೂಲದ ನಾಲ್ವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.

ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಡಿಸಲು ಬೇಕಾದ ಸಿಮ್ ಕಾರ್ಡ್‌ಗಳನ್ನು ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಂದ ಪಡೆದು ಕೊರಿಯರ್ ಮುಖಾಂತರ ತಲುಪಿಸುತ್ತಿದ್ದರು ಎಂದು ತಿಳಿದುಬಂದಿದೆ‌. ಈ ರೀತಿ ಇದುವರೆಗೂ ಎಷ್ಟು ಸಿಮ್ ಕಾರ್ಡ್‌ಗಳನ್ನು ಪಡೆಯಲಾಗಿದೆ?, ಕೃತ್ಯದಲ್ಲಿ ಇನ್ನಿತರರ ಪಾತ್ರಗಳ ಬಗ್ಗೆ ಆರೋಪಿಗಳಿಂದ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಪಾಕ್ ನಿಂದಲೂ ಕರೆಗಳು; ಪಾಕಿಸ್ತಾನ, ಯುಎಇ ಸೇರಿದಂತೆ ವಿವಿಧ ದೇಶಗಳಿಂದ ಬರುವ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡುವ ದಂಧೆಯಲ್ಲಿ ಆರೋಪಿಗಳು ತೊಡಗಿಸಿಕೊಂಡಿದ್ದು ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು‌‌.

ಪಾಕಿಸ್ತಾನ, ದುಬೈನಿಂದ ಭಾರತೀಯ ಸೇನಾಧಿಕಾರಿಗಳ ಕಚೇರಿಗಳಿಗೆ ತಾವು ನಿವೃತ್ತ ಮಿಲಿಟರಿ ಅಧಿಕಾರಿಗಳು ಪರಿಚಯಿಸಿಕೊಂಡು ಫೋನ್ ಮಾಡುತ್ತಿದ್ದ ಅಪರಿಚಿತರು ಕರ್ನಲ್ ಸೇರಿದಂತೆ ಕೆಲ ಪ್ರಮುಖ ಮಿಲಿಟರಿ ಅಧಿಕಾರಿಗಳ ವಿಳಾಸ ಕೇಳುತ್ತಿದ್ದರು. ಉಗ್ರಗಾಮಿಗಳ ಜೊತೆ ನೇರಾನೇರ ಸಂಪರ್ಕ ಹೊಂದಿದ್ದರಾ? ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ‌.

15 ಸಿಮ್ ಬಾಕ್ಸ್ ಜಪ್ತಿ; ಈಗಾಗಲೇ ಆರೋಪಿಗಳಿಂದ 30 ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಅಳವಡಿಸಲಾಗಿದ್ದ, 960 ಸಿಮ್ ಕಾರ್ಡ್ ಜಪ್ತಿ ಮಾಡಿಕೊಂಡಿದ್ದ ಎಟಿಸಿ ಅಧಿಕಾರಿಗಳು ಮತ್ತೆ ಬಿಟಿಎಂ ಲೇಔಟ್‌ನಲ್ಲಿದ್ದ ಇಬ್ರಾಹಿಂಗೆ ಸೇರಿದ ಜಾಗದಿಂದ ಇನ್ನೂ 15 ಸಿಮ್ ಬಾಕ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+