ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಡಿನಲ್ಲಿದ್ದ 6.70 ಲಕ್ಷ ಮೌಲ್ಯದ ಗೋವಾ ಮದ್ಯ ವಶಕ್ಕೆ!

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಜನವರಿ 19: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಅರಣ್ಯದಲ್ಲಿ ಅಡಗಿಸಿಡಲಾಗಿದ್ದ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದುಕೊಂಡ ಮದ್ಯದ ಮೌಲ್ಯ ಸುಮಾರು 6,70,800 ರೂಪಾಯಿ ಎಂದು ಅಂದಾಜಿಸಲಾಗಿದೆ.

ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿರುವ ಚೆಕ್ ಪೋಸ್ಟ್ ಸಮೀಪದ ಅರಣ್ಯದಲ್ಲಿ ಅಕ್ರಮವಾಗಿ ಮದ್ಯವನ್ನು ಅಡಗಿಸಿ ಇಡಲಾಗಿತ್ತು. ಗೋವಾ ರಾಜ್ಯದ ಪರವಾನಗಿ ಹೊಂದಿದ್ದ ಮದ್ಯಗಳನ್ನು ದಾಸ್ತಾನು ಮಾಡಿರುವ ಬಗ್ಗೆ ಖಚಿತವಾದ ಮಾಹಿತಿಯನ್ನು ಪಡೆದ ಅಬಕಾರಿ ಇಲಾಖೆ ಅಧಿಕಾರಿಗಳಿ ದಾಳಿ ಮಾಡಿದ್ದಾರೆ.

ಹುಬ್ಬಳ್ಳಿಯಿಂದ ಗೋವಾ, ಕೊಚ್ಚಿಗೆ ಜ.21ರಿಂದ ನೇರ ವಿಮಾನ ಹುಬ್ಬಳ್ಳಿಯಿಂದ ಗೋವಾ, ಕೊಚ್ಚಿಗೆ ಜ.21ರಿಂದ ನೇರ ವಿಮಾನ

ಒಟ್ಟು 1,423 ಲೀಟರ್ ಗೋವಾ ಮದ್ಯ ಹಾಗೂ 228 ಲೀಟರ್ ಗೋವಾ ಬಿಯರ್‌ ಅನ್ನು ಕಾಡಿನಲ್ಲಿ ಅಡಗಿಸಿಡಲಾಗಿತ್ತು. ಗೋವಾದಲ್ಲಿ ಮದ್ಯದ ದರ ಕಡಿಮೆ‌ ಇದ್ದು, ಅದನ್ನು ಅಕ್ರಮವಾಗಿ ಕಾರವಾರ ಸೇರಿದಂತೆ ಗಡಿ ಭಾಗಗಳಿಗೆ ತಂದು ಕರ್ನಾಟಕದ ದರದಲ್ಲಿ ಮಾರಾಟ ಮಾಡಿ ಹಣ ಗಳಿಸುವ ದಂಧೆ ನಡೆಯುತ್ತಿದೆ.

ಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಮದ್ಯ ಮಾರಾಟ ಇಳಿಕೆ: ಅಬಕಾರಿ ಇಲಾಖೆಗೆ ನಷ್ಟಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಮದ್ಯ ಮಾರಾಟ ಇಳಿಕೆ: ಅಬಕಾರಿ ಇಲಾಖೆಗೆ ನಷ್ಟ

Illegal Storage Of Goa Liquor Found And Seized

Recommended Video

Special Report :Karnataka-Maharashtra ಗಡಿವಿವಾದ ಬೂದಿ ಮುಚ್ಚಿದ ಕೆಂಡ- ಇದು ಇಂದು ನಿನ್ನೆಯ ವಿವಾದವಲ್ಲ..!

ಅಕ್ರಮವಾಗಿ ಗೋವಾದಿಂದ ಮದ್ಯವನ್ನು ಕರ್ನಾಟಕದ ಗಡಿಯೊಳಗೆ ತಂದು ದಾಸ್ತಾನು ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಅಬಕಾರಿ ಇಲಾಖೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

English summary
Officials of Karwar excise department found illegal storage of Goa liquor and seized. Liquor worth is around 6 lakh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X