ಕಾರವಾರದಲ್ಲಿ ನಿರ್ಮಾಣವಾಗಲಿದೆ ಇಂಟರ್ ನ್ಯಾಷನಲ್ ಸ್ಟೇಡಿಯಮ್!
ಕಾರವಾರ, ಡಿಸೆಂಬರ್ 06: ತಾಲೂಕಿನ ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದ 11 ಎಕರೆ ಸರ್ಕಾರಿ ಜಾಗದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ನಿರ್ಮಿಸಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ ಗೆ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ಮಂಜೂರಾತಿ ನೀಡಿದೆ.
ಸುಮಾರು ಒಂದು ವರ್ಷದ ಹಿಂದೆ ಕಾರವಾರಕ್ಕೆ ಒಂದು ಸುಸಜ್ಜಿತ ಅಂತರಾಷ್ಟ್ರೀಯ ಕ್ರಿಕೇಟ್ ಕ್ರೀಡಾಂಗಣದ ಅವಶ್ಯಕತೆಯನ್ನು ಅರಿತ ಅಂದಿನ ಶಾಸಕ ಸತೀಶ ಸೈಲ್, ರಾಜ್ಯ ಕ್ರಿಕೆಟ್ ಸಂಸ್ಥೆಯೊಡನೆ ಸಮಾಲೋಚಿಸಿ ಅವರ ಮನವೊಲಿಸಿದ್ದರು.
ಈ ಬಗ್ಗೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರೊಂದಿಗೆ ಸಮಾಲೋಚಿಸಿ, ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದಲ್ಲಿ ಲಭ್ಯವಿದ್ದ ಸರಕಾರಿ ಜಾಗದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ ನಿರ್ಮಿಸಲು ಜಿಲ್ಲಾಡಳಿತವು ಒಪ್ಪಿಗೆ ನೀಡುವಂತೆ ಶ್ರಮವಹಿಸಿದ್ದರು.

ತದನಂತರ ರಾಜ್ಯ ಕ್ರಿಕೆಟ್ ಅಕೆಡೆಮಿ ಸಂಸ್ಥೆ ವತಿಯಿಂದ ಉನ್ನತ ಅಧಿಕಾರಿಗಳು ಕಾರವಾರದ ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದ ಸರಕಾರಿ ಜಾಗವನ್ನು ಪರೀಕ್ಷಿಸಿ, ತಮಗೆ ಅವಶ್ಯಕತೆ ಇರುವ 11 ಎಕರೆ ಜಾಗವನ್ನು ಗುರುತಿಸಿ ಜಿಲ್ಲಾಡಳಿತಕ್ಕೆ ತಿಳಿಸಿದ್ದರು. ಆ ಪ್ರಕಾರ ಮುಂದಿನ ಕಾರ್ಯಸೂಚಿಯಂತೆ ರಾಜ್ಯ ಕಂದಾಯ ಇಲಾಖೆಯಿಂದ ಸಾವರಪೈ ಪ್ರದೇಶದ 11 ಎಕರೆ ಜಾಗವನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗೆ ವಾರ್ಷಿಕ ಬಾಡಿಗೆಯ ಮೇಲೆ ಬೋಗ್ಯಕ್ಕೆ ನೀಡಿದ್ದರು.
ಮುಂದುವರಿದು, ಜಿಲ್ಲಾಡಳಿತ ಸದ್ರಿ 11 ಎಕರೆ ಜಾಗವನ್ನು ಕೆ.ಎಸ್.ಸಿ.ಎ. ಗೆ ಬೋಗ್ಯಕ್ಕೆ ನೀಡುವ ಬಗ್ಗೆ ಸೂಕ್ತ ಕರಾರು ಪತ್ರವನ್ನು ತಯಾರಿಸಿ ಅನುಮೋದನೆಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದರು.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಧ್ಯತೆ- ಬಾಧ್ಯತೆಗಳನ್ನು ಗಣನೆಗೆ ತೆಗೆದುಕೊಂಡು, ಜಿಲ್ಲಾಡಳಿತ ಕಳುಹಿಸಿರುವ ಪ್ರಸ್ತಾವನೆಗೆ ಅಂತಿಮ ಅನುಮೋದನೆಯನ್ನು ನೀಡಿದರು. ಆ ಮೂಲಕ ಕಾರವಾರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ ನಿರ್ಮಿಸಲು ಹಸಿರು ನಿಶಾನೆ ದೊರಕಿರುವುದು ಕ್ಷೇತ್ರದ ಯುವಜನರ ಕನಸಿಗೆ ಇಂಬು ನೀಡಿದಂತಾಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications