Karwar bridge collapsed: ಉತ್ತರ ಕನ್ನಡ ಡಿಸಿಗೆ ಸಿದ್ದರಾಮಯ್ಯ ಫೋನ್ ಕರೆ
ಕಾರವಾರ, ಆಗಸ್ಟ್ 07: ಬುಧವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ದುರಂತವೊಂದು ನಡೆದಿದೆ. ಕಾರವಾರ-ಗೋವಾ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಕಾಳಿ ನದಿ ಸೇತುವೆ ಕುಸಿತವಾಗಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಗಾಯಗೊಂಡಿದ್ದು, ನದಿಯಿಂದ ಆತನನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೇತುವೆ ಕುಸಿತದ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನೆ ಕುರಿತು ಮಾಹಿತಿಯನ್ನು ಪಡೆದಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಂಡರು. ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದರು.

ಬುಧವಾರ ಮುಂಜಾನೆ 1.30ರ ಸುಮಾರಿಗೆ ಕಾರವಾರದ ಕೋಡಿಬಾಗ್‌ನಲ್ಲಿ ಕಾಳಿ ನದಿಗೆ ಅಡ್ಡಲಾಗಿ 41 ವರ್ಷಗಳ ಹಿಂದೆ ನಿರ್ಮಾಣ ಮಾಡಲಾಗಿದ್ದ ಸೇತುವೆ ಕುಸಿದು ಬಿದ್ದಿದೆ. ತಮಿಳುನಾಡು ಮೂಲದ ಲಾರಿಯೊಂದು ಸೇತುವೆ ಮೇಲೆ ಸಂಚಾರ ನಡೆಸುವಾಗಲೇ ಸೇತುವೆ ಕುಸಿದಿದ್ದು, ಲಾರಿ ಚಾಲಕ ಕಾಳಿ ನದಿಗೆ ಬಿದ್ದಿದ್ದ. ಸ್ಥಳೀಯರು ಮೀನುಗಾರರು, ಪೊಲೀಸರು ಆತನನ್ನು ರಕ್ಷಣೆ ಮಾಡಿದ್ದಾರೆ.
ಸಿದ್ದರಾಮಯ್ಯ ಪೋನ್ ಕರೆ: ಈ ಘಟನೆ ಕುರಿತು ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳ ಕಛೇರಿ, "ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು. ಈ ವೇಳೆ ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಿದರು' ಎಂದು ಹೇಳಿದೆ.
'ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕೂಡ ಕಳುಹಿಸಲಾಗಿದೆ' ಎಂದು ಟ್ವೀಟ್‌ನಲ್ಲಿ ವಿವರಿಸಲಾಗಿದೆ.
ಘಟನೆ ಕುರಿತು ಉತ್ತರ ಕನ್ನಡ ಎಸ್‌ಪಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಇಂದು ದಿನಾಂಕ 7/8/2024ರಂದು ಬೆಳಗ್ಗೆ 1.30 ಗಂಟೆಗೆ NH 66ರ ಕಾರವಾರದಿಂದ ಸದಾಶಿವಗಡ ಸಂಪರ್ಕಿಸುವ ಹಳೆಯ ಕಾಳಿ ಸೇತುವೆ ಕುಸಿತಗೊಂಡಿದ್ದರಿಂದ TN-52 AC-6880 ನೋಂದಣಿ ಸಂಖ್ಯೆಯ ಲಾರಿಯು ನದಿಗೆ ಬಿದ್ದಿದ್ದು, ತಮಿಳುನಾಡು ಮೂಲದ ಲಾರಿ ಚಾಲಕ ಬಾಲ ಮುರುಗನ್ ಎಂಬಾತನನ್ನು ರಕ್ಷಿಸಲಾಗಿದೆ.
ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳಾದ ಅಶೋಕ ಎಸ್ ದುರ್ಗೆಕರ್, ಸುದರ್ಶನ ಪಿ ತಾಂಡೇಲ್ ಹಾಗೂ ಸ್ಥಳೀಯ ಮೀನುಗಾರರಾದ ಸೂರಜ ಗೋಪಿನಾಥ ಸಾರಂಗ, ಕರ್ಣಾ ರಾಜೇಂದ್ರ ನಾವಗೆ, ಸುದೇಶ ವಿಠೋಬಾ ಸಾರಂಗ, ಲಕ್ಷ್ಮಿಕಾಂತ ದೇವಿದಾಸ ಮೆಹತಾ, ದಿಲೀಪ ದೇವಿದಾಸ ಮೆಹತಾ, ಸಾ: ಅಳ್ವವಾಡ, ಕೋಡಿಬಾಗ ಕಾರವಾರ (ಬೋಟ್ ಶ್ರೀ ಭದ್ರಕಾಳಿ ನಾಗದೇವತಾ ಬೋಟ್ ನಂ: ಐಎನಡಿಕೆ-09/ಎಂಒ-2042, ಶ್ರೀ ಶಾಂತಾ ದುರ್ಗಾ ಮೀನುಗಾರಿಕಾ ಪಾತಿದೋಣಿ) ಮೂಲಕ ಕಾರ್ಯಾಚರಣೆ ಮಾಡಿ ರಕ್ಷಣೆ ಮಾಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಮೀನುಗಾರರಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಧನ್ಯವಾದಗಳನ್ನು ಸಲ್ಲಿಸಲಾಗಿದೆ. ಒಂದು ಕಡೆಯ ಸಂಚಾರಕ್ಕೆ ಬಳಕೆ ಮಾಡುತ್ತಿದ್ದ ಕಾಳಿ ನದಿಯ ಹಳೆ ಸೇತುವೆ ಕುಸಿತವಾಗಿದೆ, ಆದ್ದರಿಂದ ಪಕ್ಕದಲ್ಲಿದ್ದ ಹೊಸ ಸೇತುವೆ ಮೇಲೆ ಒತ್ತಡ ಹೆಚ್ಚಾಗಿದೆ.
ಆದ್ದರಿಂದ ಪೊಲೀಸರು ಪ್ರಕಟಣೆಯೊಂದನ್ನು ಹೊರಡಿಸಿದ್ದು, ದಿನಾಂಕ 7/8/2024ರಂದು ಬೆಳಗ್ಗೆ 1.30 ಗಂಟೆಗೆ NH 66 ರ ಕಾರವಾರ ಸದಾಶಿವಗಡ ಸಂಪರ್ಕಿಸುವ ಹಳೆಯ ಕಾಳಿ ಸೇತುವೆ ಕುಸಿತಗೊಂಡಿದ್ದರಿಂದ ಕಾಳಿ ಹೊಸ ಸೇತುವೆಯ ಮೇಲೆ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ











Click it and Unblock the Notifications