ಸ್ವೀಕರ್ ಕಾಗೇರಿಗೆ ಸ್ಥಳೀಯರ ತರಾಟೆ: ಇದು ಬಿಜೆಪಿಗೆ ಎಚ್ಚರಿಕೆಯ ಕರೆಗಂಟೆ? ಇಲ್ಲಿದೆ ವರದಿ, ವಿವರ
ಭೂಮಿಪೂಜೆಗೆಂದು ತೆರಳಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರು, ಮಾರ್ಚ್ 15: ಕರ್ನಾಟಕ ಚುನಾವಣೆ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ರಾಜಕಾರಣಿಗಳು ತೂರಾತುರಿಯಿಂದ ಕಾಮಗಾರಿಗಳಿಗೆ ಭೂಮಿಪೂಜೆ ನೇರವೇರಿಸುತ್ತಿರುವುದು ಸಾಮಾನ್ಯವಾಗಿದೆ. ಇದಕ್ಕೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯೂ ಹೊರತಲ್ಲ. ಭೂಮಿಪೂಜೆಗೆಂದು ತೆರಳಿದ್ದ ಅವರಿಗೆ ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಿದ್ದಾಪುರ ತಾಲೂಕಿನ ಬೇಡ್ಕಣಿಯಲ್ಲಿ ರಸ್ತೆ ಕಾಮಗಾರಿಯ ಭೂಮಿಪೂಜೆಗೆಂದು ತೆರಳಿದ್ದರು. ಶಿರಸಿ- ಸಿದ್ದಾಪುರ ಕ್ಷೇತ್ರದ ಶಾಸಕರೂ ಅವರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಭೂಮಿಪೂಜೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಿದ್ದಾಪುರ ತಾಲೂಕಿನ ಬೇಡ್ಕಣಿಯಲ್ಲಿ ರಸ್ತೆ ನಿರ್ಮಿಸಬೇಕೆಂದು ಸ್ಥಳೀಯರು ಕಳೆದ 15 ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಆದರೆ, ಸ್ಥಳೀಯರ ಬೇಡಿಕೆಗೆ ಕಾಗೇರಿ ಬೆಲೆ ನೀಡಿರಲಿಲ್ಲ. ಈಗ ಕರ್ನಾಟಕ ವಿಧಾನಸಭೆ ಚುನಾವಣೆ ಸಮಯದಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುವುದು ಬೇಡವೆಂದು ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಅವರನ್ನು ತಡೆದಿದ್ದಾರೆ. ಆ ನಂತರ ಸ್ಥಳೀಯರ ಬೇಡಿಕೆ ಪ್ರಕಾರವೇ ರಸ್ತೆ ನಿರ್ಮಿಸುವುದಾಗಿ ಕಾಗೇರಿ ಅವರು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಬಳಿಕ ಅಧಿಕಾರಿಗಳು ಶಂಕುಸ್ಥಾಪನೆ ನೇರವೇರಿಸಿದ್ದಾರೆ.
'ಶನೇಶ್ವರ ದೇವಸ್ಥಾನದಿಂದ ಗುಂಜಗೋಡ ರಸ್ತೆಯನ್ನು ನಿರ್ಮಿಸಿಕೊಡುವಂತೆ ಹತ್ತಾರು ವರ್ಷಗಳಿಂದ ಹೋರಾಟ ಮಾಡಿದ್ದೇವೆ. ನಿಮ್ಮ ಮುಂದೆಯೂ ಹಲವಾರು ಸಾರಿ ಬೇಡಿಕೆ ಇಟ್ಟಿದ್ದೇವೆ. ಇಷ್ಟು ವರ್ಷಗಳ ಕಾಲ ನಮ್ಮ ಬೇಡಿಕೆಗೆ ನೀವು ಸ್ಪಂದಿಸಲೇ ಇಲ್ಲ. ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ನೀವು ಇಲ್ಲಿಗೆ ಬಂದಿದ್ದೀರಿ. ಇಷ್ಟು ವರ್ಷಗಳ ಕಾಲ ಈಡೇರದ ಬೇಡಿಕೆ, ಈಗ ದಿಢೀರನೇ ಹೇಗಾಗುತ್ತದೆ' ಎಂದು ಕಾಗೇರಿ ಅವರಿಗೆ ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಬಾಡ್ಕಣಿಯ ಶನೇಶ್ವರ ದೇವಸ್ಥಾನದಿಂದ ಗುಂಜಗೋಡು ರಸ್ತೆವರೆಗೂ ಮತ್ತೆ ಡಾಂಬರೀಕರಣ ಕೆಲಸ ಆಗಬೇಕಿದೆ. ಇಲ್ಲದಿದ್ದರೆ ನಿಮಗೆ ಭೂಮಿ ಪೂಜೆಯನ್ನು ಮಾಡಲು ಬೀಡುವುದಿಲ್ಲ ಎಂದು ಸಾರ್ವಜನಿಕರು ಪಟ್ಟು ಹಿಡಿದರು.

ಈ ಬಾರಿಯೂ ನಾನೇ ಶಾಸಕನಾಗಿ ಆಯ್ಕೆಯಾಗುತ್ತೇನೆ. ನಿಮ್ಮ ಬೇಡಿಕೆಗಳನ್ನು ಖಂಡಿತವಾಗಿಯೂ ಈಡೇರಿಸುತ್ತೇನೆ ಎಂದು ಕಾಗೇರಿ ತಿಳಿಸಿದ್ದಾರೆ. ಕಾಗೇರಿಯವರನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಜೆಪಿಗೆ ಎಚ್ಚರಿಕೆಯ ಕರೆಗಂಟೆ ಎಂದು ಹೇಳಲಾಗುತ್ತಿದೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 31 ಜುಲೈ 2019 ರಿಂದ ಕರ್ನಾಟಕ ವಿಧಾನಸಭೆಯ 23 ನೇ ಸ್ಪೀಕರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದಾರೆ. ಕಾಗೇರಿಯವರು ಅವರು ಶಿರಸಿಯಿಂದ ಆರು ಬಾರಿ ಶಾಸಕರಾಗಿದ್ದಾರೆ. ಅವರು ಕರ್ನಾಟಕ ಸರ್ಕಾರದಲ್ಲಿ 2008 ರಿಂದ 2013 ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಂಕೋಲಾ ವಿಧಾನಸಭಾ ಕ್ಷೇತ್ರವನ್ನು 3 ಅವಧಿಗೆ ಪ್ರತಿನಿಧಿಸಿದ್ದಾರೆ. 1994-99, 1999-04 ಮತ್ತು 2004-2008 ರಲ್ಲಿ ಅವರು ಶಾಸಕರಾಗಿ ಆಯ್ಕೆಯಾದರು. 2008, 2013 ಮತ್ತು 2018 ರಲ್ಲಿ ಶಿರಸಿ-ಸಿದ್ದಾಪುರದಿಂದ ಶಾಸಕರಾಗಿ ಆಯ್ಕೆಯಾದರು. ಅವರು ಅತ್ಯಂತ ಶಿಸ್ತಿನ ರಾಜಕಾರಣಿ ಎಂದು ಹೆಸರುವಾಸಿಯಾಗಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ











Click it and Unblock the Notifications