Karnataka Budget 2025: ರಾಜ್ಯ ಬಜೆಟ್‌ನಲ್ಲಿ ಕರಾವಳಿಯ ಮೀನುಗಾರಿಕೆಗೆ ಸಿಕ್ಕಿದ್ದೇನು?
ಬೆಂಗಳೂರು, ಮಾರ್ಚ್ 08: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದಾರೆ. 4 ಲಕ್ಷ ಕೋಟಿ ರೂಪಾಯಿ ಗಿಂತಲೂ ಹೆಚ್ಚಿನ ಗಾತ್ರದ ಕಾಂಗ್ರೆಸ್ ಸರ್ಕಾರದ ಎರಡನೇ ಪೂರ್ಣ ಪ್ರಮಾಣದ ಬಜೆಟ್ ಅನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮೀನುಗಾರಿಗೆ ಅಭಿವೃದ್ಧಿಗೆ ಕೆಲವು ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ.
2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮೀನುಗಾರಿಗೆ ಅಭಿವೃದ್ಧಿಗೆ ನೀಡಿರುವ ಅನುದಾದ ವಿವರ ಈ ಕಳೆಗಿನಂತಿದೆ.
* ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು ಎಂದು ರಾಜ್ಯ ಸರ್ಕಾರ ಭರವಸೆ ನೀಡಿದ್ದು, ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು ಎಂದು ತಿಳಿಸಿದೆ.

* ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ. ಒದಗಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
*ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು.
*ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು.

*ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು.
*ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು 'ಮಲ್ಟಿ-ಲೆವೆಲ್ ಪಾರ್ಕಿಂಗ್' ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.
* ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.












Click it and Unblock the Notifications