ಅಂಕೋಲಾದಲ್ಲಿ ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ

ಅಂಕೋಲಾ (ಉತ್ತರ ಕನ್ನಡ), ಏಪ್ರಿಲ್ 26: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಭರ್ಜರಿ ಪ್ರಚಾರಕ್ಕೆ ಇಳಿದಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಿದ್ದು ಹಲವು ಕಡೆಗಳಲ್ಲಿ ರೋಡ್ ಶೋ, ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ದೆಹಲಿಯಿಂದ ಹುಬ್ಬಳ್ಳಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.

ನಂತರ ಅವರು ಉತ್ತರ ಕನ್ನಡದ ಅಂಕೋಲಕ್ಕೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಸಚಿವ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ನಲ್ಲಿ ರಾಹುಲ್ ಗಾಂಧಿ ಜೊತೆಗೆ ಪ್ರಯಾಣಿಸಿದರು.

ಅಂಕೋಲಕ್ಕೆ ಬಂದಿಳಿದ ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ನಂತರ ಅಂಕೋಲದ ಪ್ರಮುಖ ರಸ್ತೆಗಳಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಿದರು.

ಸದ್ಯ ಅವರು ಅಂಕೋಲಾದಲ್ಲಿ ವಿಶೇಷ ವಾಹನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್.ವಿ. ದೇಶಪಾಂಡೆ ಜೊತೆಗೆ ರೋಡ್ ಶೋ ನಡೆಸುತ್ತಿದ್ದಾರೆ. ಇದಾದ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

2.45ಕ್ಕೆ ಕುಮಟಾದಲ್ಲಿ ರೋಡ್ ಶೋ ಮತ್ತು ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. 4 ಗಂಟೆಗೆ ಹೊನ್ನಾವರದಲ್ಲಿ ಇದೇ ರೀತಿ ರೋಡ್ ಶೋ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಂಜೆ 5.30ಕ್ಕೆ ಭಟ್ಕಳದಲ್ಲಿ ಕಾರ್ನರ್ ಮೀಟಿಂಗ್ ನಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+