• search
  • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಲ್ಲಾಪುರದ ಖಾಸಗಿ ಶಾಲೆಯ 21 ವಿದ್ಯಾರ್ಥಿಗಳು, 2 ಶಿಕ್ಷಕರಿಗೆ ಕೊರೊನಾ ಸೋಂಕು

|

ಕಾರವಾರ, ಮಾರ್ಚ್ 30: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಪಟ್ಟಣದ ಖಾಸಗಿ ಶಾಲೆಯೊಂದರ 21 ವಿದ್ಯಾರ್ಥಿಗಳಿಗೆ ಹಾಗೂ ಇಬ್ಬರು ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಡೀ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಶಾಲೆಯ ಕನ್ನಡ ಮಾಧ್ಯಮ ವಿಭಾಗದ ಹತ್ತನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರು ಸೇರಿದಂತೆ 123 ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು. ಸೋಮವಾರ ಪರೀಕ್ಷೆಯ ವರದಿ ಬಂದಿದ್ದು, 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರು ಶಿಕ್ಷಕರಿಗೂ ಪಾಸಿಟಿವ್ ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಇಡೀ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶಾಲೆಯ ಕನ್ನಡ ಮಾಧ್ಯಮ ಹಾಗೂ ಇಂಗ್ಲೀಷ್ ಮಾಧ್ಯಮ ಮತ್ತು ಕಾಲೇಜು ಪ್ರತ್ಯೇಕ ಇರುವುದರಿಂದ ಆತಂಕ ಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದು, ಮಂಗಳವಾರ ಶಾಲೆಯ ಎಲ್ಲಾ ವಿದ್ಯಾರ್ಥಿಗಳ ಗಂಟಲು ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಶಾಲೆಯನ್ನು ಸೀಲ್ ಡೌನ್ ಮಾಡಬೇಕೋ, ಬೇಡವೋ ಎಂದು ಅವರ ನಿರ್ಣಯಕ್ಕೆ ಬಿಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೇ ವಿದ್ಯಾರ್ಥಿಗಳ ಸಂಪರ್ಕಕ್ಕೆ ಬಂದ ಅವರ ಕುಟುಂಬದವರ ಗಂಟಲು ದ್ರವದ ಪರೀಕ್ಷೆಯನ್ನು ಸಹ ನಡೆಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಅಂಕೋಲಾದಲ್ಲಿ ಒಂದೇ ದಿನ 11 ಪ್ರಕರಣ
ಸೋಮವಾರ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪ್ರಕರಣ ಹೊರತು ಪಡಿಸಿ 16 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಂಕೋಲಾ ತಾಲೂಕಿನಲ್ಲಿ 11 ಪ್ರಕರಣಗಳು ದಾಖಲಾಗಿದ್ದು, ಕಾರವಾರದಲ್ಲಿ 3, ಶಿರಸಿ 1 ಹಾಗೂ ಯಲ್ಲಾಪುರದಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಇನ್ನು ಹೊನ್ನಾವರ, ಭಟ್ಕಳ ಹಾಗೂ ಜೋಯಿಡಾದಲ್ಲಿ ತಲಾ ಒಬ್ಬರಂತೆ ಮೂವರು ಚಿಕಿತ್ಸೆ ಪಡೆದು ಸೋಮವಾರ ಗುಣಮುಖರಾಗಿದ್ದಾರೆ.

      ಕಾಂಗ್ರೆಸ್ ಪಕ್ಷಕ್ಕೆ ಹಸ್ತದ ಗುರುತು ಬರೋದಕ್ಕೆ ಈ ದೇವಿಯೇ ಕಾರಣ | Oneindia Kannada

      ಜಿಲ್ಲೆಯಲ್ಲಿ ಈವರೆಗೆ 14,910 ಪ್ರಕರಣ ದೃಢಪಟ್ಟಿದ್ದು, 14,639 ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನು 188 ಜನರು ಮೃತಪಟ್ಟಿದ್ದಾರೆ. 23 ಜನ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 60 ಜನರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು 83 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

      English summary
      21 students and two teachers of a private school in Yallapur town of Uttara Kannada district have been diagnosed with coronavirus.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X