• search
  • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರವಾರ: ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಬೆಂಕಿ ಅವಘಡ

|

ಕಾರವಾರ, ಮೇ 8: ಭಾರತೀಯ ನೌಕಾಪಡೆಯ ಅತಿದೊಡ್ಡ ಯುದ್ಧ ವಿಮಾನ ವಾಹಕ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ.

ವಿಕ್ರಮಾದಿತ್ಯ ನೌಕೆಯಲ್ಲಿ ನಾವಿಕರು ತಂಗುವ ಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ್ದ ಕರ್ತವ್ಯ ನಿರತ ಸಿಬ್ಬಂದಿ, ತಕ್ಷಣ ಅದನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಹೇಗೆ ಬೆಂಕಿ ಕಾಣಿಸಿಕೊಂಡಿತು ಎಂಬ ಬಗ್ಗೆ ಈವರೆಗೆ ಮಾಹಿತಿ ಲಭ್ಯವಾಗಿಲ್ಲ.

ಅವಘಡದಲ್ಲಿ ಯಾರಿಗೂ ಯಾವುದೇ ರೀತಿಯ ಅಪಾಯ ಸಂಭವಿಸದೆ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಆದರೆ‌ ವಿಕ್ರಮಾದಿತ್ಯ ನೌಕೆಗೆ ಹೆಚ್ಚಿನ ಹಾನಿ ಸಂಭವಿಸಿದ್ದು, ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ.

ಕಳೆದ ವರ್ಷ ಕೂಡ ಏಪ್ರಿಲ್ 27ರಂದು ವಿಕ್ರಮಾದಿತ್ಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಓರ್ವ ಸಿಬ್ಬಂದಿ ಕೂಡ ಅವಘಡದಲ್ಲಿ ಮೃತಪಟ್ಟಿದ್ದರು. ಈ ಬಾರಿಯೂ ಕಾರವಾರ ನೌಕಾ ಬಂದರಿನ ಬಳಿ ಲಂಗರು ಹಾಕಿದ್ದ ವೇಳೆ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.

English summary
In the Indian Navy's largest fighter aircraft carrier, INS Vikramaditya, caught fire Saturday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X