ಹಿಂದುಳಿದ ವರ್ಗಗಳ ಅನ್ನವನ್ನು ಯಾರೂ ಕಸಿದುಕೊಳ್ಳಬಾರದು: ಬ್ರಹ್ಮಾನಂದ ಸರಸ್ವತಿ
ಕಾರವಾರ, ಫೆಬ್ರವರಿ 22: ಹಿಂದುಳಿದ ವರ್ಗಗಳ ಹಕ್ಕನ್ನು ಯಾರೂ, ಯಾವುದೇ ರೀತಿಯಲ್ಲಿ ಕಸಿದುಕೊಳ್ಳಬಾರದು. ನಮ್ಮ ಅನ್ನದ ಬಟ್ಟಲನ್ನು ಕಿತ್ತುಕೊಳ್ಳುವ ಪ್ರಯತ್ನವನ್ನು ಯಾರೂ ಮಾಡಬಾರದು ಎಂದು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಹಿಂದುಳಿದ ವರ್ಗಗಳ 2ಎ ಹಿತರಕ್ಷಣಾ ವೇದಿಕೆಯಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಪೊಲೀಸ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ ಎಂಬುದು ಭಗವಂತ ಇದ್ದ ಹಾಗೆ. ಸೃಷ್ಟಿ, ಸ್ಥಿತಿ, ಲಯ ಕಾಯ್ದುಕೊಳ್ಳುತ್ತದೆ. ಅದಕ್ಕೆ ಪೂರಕವಾಗಿ ಅಂಬೇಡ್ಕರರ ಸಂವಿಧಾನದ ಕಲಂ 14, 15 ತಾರತಮ್ಯ ಮಾಡಬಾರದು ಎಂದಿದೆ ಎಂದು ತಿಳಿಸಿದರು.
ಕಲಂ 16ರಲ್ಲಿ ಬಡವರ, ಅತಿ ಹಿಂದುಳಿದವರು, ಅತಿ ಹಿಂದುಳಿದ ಪ್ರದೇಶದಲ್ಲಿರುವವರಿಗೆ ಅವರ ಹಕ್ಕನ್ನು ಕಾಯ್ದಿರಿಸಿಕೊಳ್ಳುವ ಅವಕಾಶ ನೀಡಿದೆ. ಅಲ್ಲದೇ ಆ ಹಕ್ಕನ್ನು ಸಂವಿಧಾನ ಕಾಯ್ದುಕೊಂಡು ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಗಳು, ನಾಯಕರು, ಸ್ವಾಮೀಜಿಗಳು ಅವರವರ ಜನರನ್ನು ಓಲೈಸಲು, ಸಂವಿಧಾನದ ಸಿದ್ಧಾಂತವನ್ನು, ಇತಿಮಿತಿಯನ್ನು ಗಾಳಿಗೆ ತೂರುವಂಥದ್ದಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಮಾವೇಶದ ಮೂಲಕ ಸರ್ಕಾರಕ್ಕೊಂದು ಸಂದೇಶ ನೀಡಲಿದ್ದೇವೆ. ಈಗ ಶಾಂತ ರೀತಿಯ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದಕ್ಕೆ ಪ್ರತಿಫಲ ಸಿಗದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರತರ ಪ್ರತಿಭಟನೆ ನಡೆಸಲಾಗುವುದು. ಅವರವರ ಜಾತಿ, ಜನಾಂಗಗಳನ್ನು ಹೊಗಳಿಕೊಳ್ಳುವುದು ಆಯಾ ಸ್ವಾಮೀಜಿಗಳ, ನಾಯಕರಿಗೆ ಬಿಟ್ಟ ವಿಚಾರ. ನಾವು ಯಾವುದೇ ಹೊಸ ವಸ್ತುವನ್ನು ಕೇಳುತ್ತಿಲ್ಲ. ಬದಲಿಗೆ ಯಥಾಸ್ಥಿತಿಯನ್ನು ಸಂವಿಧಾನಬದ್ಧವಾಗಿ ಕಾಯ್ದುಕೊಳ್ಳಲು ಒತ್ತಾಯಿಸುತ್ತಿದ್ದೇವೆ ಎಂದರು.
ಮೀಸಲಾತಿ ನೀಡುವಿಕೆ ಅಷ್ಟೊಂದು ಸಣ್ಣ ವಿಚಾರವಲ್ಲ. ಅಧ್ಯಯನ ಮಾಡಬೇಕು, ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಬೇಕು. ಆದರೆ ಸಮುದಾಯಗಳು ಮನವಿ ಮಾಡಬಹುದು. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಒಂದು ವೇಳೆ ಪಂಚಮಸಾಲಿಗಳನ್ನು 2ಎಗೆ ಸೇರಿಸಲು ಪ್ರಸ್ತಾವ ಸಲ್ಲಿಸಿದರೆ ಮುಂದೆ ತೀವ್ರವಾದ ಹೋರಾಟ ನಡೆಸಲಾಗುವುದು ಎಂದು ಬ್ರಹ್ಮಾನಂದ ಸರಸ್ವತಿ ಎಚ್ಚರಿಸಿದ್ದಾರೆ.
Recommended Video
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications