ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆಯಿಂದ ಹಾನಿ: ಉತ್ತರ ಕನ್ನಡದಲ್ಲಿ ಸರ್ವಋತು ರಸ್ತೆ ನಿರ್ಮಾಣ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಆಗಸ್ಟ್ 30: "ಈ ವರ್ಷದ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸರ್ವಋತು ರಸ್ತೆಗಳ ಪುನರ್‌ನಿರ್ಮಾಣಕ್ಕೆ ಮತ್ತು ಇತರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒದಗಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ," ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಹೇಳಿದರು.

ಇಂದು (ಸೋಮವಾರ) ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌ರೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಸಿ.ಸಿ. ಪಾಟೀಲ್, ಅತಿವೃಷ್ಟಿಯಿಂದ ಭೂಕುಸಿತವಾದ ಪ್ರದೇಶಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿ ಮಾತನಾಡಿದರು.

ಬಳಿಕ ಸ್ಥಳೀಯ ಕಳಚೆ ಗ್ರಾಮಸ್ಥರ ಮನವಿ ಸ್ವೀಕರಿಸಿದ ಅವರು, "ಬೆಂಗಳೂರಿನಿಂದ ನಿರ್ಣಯ ತೆಗೆದುಕೊಳ್ಳುವುದಕ್ಕೂ ಹಾಗೂ ಸ್ಥಳ ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಈಗಾಗಲೇ ಮುಖ್ಯಮಂತ್ರಿಯವರು ಜಿಲ್ಲೆಯ ನೆರೆ ಪೀಡಿತ ಹಾಗೂ ಭೂಕುಸಿತ ಸ್ಥಳಗಳನ್ನು ಪರಿಶೀಲಿಸಿ ಜಿಲ್ಲೆಗೆ 210 ಕೋಟಿ ರೂ. ಅನುದಾನ ನೀಡಿದ್ದಾರೆ," ಎಂದರು.

Road Reconstruction In Uttar Kannada Due To Damage From Heavy Rain

"ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ರಸ್ತೆ ಕುಸಿತದ ತೆರವು ಹಾಗೂ ಭೂಕುಸಿತ ಪ್ರದೇಶಗಳಲ್ಲಿ ಕಾಮಗಾರಿ ಭರದಿಂದ ಸಾಗುತಿದ್ದು, ಲೋಕೋಪಯೋಗಿ ಇಲಾಖೆಯಿಂದ ಹಾನಿಯಾದ ಪ್ರದೇಶದಲ್ಲಿ ಸರ್ವಋತು ರಸ್ತೆ ನಿರ್ಮಾಣ ಮಾಡಲಾಗುವುದು ಹಾಗೂ ಹೆಚ್ಚಿನ ಅನುದಾನಕ್ಕಾಗಿ ಕೂಡಲೇ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು," ಎಂದು ತಿಳಿಸಿದರು.

ನಂತರ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿ, "ಜನರು ಭಯ ಪಡುವ ಅಗತ್ಯವಿಲ್ಲ. ಆದಷ್ಟು ಬೇಗ ಮೂಲಸೌಕರ್ಯ ಹಾಗೂ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲೆಗೆ ಆಗಮಿಸಿದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲರ ಸಹಕಾರದೊಂದಿಗೆ ಜಿಲ್ಲೆಯ ಲೋಕೋಪಯೋಗಿ ಅಧಿಕಾರಿಗಳು ಮತ್ತು ಅರಣ್ಯ ಅಧಿಕಾರಿಗಳು ರಸ್ತೆ ತೆರವು ಕಾರ್ಯದಲ್ಲಿ ಸಾಕಷ್ಟು ಶ್ರಮಿಸಿದ್ದು, ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ," ಹೇಳಿದರು.

Road Reconstruction In Uttar Kannada Due To Damage From Heavy Rain

ಸಚಿವರು ಭೇಟಿ ನೀಡಿದ ಪ್ರದೇಶಗಳಲ್ಲಿ ಶಿರಸಿಯ ಸಹಾಯಕ ಆಯುಕ್ತರಾದ ಆಕೃತಿ ಬನ್ಸಾಲ್, ಯಲ್ಲಾಪುರ ಮತ್ತು ಶಿರಸಿ ತಾಲೂಕಿನ ತಹಶೀಲ್ದಾರ‍ ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದು, ಅಗತ್ಯ ಮಾಹಿತಿ ನೀಡಿದರು.

ಮಹಿಳೆಯನ್ನು ನಂಬಿಸಿ ಮದುವೆಯಾಗಿ ಮೌಲ್ವಿ ಪಲಾಯನ
ಅಂಗವಿಕಲ ಮಹಿಳೆಯನ್ನು ನಂಬಿಸಿ ಮದುವೆಯಾಗಿ, ನಂತರ ಆಕೆಯ ಬಳಿ ಇದ್ದ ಹಣ ದೋಚಿ ದರ್ಗಾದಲ್ಲಿದ್ದ ಮೌಲ್ವಿ ಪಲಾಯನ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ನಡೆದಿದೆ.

ಬನವಾಸಿಯ ದಾಸನಕೊಪ್ಪದ ಖುರೇಷಿ ಮಕ್ಬುಲ್ ಸಾಬ್ ದರ್ಗಾದ ಉತ್ತರ ಪ್ರದೇಶ ಮೂಲದ ಮೌಲ್ವಿ ಮೊಹಮ್ಮದ್ ಜಾಕಿರ್ (28) ಅಂಗವಿಕಲ ಮಹಿಳೆಗೆ ವಂಚಿಸಿದ್ದಾನೆ. ಮಹಿಳೆ ಈ ಹಿಂದೆ ಮದುವೆಯಾಗಿ ಹತ್ತು ವರ್ಷದ ಮಗನಿದ್ದಾನೆ. ಗಂಡ ಬಿಟ್ಟು ಹೋಗಿದ್ದರಿಂದ ಸಣ್ಣಪುಟ್ಟ ಕೆಲಸ ಮಾಡಿಕೊಂಡು ದರ್ಗಾದ ಬಳಿಯೇ ಚಿಕ್ಕ ಗುಡಿಸಲಿನಲ್ಲಿ ಮಹಿಳೆ ವಾಸವಿದ್ದಳು.

ಈ ವೇಳೆ ಮಹಿಳೆಯನ್ನು ಪರಿಚಯ ಮಾಡಿಕೊಂಡು, ಬಾಳು ಕೊಡುವುದಾಗಿ ನಂಬಿಸಿ, ಮದುವೆಯಾಗಿದ್ದಾನೆ. ಕೆಲವು ತಿಂಗಳವರೆಗೆ ಜೀವನ ನಡೆಸಿ, ಮಹಿಳೆಯ ಮನೆಯಲ್ಲಿದ್ದ ಹಣ, ಮೊಬೈಲ್ ಸೇರಿದಂತೆ ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾನೆ.

Recommended Video

ಹನುಮಾನ್ ಚಾಲೀಸಾ ಪಠಿಸುತ್ತಿರುವ ಭಕ್ತನ ಬಳಿಬಂದು ದೇವರು ಮಾಡಿದ್ದೇನು? | Oneindia Kannada

ಘಟನೆ ಸಂಬಂಧ ವಂಚನೆಗೊಳಗಾದ ಮಹಿಳೆ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮೌಲ್ವಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

English summary
PWD Minister CC Patil inspected the landslide areas in Kalache Village in Yellapur taluk of Uttara kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X