ರಾಜ್ಯದ ಏಕೈಕ ಬ್ಲೂಫ್ಲ್ಯಾಗ್ ಕಡಲು ಹೆಗ್ಗಳಿಕೆಗೆ ಕಾಸರಕೋಡು ತೀರ!
ಕಾರವಾರ, ಮಾರ್ಚ್ 11: ಒಂದು ಕಾಲದಲ್ಲಿ ಉತ್ತಮ ಪ್ರವಾಸಿ ತಾಣವಾಗುವ ಎಲ್ಲ ಸಾಧ್ಯತೆಗಳಿದ್ದರೂ ಸಹ ಮೂಲಭೂತ ಸೌಕರ್ಯಗಳಿಲ್ಲದೇ ಹೊನ್ನಾವರ ತಾಲ್ಲೂಕಿನ ಕಾಸರಕೋಡಿನಲ್ಲಿರುವ ಇಕೋ ಬೀಚ್ ಹೆಚ್ಚು ಪ್ರವಾಸಿಗರನ್ನು ಸೆಳೆಯಲು ವಿಫಲವಾಗಿತ್ತು. ಆದರೆ, ಇದೇ ಕಡಲತೀರ ಇಂದು ಉತ್ತರಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಯತ್ನದಿಂದಾಗಿ ಅಂತರರಾಷ್ಟ್ರೀಯ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಸಜ್ಜಾಗುತ್ತಿದೆ. ಅಲ್ಲದೇ, ರಾಜ್ಯದ ಮೊದಲ ಬ್ಲೂಫ್ಲ್ಯಾಗ್ ಪಡೆದುಕೊಳ್ಳುವ ಕಡಲತೀರ ಎನ್ನುವ ಹೆಗ್ಗಳಿಯನ್ನು ಗಳಿಸಿಕೊಳ್ಳಲಿದೆ.
ಇಕೋ ಬೀಚ್ ಇದೀಗ ಅಂತರಾಷ್ಟ್ರೀಯ ಮಟ್ಟದ ಬೀಚ್‌ಗಳಂತೆ ಮೇಲ್ದರ್ಜೆಗೇರಿದೆ. ಕಡಲತೀರಕ್ಕೆ ಬರುವ ಪ್ರವಾಸಿಗರಿಗೆ ಕುಳಿತುಕೊಳ್ಳುವ ಆಸನದಿಂದ ಹಿಡಿದು ಕುಡಿಯುವ ನೀರು, ಮಕ್ಕಳ ಆಟಿಕೆಗಳು, ಜೀವರಕ್ಷಕ ಸಿಬ್ಬಂದಿ ಹಾಗೂ ಮುಖ್ಯವಾಗಿ ಕಡಲತೀರದ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಪ್ರತ್ಯೇಕ ಸಿಬ್ಬಂದಿಯನ್ನ ಒಳಗೊಂಡು ವಿನೂತನ ಮಾದರಿಯಲ್ಲಿ ಸಿದ್ಧಗೊಳ್ಳುತ್ತಿದೆ. ಇಕೋ ಬೀಚ್‌ನ್ನು ಅಂತರಾಷ್ಟ್ರೀಯ ಮಾನ್ಯತೆ ಹೊಂದಿರುವ ಬ್ಲೂಫ್ಲ್ಯಾಗ್ ಕಡಲತೀರವನ್ನಾಗಿ ಮಾರ್ಪಾಡು ಮಾಡಲು ಈ ಎಲ್ಲ ತಯಾರಿಗಳು ನಡೆಯುತ್ತಿವೆ.

ಮೂಲಭೂತ ಸೌಕರ್ಯ ಒದಗಿಸುವುದು
ಕಡಲತೀರ ವೀಕ್ಷಣೆಗೆ ಬರುವಂತಹ ಪ್ರವಾಸಿಗರಿಗೆ ಸ್ವಚ್ಛ ಕಡಲತೀರದ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರಿಂದ ದೇಶ, ವಿದೇಶಗಳ ಪ್ರವಾಸಿಗರನ್ನೂ ಇತ್ತ ಸೆಳೆಯುವಲ್ಲಿ ಅನುಕೂಲವಾಗಲಿದೆ. ಈಗಾಗಲೇ ಶೇ. 90 ರಷ್ಟು ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಿದ್ದು, ಡೆನ್ಮಾರ್ಕ್ ನ ಪರಿಸರ ಶಿಕ್ಷಣ ಪ್ರತಿಷ್ಠಾನ ಪರಿಶೀಲನೆ ಬಳಿಕ ಬ್ಲೂಫ್ಲ್ಯಾಗ್ ಪ್ರಮಾಣಪತ್ರವನ್ನು ನೀಡಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ ಮಾಹಿತಿ ನೀಡಿದ್ದಾರೆ.

ಪರಿಸರ ಸ್ನೇಹಿ ಕಡಲತೀರ
ಇನ್ನು ದೇಶದಲ್ಲಿ ಬ್ಲೂಫ್ಲ್ಯಾಗ್ ಬೀಚ್‌ಗಾಗಿ ಆಯ್ಕೆಯಾದ ಬೀಚ್‌ಗಳಲ್ಲಿ ಕಾಸರಕೋಡು ಇಕೋ ಬೀಚ್ ರಾಜ್ಯದ ಏಕೈಕ ಕಡಲತೀರವಾಗಿದೆ. 5.6 ಕಿಲೋ ಮೀಟರ್ ಉದ್ದವಿರುವ ಕಡಲತೀರದ 750 ಮೀಟರ್ ವ್ಯಾಪ್ತಿಯಲ್ಲಿ ಸದ್ಯ ಸುಮಾರು 8 ಕೋಟಿ ವೆಚ್ಚದಲ್ಲಿ ಈಗಾಗಲೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಕಡಲತೀರವನ್ನು ಪರಿಸರ ಸ್ನೇಹಿಯಾಗಿ ಸಿದ್ಧಪಡಿಸಬೇಕಿದ್ದು, ಕಡಲತೀರದ ಸ್ವಚ್ಛತೆಯ ಜೊತೆಗೆ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಸಹ ಕಡಲತೀರದಲ್ಲಿ ಆಯೋಜನೆ ಮಾಡಬೇಕಾಗಿದೆ.

ಡೆನ್ಮಾರ್ಕ್ ಪರಿಸರ ಶಿಕ್ಷಣ ಪ್ರತಿಷ್ಠಾನದಿಂದ ಪ್ರಮಾಣಪತ್ರ
ಇನ್ನು ಕಡಲತೀರದಲ್ಲಿನ ಅಭಿವೃದ್ಧಿ ಕಾರ್ಯಗಳು ಹಾಗೂ ಬೀಚ್ ಸ್ಥಿತಿಯನ್ನು ಆಧರಿಸಿ ಬ್ಲೂಫ್ಲ್ಯಾಗ್ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಬಳಿಕ ಕಡಲತೀರದ ನೀರಿನ ಗುಣಮಟ್ಟ, ಬೀಚ್ ಸ್ವಚ್ಛತೆ, ಮೂಲಭೂತ ಸೌಕರ್ಯಗಳು ಹಾಗೂ ಪ್ರವಾಸಿಗರ ಭದ್ರತೆಯನ್ನೂ ಸಹ ಕಡಲತೀರದಲ್ಲಿ ಕಾಯ್ದುಕೊಂಡಲ್ಲಿ ಮಾತ್ರ ಕಡಲತೀರದಲ್ಲಿ ಬ್ಲೂಫ್ಲ್ಯಾಗ್ ನ್ನ ಹಾಕಲು ಅವಕಾಶ ಇರುತ್ತದೆ. ಕೆಲವೇ ದಿನಗಳಲ್ಲಿ ಬ್ಲೂಫ್ಲ್ಯಾಗ್ ಬೀಚ್ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ಸಾರ್ವಜನಿಕರಿಗೆ ಬಳಕೆಗೆ ಲಭ್ಯವಾಗಲಿದೆ. ಬಳಿಕ ಕಡಲತೀರದಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿ ಡೆನ್ಮಾರ್ಕ್ ನ ಪರಿಸರ ಶಿಕ್ಷಣ ಪ್ರತಿಷ್ಠಾನ ಪ್ರಮಾಣಪತ್ರವನ್ನ ನೀಡಲಿದೆ.

ಸರ್ಕಾರದ ಸಹಯೋಗದಿಂದ ಕಾರ್ಯನಿರ್ವಹಣೆ
ಸದ್ಯ ಕಡಲತೀರದಲ್ಲಿ ಮಾಡಲಾಗಿರುವ ಅಭಿವೃದ್ಧಿ ಕಾರ್ಯಗಳಿಂದಾಗಿ ಕಡಲತೀರಕ್ಕೆ ಭೇಟಿ ನೀಡುವ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಸ್ವಚ್ಛ, ಸುಂದರ ಕಡಲತೀರದಲ್ಲಿ ಕುಟುಂಬಸ್ಥರೊಂದಿಗೆ ಯಾವುದೇ ತೊಂದರೆ ಇಲ್ಲದೇ ಕಾಲ ಕಳೆಯಬಹುದಾಗಿದ್ದು, ಸಮುದ್ರದಲ್ಲಿ ಈಜಾಡಿದ ಬಳಿಕ ಬಟ್ಟೆ ಬದಲಾಯಿಸಲು ಪ್ರತ್ಯೇಕ ರೂಂಗಳ ವ್ಯವಸ್ಥೆ ಸಹ ಇರುವುದರಿಂದ ಸಾಕಷ್ಟು ಅನುಕೂಲವಾಗಲಿದೆ ಅನ್ನೋದು ಬೀಚ್ ವೀಕ್ಷಣೆಗೆ ಬಂದಿದ್ದ ಪ್ರವಾಸಿ ದಿವ್ಯಾ ರೇವಣಕರ ಅಭಿಪ್ರಾಯ. ಸದ್ಯ ಕಡಲತೀರದ ಅಭಿವೃದ್ಧಿ ಕಾರ್ಯಗಳನ್ನು ಖಾಸಗಿ ಸಂಸ್ಥೆಯೊಂದಕ್ಕೆ ವಹಿಸಿಕೊಡಲಾಗಿದ್ದು ಬಳಿಕ ಸರ್ಕಾರದ ಸಹಯೋಗದೊಂದಿಗೆ ಬೀಚ್ ಕಾರ್ಯನಿರ್ವಹಿಸಲಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications