ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಲಿಂಪಿಕ್ಸ್ ‘ಚಿನ್ನದ ವೀರ’ ನೀರಜ್ ಚೋಪ್ರಾ ಹಿಂದಿನ ಶಕ್ತಿ ಉತ್ತರ ‘ಕನ್ನಡಿ’ಗ!

By ದೇವರಾಜ ನಾಯ್ಕ
|
Google Oneindia Kannada News

ಕಾರವಾರ, ಆಗಸ್ಟ್ 07: ಟೋಕಿಯೋ ಒಲಿಂಪಿಕ್ಸ್​ನಲ್ಲಿ ಜಾವಲಿನ್​ ಎಸೆತ ಸ್ಪರ್ಧೆಯಲ್ಲಿ ಹರಿಯಾಣ ಮೂಲದ ನೀರಜ್​ ಚೋಪ್ರಾ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ನಿರ್ಮಿಸಿದ್ದಾರೆ.

ಒಲಿಂಪಿಕ್ಸ್ ಇತಿಹಾಸದಲ್ಲೇ ಭಾರತಕ್ಕೆ ಅಥ್ಲೆಟಿಕ್ಸ್ ವಿಭಾಗದಲ್ಲಿ ಚೊಚ್ಚಲ ಚಿನ್ನದ ಪದಕ ಬಂದಿದೆ. ಜಾವೆಲಿನ್ ಥ್ರೋನಲ್ಲಿ ಭಾರತದ ಅಥ್ಲೀಟ್ ನೀರಜ್ ಚೋಪ್ರಾ ಬಂಗಾರದ ಪದಕ ಜಯಿಸಿದ್ದು, ಇದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಲಭಿಸುತ್ತಿರುವ 7ನೇ ಪದಕ ಮತ್ತು ಚೊಚ್ಚಲ ಬಂಗಾರವಾಗಿದೆ.

ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಸಾಧನೆಯ ಹಿಂದಿರುವುದು ಉತ್ತರ ಕನ್ನಡ ಜಿಲ್ಲೆಯ ವ್ಯಕ್ತಿ ಎನ್ನುವುದು ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.

Kashinath Naik Of Uttara Kannada Who Trained Olympics Athlete Neeraj Chopra

ಭಾರತೀಯ ಸೇನೆಯಲ್ಲಿ ಸುಬೇದಾರ್ ಹುದ್ದೆಯಲ್ಲಿರುವ, ಪ್ರಸ್ತುತ ಪುಣೆಯ ಸೇನಾ ಕ್ರೀಡಾ ಇನ್‌ಸ್ಟಿಟ್ಯೂಟ್‌ನಲ್ಲಿ ತರಬೇತುದಾರರಾಗಿರುವ, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಂಗಳೆ ಗ್ರಾಮದ ಕಾಶಿನಾಥ ನಾಯ್ಕ ಈ ಚಿನ್ನದ ಪದಕ ವೀರ ನೀರಜ್ ಚೋಪ್ರಾ ಅವರ ಹಿಂದಿನ ಶಕ್ತಿಯಾಗಿದ್ದಾರೆ.

23 ವರ್ಷದಿಂದ ಸೇನೆಯಲ್ಲಿರುವ ಕಾಶಿನಾಥ ನಾಯ್ಕ, 2010ರ ನವದೆಹಲಿಯ ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್ ಎಸೆತದಲ್ಲಿ ಕಂಚಿನ ಪದಕ ಗಳಿಸಿದ್ದರು. 2013ರಿಂದ 2019ರವರೆಗೆ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದಾರೆ.

2015ರಲ್ಲಿ ಕಾಶಿನಾಥ ನಾಯ್ಕರ ಬಳಿ ತರಬೇತಿಗೆ ಸೇರಿದ್ದ ನೀರಜ್ ಚೋಪ್ರಾ, 2017ರವರೆಗೆ ತರಬೇತಿ ಪಡೆದಿದ್ದರು. ಅಂದೇ 86.48 ಮೀಟರ್ ಜೂನಿಯರ್ ವಿಶ್ವ ದಾಖಲೆ ಮಾಡಿದ್ದ ನೀರಜ್ ಚೋಪ್ರಾ, ಇತ್ತೀಚಿಗೆ ವಿದೇಶಿ ತರಬೇತುದಾರರ ಬಳಿ ತರಬೇತಿ ಪಡೆಯಲಾರಂಭಿಸಿದ್ದರು.

Kashinath Naik Of Uttara Kannada Who Trained Olympics Athlete Neeraj Chopra

ನೀರಜ್ ಚೋಪ್ರಾ ಚಿನ್ನದ ಪದಕ ವಿಜೇತರಾಗಿರುವ ಬಗ್ಗೆ ಸಂತಸ ಹಂಚಿಕೊಂಡಿರುವ ಕಾಶಿನಾಥ ನಾಯ್ಕ, "2016ರಲ್ಲೇ ನೀರಜ್ ಚೋಪ್ರಾ ಚಿನ್ನ ಗೆಲ್ಲುವ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದೆ. ಯಾಕೆಂದರೆ, ಕೆಲವು ಯುವಕರು ತರಬೇತಿ ಪಡೆದು ಒಂದಷ್ಟು ಕ್ರೀಡೆಗಳಲ್ಲಿ ಸಾಧನೆ ತೋರುತ್ತಿದ್ದಂತೆ ಅಹಂ ಬರುತ್ತದೆ. ಆದರೆ ನೀರಜ್ ಚೋಪ್ರಾನಲ್ಲಿ ಎಳ್ಳಷ್ಟು ಆ ಗುಣವಿಲ್ಲ. ಎಲ್ಲರ ಆಶೀರ್ವಾದ ಆತನ ಮೇಲಿದೆ. ಆತನ ಗುಣ ಕೂಡ ಇಂದು ಆತ ಚಿನ್ನದ ಪದಕ ಗೆಲ್ಲಲು ಕಾರಣವಾಗಿದೆ," ಎಂದು ಹೇಳಿದ್ದಾರೆ.

"ನೀರಜ್ ಚೋಪ್ರಾಗೆ ಪ್ರತಿಭೆ ದೇವರು ಕೊಟ್ಟ ವರ. ದೇಶಕ್ಕೆ ಮೊದಲ ಒಲಿಂಪಿಕ್ಸ್ ಮೆಡಲ್ ಈತನೇ ತರುತ್ತಾನೆಂದು ಅವರ ಅಂಕಲ್ ಬಳಿ 2016ರಲ್ಲೇ ನಾನು ಹೇಳಿದ್ದೆ. ಆ ಭವಿಷ್ಯ ಇಂದು ನಿಜವಾಗಿದೆ. ನನಗೂ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಕನಸು ಇತ್ತು. ಆದರೆ ಅದನ್ನು ನನ್ನ ಶಿಷ್ಯ ನೀರಜ್ ಚೋಪ್ರಾ ನನಸು ಮಾಡಿದ್ದಾರೆ. ಹೀಗಾಗಿ ಹೆಚ್ಚು ಖುಷಿಯಾಗಿದೆ,'' ಎಂದಿದ್ದಾರೆ.

Kashinath Naik Of Uttara Kannada Who Trained Olympics Athlete Neeraj Chopra

ವಿಶ್ವ ಚಾಂಪಿಯನ್‌ಶಿಪ್, ಏಷಿಯನ್ ಗೇಮ್ಸ್ ಸೇರಿದಂತೆ ಹಲವು ಸ್ಪರ್ಧೆಗಳಲ್ಲಿ ಪದಕ ಸಾಧನೆ ಮೆರೆದ ಅನುರಾಣಿ 2013ರಿಂದ ಕಾಶಿನಾಥ ಅವರ ಬಳಿ ತರಬೇತಿ ಪಡೆದಿದ್ದು, ಇನ್ನೋರ್ವ ಕ್ರೀಡಾಪಟು ಶಿವಪಾಲ್‌ರಿಗೂ ಕಾಶಿನಾಥ್ ತರಬೇತಿ ನೀಡಿದ್ದರು.

ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಹರಿಯಾಣದ ಪಾಣಿಪತ್ ಬಳಿಯ ಖಂಡ್ರಾ ಗ್ರಾಮದವರು. ಕೂಡು ಕುಟುಂಬದಿಂದ ಬಂದ ನೀರಜ್ ಚೋಪ್ರಾ ಮನೆಯಲ್ಲಿ 16 ಜನರಿದ್ದಾರೆ. ನೀರಜ್ ತಂದೆ ಕೃಷಿ ಮಾಡುತ್ತಿದ್ದು, ಮನೆಯವರು ಸಾಧಾರಣ ಕೆಲಸ ಹಾಗೂ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಪಾಕೆಟ್ ಮನಿಯಿಂದಲೇ ಸಲಕರಣೆಗಳನ್ನು ಖರೀದಿಸಿ ನೀರಜ್ ಅಭ್ಯಾಸ ಮಾಡುತ್ತಿದ್ದರು.

Recommended Video

Neeraj Chopraಗೆ ತರಬೇತಿ ನೀಡಿದ ಕನ್ನಡಿಗ Kashinath Naik ಯಾರು? | Oneindia Kannada

ನೀರಜ್ ಚೋಪ್ರಾ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದು, ಭಾರತೀಯ ಸೇನೆಯಲ್ಲಿ ಸುಬೇದಾರ್ ಕೆಲಸ ಮಾಡುತ್ತಿದ್ದಾರೆ. ನೀರಜ್ ತಮ್ಮ 12ನೇ ವಯಸ್ಸಿನಲ್ಲಿ 90 ಕೆ.ಜಿ ತೂಕ ಹೊಂದಿದ್ದರು. ಬಳಿಕ ಕುಟುಂಬದವರ ಒತ್ತಾಯದ ಮೇರೆಗೆ ಜಿಮ್ ಮಾಡಿ, ಫಿಟ್ನೆಸ್ ಕಾಪಾಡಿಕೊಂಡರು. ನಂತರ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

English summary
Kashinath Naik From Uttara Kannada has coached Neeraj Chopra, who won gold at the Tokyo Olympics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X