ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣ; ಡಿಕೆಶಿ ಬಿಚ್ಚಿಟ್ಟ ಸಂಗತಿ ಏನು?

|
Google Oneindia Kannada News

ಕಾರವಾರ, ನವೆಂಬರ್ 28: 'ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಗಂಭೀರವಾದ ವಿಚಾರ. ಈ ಪ್ರಕರಣವನ್ನು ಸರ್ಕಾರ ತನಿಖೆ ನಡೆಸುವುದರಲ್ಲಿ ಅರ್ಥವಿಲ್ಲ. ಉನ್ನತ ಮಟ್ಟದ ತನಿಖೆ ಅಗತ್ಯವಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಶನಿವಾರ ಕಾರವಾರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಡಿ.ಕೆ ಶಿವಕುಮಾರ್, "ಸಂತೋಷ್ ಅವರನ್ನು ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರೊಬ್ಬರು ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂಬ ಸುದ್ದಿ ಎರಡು ತಿಂಗಳಿಂದ ಹರಿದಾಡಿತ್ತು. ಇದರಲ್ಲಿ ಸಾಕಷ್ಟು ಗೌಪ್ಯ ಅಡಗಿದೆ. ಹೀಗಾಗಿ ಉನ್ನತ ಮಟ್ಟದ ತನಿಖೆ ಅಗತ್ಯವಿದೆ" ಎಂದು ಹೇಳಿದರು. ಮುಂದೆ ಓದಿ...

ಆತ್ಮಹತ್ಯೆ ಯತ್ನ : ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲು ಆತ್ಮಹತ್ಯೆ ಯತ್ನ : ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲು

 ಸಚಿವ, ವಿಧಾನ ಪರಿಷತ್ ಸದಸ್ಯರಿಂದ ಬೆದರಿಕೆ?

ಸಚಿವ, ವಿಧಾನ ಪರಿಷತ್ ಸದಸ್ಯರಿಂದ ಬೆದರಿಕೆ?

"ಸಂತೋಷ್ ಆತ್ಮಹತ್ಯೆ ಯತ್ನ ವಿಚಾರ ನನಗೆ ಗೊತ್ತಿದೆ. ಅವರ ಯಾವುದೋ ಒಂದು ವಿಡಿಯೋವನ್ನು ಬಳಸಿ ಒಬ್ಬ ಸಚಿವ ಹಾಗೂ ಎಂಎಲ್ ಸಿ ಬೆದರಿಕೆ ಹಾಕುತ್ತಿದ್ದರು. ಆ ವಿಡಿಯೋವನ್ನು ದೆಹಲಿ ನಾಯಕರಿಗೂ ಕೊಟ್ಟಿದ್ದಾರೆ ಎಂಬ ಮಾಹಿತಿ ಎರಡು ಮೂರು ತಿಂಗಳ ಹಿಂದೆಯೇ ತಿಳಿದಿತ್ತು. ಈ ಬಗ್ಗೆ ಅವರಿಗೆ ಬೇಸರವಾಗಿದೆ ಎಂದು ತಿಳಿದುಬಂದಿದೆ. ಈ ವಿಡಿಯೋ ಯಾರು ಕೊಟ್ಟಿದ್ದಾರೆ ಎಂಬುದು ಉನ್ನತ ಮಟ್ಟದ ತನಿಖೆ ಮೂಲಕ ಬಹಿರಂಗವಾಗಲಿ" ಎಂದು ಹೇಳಿದ್ದಾರೆ.

"ಸಂತೋಷ್ ಅವರಿಗೆ ಬ್ಲ್ಯಾಕ್ ಮೇಲ್ ಆಗಿರಬಹುದು"

ರಾಜಕೀಯ ಕಾರ್ಯದರ್ಶಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸರ್ಕಾರ ತನಿಖೆ ನಡೆಸುವುದಲ್ಲಿ ಅರ್ಥವಿಲ್ಲ. ಇದರಲ್ಲಿ ಸಾಕಷ್ಟು ಗೌಪ್ಯ ವಿಚಾರಗಳು ಅಡಗಿರುತ್ತವೆ. ಸಂತೋಷ್ ಅವರಿಗೆ ಬೆದರಿಸಿರಬಹುದು. ಸಿಎಂ ಅವರನ್ನೂ ಬೆದರಿಸಿರುವ ಸಾಧ್ಯತೆಗಳು ಇವೆ. ಆ ಎಂಎಲ್ ಸಿ ಹಾಗೂ ಸಚಿವರು ಇಬ್ಬರು ಬೆದರಿಸುತ್ತಿದ್ದರು ಎಂಬ ಮಾಹಿತಿ ಇತ್ತು ಎಂದು ಹೇಳಿದರು.

ಯಡಿಯೂರಪ್ಪ ಅವರ 'ಟ್ರಸ್ಟ್, ಸಂತೋಷ್ ಬೆಳೆದು ಬಂದ ದಾರಿಯಡಿಯೂರಪ್ಪ ಅವರ 'ಟ್ರಸ್ಟ್, ಸಂತೋಷ್ ಬೆಳೆದು ಬಂದ ದಾರಿ

"ಕಟೀಲ್ ಅವರನ್ನು ಆಸ್ಪತ್ರೆಗೆ ಸೇರಿಸುವ ಅನಿವಾರ್ಯತೆ ಇದೆ"

ಸಿದ್ದರಾಮಯ್ಯ ಅವರು ಮಾದಕ ದ್ರವ್ಯ ಹಣದಿಂದ ಸರ್ಕಾರ ನಡೆಸುತ್ತಿದ್ದರು ಎನ್ನುವ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಳಿನ್ ಕುಮಾರ್ ಗೆ ಹೆಚ್ಚುಕಮ್ಮಿ ಆಗಿರಬೇಕು. ಅವರನ್ನು ಆಸ್ಪತ್ರೆಗೆ ಸೇರಿಸುವ ಅನಿವಾರ್ಯತೆ ಇದೆ.

ನಾನು ಸಿದ್ದರಾಮಯ್ಯ ಅವರ ಸರ್ಕಾರದ ಭಾಗವಾಗಿದ್ದೆ. ನಮ್ಮ ಮೇಲೆ ಯಾಕೆ ಎಫ್ಐಆರ್ ಹಾಕಿಲ್ಲ? ಜವಾಬ್ದಾರಿಯುತ ಸ್ಥಾನದಲ್ಲಿ ಕೂತಿರುವ ಕಟೀಲ್ ಆ ಸ್ಥಾನಕ್ಕೆ ಗೌರವ ತರುವಂತೆ ನಡೆದುಕೊಳ್ಳಲಿ. ಅವರಿಗೆ ಅಲ್ಪಸ್ವಲ್ಪ ರಾಜಕೀಯ ಜ್ಞಾನ ಇದೆ ಎಂದುಕೊಂಡಿದ್ದೆ. ಒಂದು ಸರ್ಕಾರವನ್ನು ಡ್ರಗ್ಸ್ ಹಣದಿಂದ ನಡೆಸಲಾಗುತ್ತದೆ ಎಂಬ ಹೇಳಿಕೆ ಅವರ ಸ್ಥಾನಕ್ಕೆ ಕಳಂಕ ತರುವಂತಿದೆ ಎಂದು ಹೇಳಿದರು.

Recommended Video

Mohammad Nalapad Harris Part 01 | Oneindia Kannada
 ಬಿಜೆಪಿ ಆಂತರಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡಲ್ಲ;ಡಿಕೆಶಿ

ಬಿಜೆಪಿ ಆಂತರಿಕ ವಿಚಾರದಲ್ಲಿ ನಾವು ಹಸ್ತಕ್ಷೇಪ ಮಾಡಲ್ಲ;ಡಿಕೆಶಿ

ಗ್ರಾಮ ಪಂಚಾಯಿತಿ, ತಾಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಉಪ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ನಾನು ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೊದಲು ನಮ್ಮ ಮನೆ ಸರಿ ಮಾಡಿಕೊಳ್ಳುತ್ತಿದ್ದು, ಮಿಕ್ಕಿದ್ದು ಆಮೇಲೆ. ನಾವು ವಿರೋಧ ಪಕ್ಷದವರು. ನಮಗೂ ಬಿಜೆಪಿ ಆಂತರಿಕ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅವರು ಸರ್ಕಾರದಲ್ಲಿ ಯಾರನ್ನಾದರೂ ಸೇರಿಸಿಕೊಳ್ಳಲಿ ಅಥವಾ ತೆಗೆದುಹಾಕಲಿ ಅದಕ್ಕೂ ನಮಗೂ ಸಂಬಂಧ ಇಲ್ಲ. ಆದರೆ ಒಂದಂತೂ ನಿಜ. ನಮ್ಮ ಪಕ್ಷದಿಂದ ಕೆಲವರು ಅಲ್ಲಿಗೆ ಹೋಗಿದ್ದಾರೆ. ನಾವು ಅನುಭವಿಸಿದ್ದನ್ನು ಅವರೂ ಅನುಭವಿಸುತ್ತಾರೆ.

ನಾನು ಎಲ್ಲ ತನಿಖೆಗೂ ಸಹಕರಿಸುತ್ತೇನೆ. ನಾನು ತಪ್ಪು ಮಾಡಿಲ್ಲವಾದರೆ, ಯಾಕೆ ಹೆದರಬೇಕು? ಎಂದು ಹೇಳಿದರು.

English summary
KPCC President DK Shivakumar reacted to cm BS Yediyurappa political secretary NR Santhosh suicide attempt. He suggested for high level investigation on this issue,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X