• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್‌ ಬಿಟ್ಟ ಸಾರಿಗೆ ಇಲಾಖೆ

|

ಕಾರವಾರ, ಜೂನ್ 26: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಾಮುಖ್ಯತೆಯನ್ನು ಅರಿತ ಸರ್ಕಾರ ಕೊರೊನಾ ವೈರಸ್‌ ಸೋಂಕಿನ ನಡುವೆ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೆ ತಪ್ಪಿಸಬಾರದು ಎನ್ನುವ ಕಾರಣಕ್ಕೆ ಸಾರಿಗೆ ಇಲಾಖೆ ಶಿರಸಿಯ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್‌ ಬಿಟ್ಟದೆ.

   India China Face-Off : ಚೀನಾ ವಿಚಾರದಲ್ಲಿ ಭಾರತೀಯರಿಗೊಂದು ಸಿಹಿಸುದ್ದಿ.! | Oneindia Kannada

   ಶಿರಸಿಯ ಲಯನ್ಸ್ ಪರೀಕ್ಷಾ ಕೇಂದ್ರಕ್ಕೆ ಎಸ್‌ಎಸ್ಎಲ್‌ಸಿ ಪರೀಕ್ಷೆ ಬರೆಯಲು, ವಿದ್ಯಾರ್ಥಿ ಶ್ರೀಧರ ಗೌಡ ಹೋಗಬೇಕಿತ್ತು. ಆ ವಿದ್ಯಾರ್ಥಿಯ ಪರೀಕ್ಷೆ ಬರೆಯಲು ಕೆಎಸ್‌ಆರ್‌ಟಿಸಿ ಸಹಾಯ ಮಾಡಿದೆ. ಆದ್ದರಿಂದ ಒಬ್ಬ ವಿದ್ಯಾರ್ಥಿಗಾಗಿ ಒಂದು ಬಸ್ ವ್ಯವಸ್ಥೆ ಮಾಡಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

   SSLC ಪರೀಕ್ಷೆ‌ ಮುಗಿಸಿ ಹೊರಟಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ: ಒಬ್ಬ ಸಾವು, ಇಬ್ಬರ ಸ್ಥಿತಿ‌ ಗಂಭೀರ

   ಸಾರಿಗೆ ಇಲಾಖೆಯ ಈ ಕೆಲಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಂದಹಾಗೆ, ನಿನ್ನೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಶುರುವಾಗಿದೆ. ರಾಜ್ಯದಲ್ಲಿ 7.85 ಲಕ್ಷ ವಿದ್ಯಾರ್ಥಿಗಳಲ್ಲಿ 7.71 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದ 14 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದಾರೆ.

   ಮೊದಲ ದಿನ ದ್ವಿತೀಯ ಭಾಷೆ ಪರೀಕ್ಷೆ ನಡೆದಿದ್ದು ಕನ್ನಡ, ಇಂಗ್ಲೀಷ್ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆದಿದ್ದಾರೆ. ಕೊರೊನಾ ವೈರಸ್‌ ಸೋಂಕಿನ ನಡುವೆಯೇ ಪರೀಕ್ಷೆ ನಡೆಸುತ್ತಿದ್ದು, ಸರ್ಕಾರ ಎಲ್ಲಾ ರೀತಿಯ ಸುರಕ್ಷತ ಕ್ರಮಗಳನ್ನು ತೆಗೆದುಕೊಂಡಿದೆ. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ.

   English summary
   SSLC exam karnataka 2020: KSRTC arranged one bus for single student to attend the SSLC exam in Sirsi.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X