'ರಸ್ತೆಯಂಚಲ್ಲಿ ನಿಂತು ಮೋದಿ ಎಂದು ಕೂಗಿದ ಮಾತ್ರಕ್ಕೆ ಪ್ರಧಾನಿಯಾಗಲ್ಲ'

ಕಾರವಾರ, ಏಪ್ರಿಲ್ 04: ಒಂದು ನಾಲ್ಕು ಜನ ರಸ್ತೆಯಂಚಲ್ಲಿ ನಿಂತು ಮೋದಿ ಮೋದಿ ಎಂದು ಕೂಗಿದ ಮಾತ್ರಕ್ಕೆ ಮೋದಿ ಪ್ರಧಾನಿ ಆಗಲ್ಲ. ಜನ ಈ ಬಗ್ಗೆ ಚರ್ಚಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಆನಂದ ಅಸ್ನೋಟಿಕರ್ ಗುರುವಾರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೂ ಮೊದಲು ಹಮ್ಮಿಕೊಂಡ ಸಮಾವೇಶದಲ್ಲಿ ಮಾತನಾಡಿದ ಅವರು ಅನಂತಕುಮಾರ ಹೆಗಡೆ ಅವರ ಮಾತುಗಳನ್ನು ಕೇಳಿದರೆ ಅವರ ಸಂಸ್ಕೃತಿ ತಿಳಿಯುತ್ತದೆ. ಹಿಂದೂ ಸಂಸ್ಕೃತಿಯ ಪರಿಪಾಲಕರು ಎಂದು ಬಿಂಬಿಸಿಕೊಂಡು ಅನಾಗರಿಕ ಶಬ್ದಗಳನ್ನು ಬಳಕೆ ಮಾಡುತ್ತಾರೆ. ಅನಾಗರಿಕರೂ ಅಂತಹ ಶಬ್ದಗಳನ್ನು ಬಳಕೆ ಮಾಡುವುದಿಲ್ಲ. ದೇಶದ ಕಟ್ಟಕಡೆಯ ವ್ಯಕ್ತಿಗೂ ರಕ್ಷಣೆ ನೀಡುವ ಸಂವಿಧಾನ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಉದ್ಧಟತನದ ಮಾತನಾಡುತ್ತಾರೆ. ಐದು ಅವಧಿಗೆ ಆಯ್ಕೆಯಾದ ಅವರಿಂದ ಜಿಲ್ಲೆಗೆ ಕೊಡುಗೆಯೇನು ಎಂದು ಪ್ರಶ್ನಿಸಿದರು.

ವಿಧಾನಸಭೆ ಚುನಾವಣೆಗೆ ಮೊದಲು ಕರಾವಳಿಯಲ್ಲಿ ಹಿಂದುಳಿದ ಸಮುದಾಯದ ಯುವಕನೊಬ್ಬನ ಅನುಮಾನಾಸ್ಪದ ಸಾವಾಯಿತು. ಅದರ ಹಿಂದಿನ ಚಿತಾವಣೆಯೇನು?.ಹಿಂದುಳಿದ ಸಮಾಜದ ಯುವಕರನ್ನು ಮುಂದೆ ಬಿಟ್ಟು ಬಿಜೆಪಿ ನಾಯಕರು ತಮ್ಮ ರಾಜಕೀಯ ಉನ್ನತಿ ಮಾಡಿಕೊಂಡರು ಎಂದು ಟೀಕಿಸಿದರು.

Kumaraswamy talked about PM Narendra Modi

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಾತನಾಡುತ್ತ ಪಕ್ಷ ಅಧಿಕಾರಕ್ಕೆ ಬಂದರೆ ಎರಡು ತಿಂಗಳಲ್ಲಿ ಜಿಲ್ಲೆಗೆ ಬಂದು ಅರಣ್ಯ ಒತ್ತುವರಿಕಾರರ ಸಮಸ್ಯೆ ಪರಿಹರಿಸುವುದಾಗಿ ಹೇಳಿದ್ದೆ. ಆದರೆ, ಅದಾಗಲಿಲ್ಲ. ಬಿಜೆಪಿ ಮುಖಂಡರು ಮುಕ್ತವಾಗಿ ಮೈತ್ರಿ ಸರ್ಕಾರವನ್ನು ನಡೆಸಲು ಅವಕಾಶ ನೀಡಲಿಲ್ಲ. ಹಾಗಾಗಿ ಬರಲು ಸಾಧ್ಯವಾಗಲಿಲ್ಲ. ಇದಕ್ಕೆ ಜಿಲ್ಲೆಯ ಕ್ಷಮೆ ಕೋರುತ್ತೇನೆ ಎಂದ ಕುಮಾರಸ್ವಾಮಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಸಚಿವ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಅವರು ಗೈರು ಹಾಜರಾದರು.

Kumaraswamy talked about PM Narendra Modi

ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್, ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್, ವಿಧಾನಪರಿಷತ್ ಸದಸ್ಯ ಘೊಟ್ನೆಕರ್, ಮುಖಂಡರಾದ ಯು.ಆರ್.ಸಭಾಪತಿ, ಶಾರದಾ ಶೆಟ್ಟಿ, ಜೆ.ಡಿ.ನಾಯ್ಕ, ಶಶಿಭೂಷಣ ಹೆಗಡೆ, ಮಂಕಾಳ ವೈದ್ಯ ಸೇರಿದಂತೆ ಜೆಡಿಎಸ್, ಕಾಂಗ್ರೆಸ್‌ನ ಸ್ಥಳೀಯ ಮುಖಂಡರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+