ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಟ್ಕಳದಲ್ಲಿ ರಾತ್ರಿ ಗಸ್ತಿಗೂ ಸೈ ಎಂದ ಮಹಿಳಾ ಪೊಲೀಸರು!

By ಉತ್ತರ ಕನ್ನಡ ಪ್ರತಿನಿಧಿ
|
Google Oneindia Kannada News

ಕಾರವಾರ, ಜೂನ್ 21: ಅಡುಗೆ ಮನೆಗೆ ಮಾತ್ರ ಸೀಮಿತವಾಗಿದ್ದ ಹೆಣ್ಣು ಮಕ್ಕಳು ಇದೀಗ ಎಲ್ಲ ಕ್ಷೇತ್ರಗಳಲ್ಲಿಯೂ ಪುರುಷರಂತೆಯೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅದರಲ್ಲಿಯೂ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿಭಾಯಿಸುತ್ತಿರುವ ಮಹಿಳಾ ಪೊಲೀಸ್ ಸಿಬ್ಬಂದಿ ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಒಂದು ಹೆಜ್ಜೆ ಮುಂದೆ ಸಾಗಿ ರಾತ್ರಿ ಗಸ್ತಿನಲ್ಲಿಯೂ ಕಾರ್ಯನಿರ್ವಹಿಸುವ ಮೂಲಕ ತಾವೂ ಎಂತಹದೆ ಸ್ಥಿತಿಯಲ್ಲಿಯೂ ಕರ್ತವ್ಯ ನಿಭಾಯಿಸಬಲ್ಲೆವೂ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

3 ಗುಂಟೆಯಲ್ಲಿ 400ಕ್ಕೂ ಹೆಚ್ಚು ಗಿಡ-ಮರ ಬೆಳೆದ ನಿವೃತ್ತ ಅರಣ್ಯಾಧಿಕಾರಿ3 ಗುಂಟೆಯಲ್ಲಿ 400ಕ್ಕೂ ಹೆಚ್ಚು ಗಿಡ-ಮರ ಬೆಳೆದ ನಿವೃತ್ತ ಅರಣ್ಯಾಧಿಕಾರಿ

ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸರನ್ನು ರಾತ್ರಿ ಗಸ್ತಿಗೆ ನಿಯೋಜಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ರಾತ್ರಿ ಕರ್ತವ್ಯಕ್ಕೆ ಮಹಿಳಾ ಸಿಬ್ಬಂದಿಯನ್ನು ಕೇವಲ ಠಾಣೆಯಲ್ಲಿ ಮಾತ್ರ ನಿಯೋಜನೆ ಮಾಡುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ ಭಟ್ಕಳದಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸರ ತಂಡವನ್ನು ರಾತ್ರಿ ಗಸ್ತು ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ.

Lady police have first time night patrol in Bhatkal

ಪಿಎಸ್ಐ ಸುಮಾ.ಬಿ ನೇತೃತ್ವದಲ್ಲಿ ತಡರಾತ್ರಿ ವೇಳೆ ರಸ್ತೆಗಿಳಿದ ಮಹಿಳಾ ಪೊಲೀಸ್ ಸಿಬ್ಬಂದಿ, ಆಯಕಟ್ಟಿನ ಸ್ಥಳಗಳಲ್ಲಿ ನಿಂತು ವಾಹನ ತಪಾಸಣೆ ಕಾರ್ಯ ನಡೆಸುತ್ತಿದ್ದಾರೆ. ಮಾತ್ರವಲ್ಲದೆ ರಸ್ತೆಯಲ್ಲಿ ಓಡಾಡುವ ಸಂಶಯಾಸ್ಪದ ವ್ಯಕ್ತಿಗಳನ್ನು ತಡೆದು ವಿಚಾರಣೆಯನ್ನೂ ಸಹ ನಡೆಸುತ್ತಿದ್ದಾರೆ. ಯಾವುದೇ ಭಯವಿಲ್ಲದೆ ಮಹಿಳಾ ಪೊಲೀಸ್ ತಂಡ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗಸ್ತು ನಡೆಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ತಡರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೂ ನಿದ್ದೆ ಬಿಟ್ಟು ಗಸ್ತು ನಡೆಸಿದ್ದು ಇದು ಸಮಾಜದ ಇತರೆ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ನಾ ಪೆನ್ನೇಕರ್ ಸಿಬ್ಬಂದಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Lady police have first time night patrol in Bhatkal

ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ರಾತ್ರಿ ಗಸ್ತು ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಸಿಬ್ಬಂದಿ ತಂಡವನ್ನು ಮಾಡಿ ರಾತ್ರಿ ಗಸ್ತಿಗೆ ನಿಯೋಜಿಸುವ ಮೂಲಕ ಮಹಿಳಾ ಸಿಬ್ಬಂದಿಯ ಆತ್ಮಸ್ಥೈರ್ಯವನ್ನು ಹೆಚ್ಚಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಠಾಣೆಯಲ್ಲೂ ಹದಿನೈದು ದಿನಗಳಿಗೊಮ್ಮೆ ಮಹಿಳಾ ಸಿಬ್ಬಂದಿಗೆ ರಾತ್ರಿ ಗಸ್ತಿಗೆ ನಿಯೋಜಿಸಲು ಚಿಂತನೆ ನಡೆಸಲಾಗುತ್ತಿದೆ. ಜೊತೆಗೆ ಮಹಿಳೆಯರು ಹೆಚ್ಚಾಗಿ ಇಲ್ಲದ ವಿಭಾಗಗಳಿಗೂ ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಣೆಗೆ ಅವಕಾಶ ಒದಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

Lady police have first time night patrol in Bhatkal

ಇನ್ನು ಮಹಿಳಾ ಪೊಲೀಸ್ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿರುವುದನ್ನು ಕಂಡ ಸಾರ್ವಜನಿಕರು ಕೂಡ ಆಶ್ಚರ್ಯಗೊಂಡಿದ್ದಾರೆ. ಅಲ್ಲದೆ ಇದು ಇತರ ಮಹಿಳೆಯರಿಗೂ ಸ್ಪೂರ್ತಿದಾಯಕವಾಗಿದೆ. ಆದರೆ ಗಸ್ತಿನಲ್ಲಿ ಕೇವಲ ಮಹಿಳಾ ಪೊಲೀಸ್ ಸಿಬ್ಬಂದಿ ಇರುವ ಕಾರಣ ಅವರಿಗೂ ಇನ್ನಷ್ಟು ಸುರಕ್ಷತೆಯನ್ನು ಸರಕಾರ ಒದಗಿಸಬೇಕು. ಇಂತಹ ಕಾರ್ಯಗಳನ್ನು ಸಂಬಂದಪಟ್ಟ ಇಲಾಖೆ ಅಧಿಕಾರಿಗಳ ಮಾತ್ರ ಇರುವ ಕಾರಣ ಅವರ ಸುರಕ್ಷತೆಯ ಭಾವನೆ ಮೂಡುತ್ತದೆ ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

English summary
For the first time in Bhatkal, full women police team is patrolling the night. The public has praised the work of the team and called it is an initiative women's empowerment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X