Super-Speciality Hospital : ಉತ್ತರ ಕನ್ನಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ; ಸರ್ಕಾರದಿಂದ ಜಾಗ ಮಂಜೂರು
ಉತ್ತರ ಕನ್ನಡದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕುಮಟಾ ತಾಲೂಕಿನಲ್ಲಿ ಜಾಗ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಕಾರವಾರ, ಮಾರ್ಚ್ 09; ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನದ ಬೇಡಿಕೆಗೆ ಸರ್ಕಾರದ ಮನ್ನಣೆ ಸಿಕ್ಕಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಬೇಕು ಎಂದು ದೊಡ್ಡ ಹೋರಾಟವೇ ನಡೆದಿತ್ತು, ಸಾಮಾಜಿಕ ಜಾಲತಾಣದಲ್ಲಿಯೂ ಅಭಿಯಾನ ನಡೆಸಲಾಗಿತ್ತು.
ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಾಗಿ ಮೀಸಲಿಟ್ಟಿದ್ದ ಸರ್ವೆ ನಂಬರ್ 440 ಅ/ಬದ 15.35 ಎಕರೆ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ನೀಡಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಒಟ್ಟು 17.14 ಎಕರೆ ವಿಸ್ತೀರ್ಣದ ಜಾಗವನ್ನು ವಸತಿ ಶಾಲೆ ನಿರ್ಮಾಣಕ್ಕೆ ಮೀಸಲಿಡಲಾಗಿತ್ತು. ಕುಮಟಾದಲ್ಲಿ ಆಸ್ಪತ್ರೆ ಸ್ಥಾಪನೆಗೆ ಜಾಗದ ಕೊರತೆ ಇದ್ದ ಕಾರಣ ಈ ಜಾಗವನ್ನು ಮಂಜೂರು ಮಾಡಲಾಗಿದೆ.

ಕುಮಟಾ ತಾಲೂಕಿನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಾಗಿ ಮೀಸಲಿಟ್ಟಿದ್ದ 17.14 ಎಕರೆ ವಿಸ್ತೀರ್ಣದ ಜಾಗದಲ್ಲಿ 15.35 ಎಕರೆ ಜಾಗವನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ನೀಡಲು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಸಲ್ಲಿಸಿದ್ದ ಪ್ರಸ್ತಾಪ ಆಧರಿಸಿ ಜಾಗ ಮಂಜೂರು ಮಾಡಲಾಗಿದೆ. ಆದರೆ ಈ ಜಾಗಕ್ಕೆ ಪರ್ಯಾಯ ಭೂಮಿಯನ್ನು ಜಿಲ್ಲಾಧಿಕಾರಿಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ನೀಡಬೇಕು ಎಂದು ಷರತ್ತು ಹಾಕಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ಶಂಭುಲಿಂಗಯ್ಯ ಈ ಕುರಿತು ಆದೇಶ ಹೊರಡಿಸಿದ್ದಾರೆ. ಈ ಆದೇಶದ ವಿಷಯ ಉತ್ತರ ಕನ್ನಡ ಜಿಲ್ಲೆ, ಕುಮಟಾ ತಾಲೂಕಿನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗೆ ಕಾಯ್ದಿರಿಸಿದ ಜಮೀನಿನ ಉದ್ದೇಶ ಬದಲಾವಣೆ ಕುರಿತು ಎಂದು ಇದೆ. ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ಇವರ ಏಕ ಕಡತಗಳನ್ನು ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ.

ಆದೇಶದಲ್ಲಿ ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಂದ, ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಕುಮಟಾ ಗ್ರಾಮದ ಸರ್ವೆ ನಂ. 440 ಅ/ಬ ರ ಪ್ರತಿ ಕ್ಷೇತ್ರ 17.14 ಅನ್ನು ಏಕಲವ್ಯ ಮಾದರಿ ವಸತಿ ಶಾಲೆಯ ಕಟ್ಟಡ ನಿರ್ಮಾಣಕ್ಕಾಗಿ ಕಾಯ್ದಿರಿಸಿರುವ ಜಮೀನಿನ ಪೈಕಿ 15.35 ಜಮೀನನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹಿಂದಿರುಗಿಸುವ ಷರತ್ತಿಗೊಳಪಟ್ಟು, ಸೂಪರ್ ಸ್ಪೆಪಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ ಇವರಿಗೆ ಹಂಚಿಕೆ ಮಾಡಿ ಆದೇಶಿಸಿದೆ ಎಂದು ತಿಳಿಸಲಾಗಿದೆ.
ಪ್ರಸ್ತಾವನೆಯಲ್ಲಿ ಏನಿದೆ?; ಆದೇಶದಲ್ಲಿ ಏಕ ಕಡತದಲ್ಲಿ ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರು ಉತ್ತರ ಕನ್ನಡ ಜಿಲ್ಲೆ, ಕುಮಟಾ ತಾಲೂಕಿನ ಕುಮಟಾ ಗ್ರಾಮದ ಸರ್ವೆ ನಂ. 440 ಅ/ಬರ ಪೈಕಿ ಕ್ಷೇತ್ರ 17.14 ಅನ್ನು ಏಕಲವ್ಯ ಮಾದರಿ ವಸತಿ ಶಾಲೆಯ ಕಟ್ಟಡ ನಿರ್ಮಾಣಕ್ಕಾಗಿ ಕಾಯ್ದಿರಿಸಲಾಗಿದ್ದು, ಸದರಿ ಜಮೀನಿನಲ್ಲಿ 15.35 ಎಕರೆ ಜಮೀನನ್ನು ಹಿಂದಕ್ಕೆ ಪಡೆದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ ಕೋರಿರುವ ಹಿನ್ನೆಲೆಯಲ್ಲಿ ಸದರಿ ಜಮೀನನ್ನು ಹಿಂದಿರುಗಿಸುವ ಬಗ್ಗೆ ಸೂಕ್ತ ನಿರ್ದೇಶನ ನೀಡುವಂತೆ ದಿನಾಂಕ 15/02/2023ರಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ ಅವರು ಕೋರಿರುತ್ತಾರೆ.
ಆದಕಾರಣ ಏಕಲವ್ಯ ಮಾದರಿ ವಸತಿ ಶಾಲೆಯ ನಿರ್ಮಾಣಕ್ಕಾಗಿ ಉತ್ತರ ಕನ್ನಡ ಜಿಲ್ಲೆ, ಕುಮಟಾ ತಾಲೂಕು ಕುಮಟಾ ಗ್ರಾಮದ ಸರ್ವೆ ನಂ. 440 ಅ/ಬ ರಲ್ಲಿ ಮಂಜೂರಾಗಿರುವ 17.14 ಎಕರೆ ಜಮೀನಿನ ಪೈಕಿ 15.35 ಜಮೀನನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ ಅವರು ಕೋರಿರುವ ಹಿನ್ನಲೆಯಲ್ಲಿ, ಈ ಸಂಬಂಧ ಬದಲಿ ನಿವೇಶನವನ್ನು ಜಿಲ್ಲಾಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ ಅವರು ಪರಿಶಿಷ್ಯ ವರ್ಗಗಳ ಕಲ್ಯಾಣ ಇಲಾಖೆಗೆ ನೀಡುವ ಪರತ್ತಿಗೊಳಪಟ್ಟು, 15.35 ಎಕರೆ ಜಮೀನನ್ನು ಹಿಂದಿರುಗಿಸುವ ಕುರಿತು ಸರ್ಕಾರದ ಅನುಮೋದನೆ ನೀಡುವಂತೆ ಕೋರಿರುತ್ತಾರೆ. ಮೇಲ್ಕಂಡ ಪುಸ್ತಾವನೆಯನ್ನು ಪರಿಶೀಲಿಸಿ, ಸರ್ಕಾರವು ಜಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಬೇಕು ಎಂದು ದೊಡ್ಡ ಹೋರಾಟವೇ ನಡೆದಿತ್ತು. ವಿಧಾನಸಭೆಯಲ್ಲಿ ಈ ಕುರಿತು ಚರ್ಚೆಯೂ ಆಗಿತ್ತು. ಬಳಿಕ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದ ಹಣಕಾಸು ಸಚಿವ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications