ಇನ್ನೇನು ಭರ್ತಿಯಾಗಲಿದೆ ಲಿಂಗನಮಕ್ಕಿ, ಜಾಗ ಬಿಟ್ಟು ಹೊರಡಿ

Recommended Video

      ಇನ್ನೇನು ಭರ್ತಿಯಾಗಲಿದೆ ಲಿಂಗನಮಕ್ಕಿ, ಜಾಗ ಬಿಟ್ಟು ಹೊರಡಿ | Oneindia Kannada

      ಕಾರವಾರ, ಜುಲೈ 23: ಹೊನ್ನಾವರ ತಾಲ್ಲೂಕು ವ್ಯಾಪ್ತಿಯ ಶರಾವತಿ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಲಿಂಗನಮಕ್ಕಿ ಜಲಾಶಯ ಸಂಪೂರ್ಣ ಭರ್ತಿಯಾಗುವ ಸಾಧ್ಯತೆ ದಟ್ಟವಾಗಿದೆ.

      ಮುನ್ನೆಚ್ಚರಿಕಾ ಕ್ರಮವಾಗಿ ಅಣೆಕಟ್ಟಿನ ಕೆಳದಂಡೆಯಲ್ಲಿ ಇರುವವರು ತಮ್ಮ ಸರಂಜಾಮುಗಳೊಂದಿಗೆ ಸುರಕ್ಷತಾ ಸ್ಥಳಕ್ಕೆ ತೆರಳುವಂತೆ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ಸೂಚನೆ ಹೊರಡಿಸಿದೆ.

      ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟ 1,819 ಅಡಿ ಇದ್ದು, ಸೋಮವಾರ ಬೆಳಗ್ಗೆ 1,802.30 ಅಡಿ ಭರ್ತಿಯಾಗಿದೆ. ಜಲಾಶಯದಲ್ಲಿ ಒಳಹರಿವು 28,799 ಕ್ಯೂಸೆಕ್ ಇದ್ದು, ಇದೇ ರೀತಿ ನೀರಿನ ಒಳಹರಿವು ಮುಂದುವರಿದಲ್ಲಿ ಗರಿಷ್ಠ ಮಟ್ಟವನ್ನು ಮೀರುವ ಸಾಧ್ಯತೆ ಇದೆ.

      Linganamakki

      ಹೀಗಾಗಿ, ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ನೀರನ್ನು ಹೊರ ಬಿಡಲಾಗುವುದು ಎಂದು ಕೆಪಿಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ. ಲಿಂಗನಮಕ್ಕಿ ಜಲಾಶಯದಿಂದ ಬಿಟ್ಟ ನೀರು ಗೇರುಸೊಪ್ಪ ಜಲಾಶಯಕ್ಕೆ ಹರಿದು ಬರಲಿದೆ. ಆದರೆ ಈ ಹೊರ ಬಿಡುವ ಹೆಚ್ಚುವರಿ ನೀರನ್ನು ಸಂಗ್ರಹಿಸುವ ಅವಕಾಶ ಗೇರುಸೊಪ್ಪದಲ್ಲಿ ಇಲ್ಲದ ಕಾರಣ ಇಲ್ಲಿನ ಅಣೆಕಟ್ಟಿನಿಂದ ಹೊರಬಿಡಲಾಗುವುದು ಎಂದು ತಿಳಿಸಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+