• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಸಂತ ಅಸ್ನೋಟಿಕರ್ ಕೊಲೆ; ಗುಂಡಿಕ್ಕಿದವನಿಗೆ ಜೀವಾವಧಿ ಶಿಕ್ಷೆ

By ಕಾರವಾರ ಪ್ರತಿನಿಧಿ
|

ಕಾರವಾರ, ಏಪ್ರಿಲ್ 20; ಕಾರವಾರ ಶಾಸಕರಾಗಿದ್ದ ವಸಂತ ಆಸ್ನೋಟಿಕರ್ ಹತ್ಯೆ ಮಾಡಿದ್ದ ಸಂಜಯ್ ಮೋಹಿತೆಗೆ ಜೀವಾವಧಿ ಶಿಕ್ಷೆ ಹಾಗೂ 68,000 ರೂ. ದಂಡ ವಿಧಿಸಿ ಶಿರಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. 19/02/2000ದಂದು ಕೊಲೆ ನಡೆದಿತ್ತು.

ಕಾರವಾರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಮ್ಮ ಮಗಳ ಮದುವೆ ಆರತಕ್ಷತೆಯ ತಯಾರಿಯನ್ನು ನೋಡಿಕೊಂಡು ಮನೆಗೆ ಹೊರಡುವ ಸಲುವಾಗಿ ಕಲ್ಯಾಣ ಮಂಟಪದ ಎದುರಿನ ರಸ್ತೆಯ ಪಕ್ಕದಲ್ಲಿ ಇತರರೊಂದಿಗೆ ನಿಂತುಕೊಂಡಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವಸಂತ ಅನ್ನೋಟಿಕರ್ ಅವರ ಮೇಲೆ ಗುಂಡು ಹಾರಿಸಿದ್ದರು.

ಈ ವೇಳೆ ಹಿಂಬದಿಯ ಸವಾರನಾಗಿದ್ದ ರಾಜನ್ ಅಲಿಯಾಸ್ ಸಂಜಯ್ ಮೋಹಿತ್ ಹಾರಿಸಿದ್ದ ನಾಲ್ಕು ಗುಂಡು ವಸಂತ ಅಸ್ನೋಟಿಕರ್ ಅವರ ದೇಹಕ್ಕೆ ಹೊಕ್ಕಿತ್ತು, ಅವರು ತೀವ್ರವಾಗಿ ಗಾಯಗೊಂಡಿದ್ದರು. ಮಣಿಪಾಲ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದರು.

ಸಂಜಯ್ ಮೋಹಿತನೊಂದಿಗೆ ಭಾಗಿಯಾಗಿದ್ದ ಓಂ ಪ್ರಕಾಶ್ ಅಲಿಯಾಸ್ ಪಕ್ಕಾ ಹಾಗೂ ಅಂತೋನಿಯು ದೋಷಾರೋಪಣೆ ಪಟ್ಟಿ ಸಲ್ಲಿಸುವ ಪೂರ್ವದಲ್ಲಿ ಮುಂಬೈ ಪೊಲೀಸರಿಂದ ಎನ್ ಕೌಂಟರ್ ನಲ್ಲಿ ಮೃತಪಟ್ಟಿದ್ದರು. ವಸಂತ ಅಸ್ನೋಟಿಕರ್ ಕೊಲೆಗೆ ಸಂಜಯ್ ಮೊಹಿತೆಗೆ ಸುಪಾರಿ ನೀಡಿದ್ದ. ಈ ಪ್ರಕರಣದ ಮುಖ್ಯ ಆರೋಪಿ ದಿಲೀಪ್ ನಾಯ್ಕನು ಪ್ರಕರಣದ ವಿಚಾರಣೆಯ ಹಂತದಲ್ಲಿ ಮೃತಪಟ್ಟಿದ್ದಾನೆ. ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದ 2 ಮತ್ತು ಮೂರನೇ ಆರೋಪಿಯನ್ನು ನ್ಯಾಯಾಲಯ ಬಿಡುಗಡೆಗೊಳಿಸಿದೆ.

ವಸಂತ ಅಸ್ನೋಟಿಕರ್ ಕೊಲೆ ಪ್ರಕರಣ ಕಾರವಾರ ನಗರ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣ ಕಾರವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಿಂದ ಶಿರಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿತ್ತು.

   'ಕೊರೊನಾ ಚೈನ್‌‌ ಲಿಂಕ್‌ ಕಟ್‌ ಮಾಡಲು 14 ದಿನಗಳ ಕಠಿಣ ಕ್ರಮ ಅಗತ್ಯ'- ಆರೋಗ್ಯ ಸಚಿವ ಕೆ.ಸುಧಾಕರ್‌ | Oneindia

   ಈ ಪ್ರಕರದ ವಿಚಾರಣೆ ನಡೆಸಿದ ನ್ಯಾಯಾಧೀಶ ಶಾಂತವೀರ ಶಿವಪ್ಪ ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳ ವಾದಿಸಿದ್ದರು. ಬೆಂಗಳೂರು ಸಿಒಡಿ ಡಿಎಸ್ ಪಿ. ಬಿ. ಎಸ್. ಎಸ್ ರಾವ್ ಅವರು ಪ್ರಾಥಮಿಕ ಹಂತದಲ್ಲಿ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು, ಇನ್ನೋರ್ವ ಡಿ.ಎಸ್.ಪಿಗಳಾದ ರಫೀಕ ಮುಲ್ಲಾ ಹಾಗೂ ಲವಕುಮಾರ ರವರು ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

   English summary
   Sanjay Mohit sentenced to life imprisonment in murder case of Karwar MLA Vasant Asnotikar.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X