ಕಾರವಾರ: ಅಂಕೋಲ ಬಳಿ ಭೀಕರ ಅಪಘಾತ ನಾಲ್ಕು ಸಾವು
ಕಾರವಾರ, ಫೆಬ್ರವರಿ 14: ಕಾರವಾರದ ಅಂಕೋಲ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಅಂಕೋಲದ ರಾಷ್ಟ್ರೀಯ ಹೆದ್ದಾರಿ-66 ರ ಬಳಿ ಟ್ಯಾಂಕರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ಭೀಕರತೆಗೆ ಕಾರು ನಜ್ಜು-ಗುಜ್ಜಾಗಿದೆ.
ಕಾರಿನಲ್ಲಿದ್ದವರನ್ನು ಬೆಂಗಳೂರು ಗ್ರಾಮಾರಂತರ ಜಿಲ್ಲೆ ದೊಡ್ಡಬಳ್ಳಾಪುರದವರು ಎನ್ನಲಾಗಿದ್ದು, ರಮೇಶ್ ಮತ್ತು ಮೀನಾ ಎಂದಿಬ್ಬರನ್ನು ಗುರುತಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಆಗಿಲ್ಲ. ಒರಿಸ್ಸಾ ರಾಜ್ಯದ ನೊಂದಣಿಯ ಕಾರಿನಲ್ಲಿ ಇವರು ಪ್ರಯಾಣಿಸುತ್ತಿದ್ದರು.

ಕಾರಿನಲ್ಲಿ ಒಟ್ಟು ಐದು ಮಂದಿ ಪ್ರಯಾಣಿಕರಿದ್ದು, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ, ಒಬ್ಬ ಯುವತಿಯನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ ಆದರೂ ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
ಇವರೆಲ್ಲರೂ ಸ್ನೇಹಿತರಾಗಿದ್ದು, ಗೋವಾಗೆ ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಪಘಾತದ ನಂತರ ಟ್ಯಾಂಕರ್ ಚಾಲಕ ಪರಾರಿಯಾಗಿದ್ದು, ಘಟನೆಯಿಂದಾಗಿ ಕೆಲಕಾಲ ಈ ಮಾರ್ಗದಲ್ಲಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಪ್ರಕರಣದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.











Click it and Unblock the Notifications