• search
  • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಸ್ತೆ ಅಪಘಾತ; ಗಾಯಗೊಂಡವರಿಗೆ ನೆರವಾದ ಸಚಿವರು

By ಕಾರವಾರ ಪ್ರತಿನಿಧಿ
|

ಕಾರವಾರ, ಮಾರ್ಚ್ 01: ಬೈಕ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಮಗು ಹಾಗೂ ದಂಪತಿಯನ್ನು ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ಸೇರಿಸಲು ನೆರವಾದರು.

ಕುಮಟಾ ಪಟ್ಟಣದ ಮನ್ಸೂರ್ ಶೇಖ್ ಹಾಗೂ ನಜಿಯಾ ಶೇಖ್ ಎನ್ನುವವರು ತಮ್ಮ ಮೂರು ವರ್ಷದ ಮಗು ಸಾಧಿಖ್ ಜೊತೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತೆರಳುವಾಗ ನಾಯಿ ಅಡ್ಡ ಬಂದಿದೆ.

ರಾಜ್ಯದ ಖಾಸಗಿ ದೇವಸ್ಥಾನಗಳನ್ನೂ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಸರ್ಕಾರ: ಕೋಟಾ

ಈ ಸಮಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಮೂವರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಅದೇ ಹೊತ್ತಿಗೆ ಅದೇ ಮಾರ್ಗದಲ್ಲಿ ಉಡುಪಿಯಿಂದ ಶಿರಸಿಯ ಸ್ವರ್ಣವಲ್ಲಿ ಮಠದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕಾರು ನಿಲ್ಲಿಸಿ ವಿಚಾರಿಸಿದ್ದಾರೆ.

ಸ್ವಿಮ್ಮಿಂಗ್ ಪೂಲ್ ಆದ ರಸ್ತೆ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾರು ತಡೆದು ಜನರಿಂದ ಕ್ಲಾಸ್!

ಅಂಬುಲೆನ್ಸ್ ಬರದ ಕಾರಣ ತಮ್ಮದೇ ಕಾರಿನಲ್ಲಿ ಗಾಯಗೊಂಡವರನ್ನು ಹೊಳೆಗದ್ದೆ ಟೋಲ್ ಗೇಟ್ ವರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿನ ಆಂಬುಲೆನ್ಸ್ ಮೂಲಕ ಕುಮಟಾದ ತಾಲೂಕು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದ್ದಾರೆ.

ಶಿರಸಿ-ಕುಮಟಾ ರಸ್ತೆ: ಹೈಕೋರ್ಟ್ ಅನುಮತಿ ಪಡೆಯದೇ ಮರ ತೆರವು

ಪ್ರಾಥಮಿಕ ಚಿಕಿತ್ಸೆ ಬಳಿಕ ಗಾಯಗಳನ್ನು ಕುಮಟಾ ತಾಲೂಕು ಆಸ್ಪತ್ರೆಯಿಂದ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಸಮಯಕ್ಕೆ ಸರಿಯಾಗಿ ಗಾಯಾಳುಗಳು ಆಸ್ಪತ್ರೆ ಸೇರಿಸಲು ನೆರವಾದ ಸಚಿವರ ಮಾನವೀಯತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

English summary
Minister for muzrai Kota Srinivas Poojary helped road accident victims in Kumata, Uttara Kannada district. Three members of family met with accident in national highway 66.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X