• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನೂತನ ಎಂಎಲ್ಸಿ ಶಾಂತಾರಾಮ ಸಿದ್ದಿಯವರ ಮನೆಗೆ ಸಚಿವರ ಭೇಟಿ

|

ಕಾರವಾರ, ಜುಲೈ 25: ಕರ್ನಾಟಕ ವಿಧಾನ ಪರಿಷತ್ತಿನ ನೂತನ ನಾಮನಿರ್ದೇಶಿತ ಸದಸ್ಯ ಬುಡಕಟ್ಟು ಸಿದ್ದಿ ಜನಾಂಗದ ಶಾಂತಾರಾಮ ಸಿದ್ದಿಯವರ ಯಲ್ಲಾಪುರ ಬಳಿಯ ಹಿತ್ಲಳ್ಳಿಯ ಮನೆಗೆ ಹಿಂದೂ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು.

   Operation White Wash ರಹಸ್ಯ ಆಪರೇಷನ್ ವೈಟ್ ವಾಶ್ ಕಂಪ್ಲೀಟ್ ಮಾಹಿತಿ | Oneindia Kannada

   ಶಾಂತರಾಮ ಸಿದ್ದಿಯವರ ಮನೆಗೆ ಭೇಟಿ ನೀಡಿದ ಕೋಟ ಅವರು, "ಕಾಡು-ಮೇಡು, ಗುಡ್ಡ-ಬೆಟ್ಟಗಳಲ್ಲಿ ಬದುಕಿ‌ ಬಾಳುತ್ತಿರುವ, ಕಾಡಿನ ಮಕ್ಕಳೆಂದೆ ಪರಿಗಣಿಸಲ್ಪಡುತ್ತಿರುವ ವನವಾಸಿಗಳನ್ನು ಒಟ್ಟುಗೂಡಿಸಿ ಆ ಜನಾಂಗದಲ್ಲಿ ರಾಷ್ಟ್ರೀಯತೆ ಮತ್ತು ರಾಷ್ಟ್ರ ಭಕ್ತಿ ಮೂಡಿಸುತ್ತಿರುವ ಶಾಂತರಾಮ ಸಿದ್ದಿಯವರನ್ನು ವಿಧಾನ ಪರಿಷತ್ತಿಗೆ ನಾಮಕರಣ ಮಾಡಿದ್ದು ನಮ್ಮ ಸರ್ಕಾರಕ್ಕೊಂದು ಹೆಮ್ಮೆ" ಎಂದರು.

   ಸಿದ್ದಿ ಜನಾಂಗದ ಏಳಿಗೆಯ ಕೈ ಶಾಂತಾರಾಮ ಸಿದ್ದಿ

   ಕಡು ಬಡತನದಲ್ಲಿ ಬದುಕಿ ಬಾಳುತ್ತಿದ್ದ ಶಾಂತರಾಮ ಸಿದ್ದಿಯವರನ್ನು ಶಾಸಕರನ್ನಾಗಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪನವರ ಸಹಿತ, ನಮ್ಮ ಪಕ್ಷದ ಸರ್ವರು ಅಭಿನಂದನಾರ್ಹರು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ, ತಾಲೂಕು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

   English summary
   Minister Kota Srinivasa Pujari visited newly nominated MLC Shantarama Siddi house in yallapur and congratulated him,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X