ಕಾರವಾರ: ಸಚಿವ ದೇಶಪಾಂಡೆ ಬೆಂಗಾವಲು ವಾಹನ ಪಲ್ಟಿ
ಕಾರವಾರ, ಜೂನ್ 15: ಕಂದಾಯ ಸಚಿವ ಆರ್ ವಿ ದೇಶಪಾಂಡೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಶನಿವಾರ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದ್ರಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಬೆಂಗಾವಲು ವಾಹನದಲ್ಲಿದ್ದ ಮಾರುತಿ ನಾಯ್ಕ್ ಮತ್ತು ಚಾಲಕ ರಾಜೇಶ್ ನಾಯ್ಕ್ ಎಂಬುವವರಿಗೆ ಗಾಯಗಳಾಗಿದ್ದು, ಉತ್ತರ ಕನ್ನಡದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಕದ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಬೆಂಗಾವಲು ಪಡೆ ವಾಹನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಆರ್ ವಿ ದೇಶಪಾಂಡೆ ಅವರು ಜಿಲ್ಲೆಯ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅವರ ಬೆಂಗಾವಲು ವಾಹನ ಉರುಳಿಬಿದ್ದಿದೆ.












Click it and Unblock the Notifications