ಉತ್ತರ ಕನ್ನಡ: ಕುಮಟಾದಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ- ಶೀಘ್ರದಲ್ಲೇ ಯೋಜನೆಗೆ ಅನುಮೋದನೆ
ಕಾರವಾರ, ಅಕ್ಟೋಬರ್, 11; ಉತ್ತರ ಕನ್ನಡ ಜಿಲ್ಲೆಯ ಜನರ ಆಸೆಯಂತೆಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಕುಮಟದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಯೋಜನೆಗೆ ಅನುಮೋದನೆ ನೀಡಿ ಅನುದಾನವನ್ನು ನಿಗದಿ ಮಾಡಲಾಗುವುದು. ಈ ಹಿಂದೆ ಆಯ್ಕೆ ಮಾಡಿದ್ದ 3 ಸ್ಥಳಗಳ ಪೈಕಿ ಮಿರ್ಜಾನ್ ಬಳಿಯಿರುವ ಸ್ಥಳವನ್ನು ಅಂತಿಮ ಮಾಡಲು ಚರ್ಚೆ ಆಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಾರವಾರದಲ್ಲಿ ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕುಮಟದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಹಾಗೂ ಆರೋಗ್ಯ ಇಲಾಖೆ ಪರಿಶೀಲನೆ ಸಂಬಂಧ ಸಚಿವ ಡಾ.ಕೆ.ಸುಧಾಕರ್ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಕಾರವಾರದಲ್ಲಿ ಸಭೆ ನಡೆಸಿದರು. ಜೊತೆಗೆ ಕುಮಟದಲ್ಲಿ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಹಿತಿ ಮಾತನಾಡಿದ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಜನರು ಹೋರಾಟ ಮಾಡಿದ್ದರು. ಅಧಿವೇಶನದಲ್ಲಿ ಸರ್ಕಾರ ಇದಕ್ಕೆ ಭರವಸೆಯನ್ನು ನೀಡಿದ್ದು, ಇದೀಗ ಬಿಜೆಪಿ ಸರ್ಕಾರ ನುಡಿದಂತೆ ನಡೆದುಕೊಂಡಿದೆ. ಅಷ್ಟೇ ಅಲ್ಲ ಕಾರಾವಾರ ವೈದ್ಯಕೀಯ ಕಾಲೇಜ್ ಅನ್ನು ಮೇಲ್ದರ್ಜೆಗೆ ಏರಿಸಿ, ಎಂಐಆರ್ ಉಪಕರಣಗಳಿಗೆ ಸ್ಥಳದಲ್ಲೇ ಮಂಜೂರಾತಿ ಮಾಡಲಾಗಿದೆ. ಕ್ರಿಟಿಕಲ್ ಕೇರ್ ಆಸ್ಪತ್ರೆಯನ್ನು ಕೂಡ ವೈದ್ಯಕೀಯ ಕಾಲೇಜು ಆವರಣದಲ್ಲಿ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಹುದ್ದೆಗಳ ಹೆಚ್ಚಳ
ಸೂಪರ್ ಸ್ಪೆಶಲೈಸೇಶನ್ ಆರೋಗ್ಯ ವ್ಯವಸ್ಥೆ ಉತ್ತರ ಕನ್ನಡದಲ್ಲಿ ಇಲ್ಲ. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಎಂಟು ಹುದ್ದೆಗಳ ನೇಮಕಕ್ಕೆ ಅನುಮತಿ ನೀಡಲಾಗಿದೆ. ಆದರೆ ನೆಪ್ರೊಲಜಿಸ್ಟ್ ಮಾತ್ರ ಭರ್ತಿ ಆಗಿದೆ. ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿರುವಂತೆ ಮಲ್ಟಿ ಸ್ಪೆಶಲೈಸೇಶನ್ ತಜ್ಞರು ಇರುವಂತಹ ವ್ಯವಸ್ಥೆಯನ್ನು ಇಲ್ಲಿ ತರಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ 38.75 ಲಕ್ಷ ಜನರಿಗೆ ವಿಮೆ ಸೇವೆ
ಜಿಲ್ಲೆಯಲ್ಲಿ ಈವರೆಗೆ 2 ಲಕ್ಷ ಆಯುಷ್ಮಾನ್ ಕಾರ್ಡ್‌ಗಳನ್ನು ನೀಡಿದ್ದು, ಡಿಸೆಂಬರ್ ಅಂತ್ಯದೊಳಗೆ 11.50 ಲಕ್ಷ ಕಾರ್ಡ್ ವಿತರಿಸಲಾಗುವುದು. ಈವರೆಗೆ ರಾಜ್ಯದಲ್ಲಿ 38.75 ಲಕ್ಷ ಜನರಿಗೆ ಈ ಯೋಜನೆಯಡಿ ವಿಮೆ ಸೇವೆ ದೊರೆತಿದೆ. ಇದಕ್ಕೆ 5,133 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಕಾರವಾರ ಆಸ್ಪತ್ರೆಗೆ ಎಂಆರ್‌ಐ ಯಂತ್ರವನ್ನು ಕೂಡಲೇ ಮಂಜೂರು ಮಾಡಲಾಗಿದೆ. ಹಾಗೆಯೇ ಡಯಾಲಿಸಿಸ್ ಯಂತ್ರ, 10 ಐಸಿಯು, ಆರ್ಥೊಸ್ಕೋಪಿ ಉಪಕರಣ ಮಂಜೂರು ಮಾಡಲಾಗಿದೆ. ಕ್ರಿಟಿಕಲ್ ಕೇರ್ ಆಸ್ಪತ್ರೆ ಮಂಜೂರು ಮಾಡಿದ್ದು, ಶೀಘ್ರ ಭೂಮಿ ಪೂಜೆ ನಡೆಯಲಿದೆ. ಶಿರಸಿ ತಾಲೂಕು ಕೇಂದ್ರದಲ್ಲಿ 250 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಲಿದೆ. ಇದಕ್ಕೆ ಕೆಲವೇ ವಾರಗಳಲ್ಲಿ ಭೂಮಿ ಪೂಜೆ ನಡೆಯಲಿದೆ ಎಂದರು.
ಶಿರಸಿ, ಅಂಕೋಲ, ಯಲ್ಲಾಪುರ, ಕಾರವಾರ, ಸಿದ್ದಾಪುರದಲ್ಲಿ ಮೆಡಿಕಲ್ ಮೊಬೈಲ್ ಘಟಕ ಮಾಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ 37 ಎಂಬಿಬಿಎಸ್, 15 ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ. ಕಡ್ಡಾಯ ಸೇವೆಯಡಿ 81 ಎಂಬಿಬಿಎಸ್, 10 ತಜ್ಞ ವೈದ್ಯರನ್ನು ಸೆಪ್ಟೆಂಬರ್‌ನಿಂದ ನಿಯೋಜಿಸಲಾಗಿದೆ. 27 ತಜ್ಞ ವೈದ್ಯರ ಕೊರತೆ ಇದ್ದು, ಇದಕ್ಕೂ ಕ್ರಮ ವಹಿಸಲಾಗುವುದು ಎಂದರು. ಎರಡು ತಾಲೂಕು ಆಸ್ಪತ್ರೆಗಳಲ್ಲಿ ಮಾತ್ರ ಜನ ಔಷಧಿ ಕೇಂದ್ರ ಇದೆ. ಆದ್ದರಿಂದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಜನ ಔಷಧಿ ಕೇಂದ್ರಗಳನ್ನು ಒಂದು ತಿಂಗಳೊಳಗೆ ಆರಂಭಿಸಲು ಸೂಚಿಸಲಾಗಿದೆ ಎಂದರು.

ಕಾಂಗ್ರೆಸ್ ವಿರುದ್ದ ಸುಧಾಕರ್ ಆಕ್ರೋಶ
ಸಂಕಲ್ಪ ಮತ್ತು ಮಹಾತ್ವಕಾಂಕ್ಷೆ ಇಟ್ಟುಕೊಂಡು ಜನರ ಸ್ಥಿತಿಗತಿಯನ್ನು ಬದಲಾವಣೆ ಮಾಡುವ ಎಲ್ಲಾ ಕೆಲಸಗಳನ್ನು ಯಶಸ್ವಿಯಾಗಿ ಸರ್ಕಾರ ಮಾಡುತ್ತಿದೆ. "ಕಾಂಗ್ರೆಸ್ ಅನೇಕ ವರ್ಷಗಳಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳನ್ನು ಉದ್ದಾರ ಮಾಡುವ ಆಶ್ವಾಸನೆಯನ್ನು ಮಾತ್ರ ಕೊಟ್ಟಿತ್ತು. ಆದರೆ ಬಿಜೆಪಿ ಸರ್ಕಾರ ತರ್ಕಬದ್ಧವಾಗಿ ಈ ಕೆಲಸವನ್ನು ಮಾಡಿದೆ." ಜನರು ಮೋದಿ ನಾಯಕತ್ವ ಮತ್ತು ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದ್ದಾರೆ. ಪ್ರಧಾನಿಯವರು ಅಹಿಂದಾದ ದೊಡ್ಡ ನಾಯಕರಾಗಿದ್ದಾರೆ. ಆದರೆ ಅದನ್ನು ಎಲ್ಲೂ ಹೇಳಿಕೊಳ್ಳದೆ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುತ್ತಿದ್ದಾರೆ. ಅದೇ ದಾರಿಯಲ್ಲಿ ರಾಜ್ಯ ಸರ್ಕಾರ ನಡೆಯುತ್ತಿದೆ ಎಂದು ಹೇಳಿದರು.

"1947ರಲ್ಲಿ ಕಾಂಗ್ರೆಸ್‌ನಿಂದ ಭಾರತ್ ತೋಡೋ"
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಲಿದೆ. ಜನರು ಕೋವಿಡ್ ಸಮಯದಲ್ಲಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಅನ್ನುವುದನ್ನು ನೋಡಿದ್ದಾರೆ. ಆರ್ಥಿಕ ದುಃಸ್ಥಿತಿಯಿಂದ ಚೇತರಿಕೆ ಕಡೆಗೆ ಸಾಗುತ್ತಿದ್ದೇವೆ. "ಕಾಂಗ್ರೆಸ್ 1947ರಲ್ಲಿ ಭಾರತ್ ತೋಡೋ ಕಾರ್ಯಕ್ರಮ ಆರಂಭಿಸಿತ್ತು. ಆದರೆ ಈಗ ಭಾರತ್ ಜೋಡೋ ನಾಟಕ ಮಾಡುತ್ತಿದೆ," ಎಂದು ಟೀಕಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications