ಮುಂಡಗೋಡ: ಕೋಟಿ.. ಕೋಟಿ.. ಸುರಿದು ದುರಸ್ತಿಗೊಳಿಸಿದ್ದ ಚಿಗಳ್ಳಿ ಜಲಾಶಯದ ಒಡ್ಡಿನಲ್ಲಿ ಬಿರುಕು
ಕಾರವಾರ, ಜೂನ್, 14: ಕೋಟಿ ಕೋಟಿ ವೆಚ್ಚದಲ್ಲಿ ಮುಂಡಗೋಡ ತಾಲೂಕಿನ ಚಿಗಳ್ಳಿ ಜಲಾಶಯದ ಒಡ್ಡನ್ನು ದುರಸ್ತಿ ಕಾರ್ಯ ಮಾಡಿದರು. ಆದರೆ ಎರಡೇ ವರ್ಷದಲ್ಲಿ ಒಡ್ಡು ಬಿರುಕು ಬಿಟ್ಟಿದ್ದು, ಇದೀಗ ಸಣ್ಣ ನೀರಾವರಿ ಇಲಾಖೆಯ ಕಳಪೆ ಕಾಮಗಾರಿಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಮೊದಲು 2007ರ ಆಗಸ್ಟ್ 14ರಂದು ಮತ್ತು 2019ರ ಆಗಸ್ಟ್ 12ರಂದು ಎರಡನೇ ಬಾರಿ ಚಿಗಳ್ಳಿ ಜಲಾಶಯದ ಒಡ್ಡು ಒಡೆದು ಅಕ್ಕ-ಪಕ್ಕದ ಹೊಲ-ಗದ್ದೆಗಳ ಅಪಾರ ಪ್ರಮಾಣದ ಬೆಳೆ ಹಾನಿಯಾಗಿತ್ತು. ನಂತರ ಸುಮಾರು 9 ಕೋಟಿ ರೂಪಾಯಿ ಪ್ರವಾಹ ಅನುದಾನದಡಿ ಸಣ್ಣ ನೀರಾವರಿ ಇಲಾಖೆಯವರು ಜಲಾಶಯದ ಒಡ್ಡು ದುರಸ್ತಿ ಕಾಮಗಾರಿಯನ್ನು 2021ರಲ್ಲಿ ಪೂರ್ಣಗೊಳಿಸಿದ್ದರು. ದುರಸ್ತಿ ಕಾಮಗಾರಿ ಮುಗಿಸಿ ಕೇವಲ ಎರಡೇ ವರ್ಷಗಳಲ್ಲಿ ಒಡ್ಡಿನ ಮೇಲೆ ಬಿರುಕು ಕಾಣಿಸಿಕೊಂಡಿದೆ.

ಸುಮಾರು ಒಂದು ಕಿಲೋ ಮೀಟರ್ ದೂರದಷ್ಟು ಒಡ್ಡು ಅಲ್ಲಲ್ಲಿ ಬಿರುಕು ಬಿಟ್ಟಿದ್ದು, 1ರಿಂದ 2 ಅಡಿ ಆಳದಷ್ಟು ತಗ್ಗು ಬಿದ್ದಿದೆ. ಕೆಲವೊಂದು ಕಡೆ ಮಧ್ಯಭಾಗದಲ್ಲಿ, ಎಡ ಭಾಗದಲ್ಲಿ ಮತ್ತು ಕೆಲವು ಕಡೆ ಬಲಭಾಗದಲ್ಲಿ ಒಡ್ಡು ಬಿರುಕು ಬಿಟ್ಟಿದೆ. ಹಾಗೆಯೇ ಒಡ್ಡಿನ ಎರಡೂ ಬದಿಗಳಲ್ಲಿ ಮಣ್ಣು ಕುಸಿಯುತ್ತಿದೆ. ಇದರಿಂದ ಒಡ್ಡಿನ ದಂಡೆಯ ಮೇಲೆ ಅಕ್ಕ-ಪಕ್ಕಕ್ಕೆ ನಿಲ್ಲಿಸಿದ ತಡೆ ಕಲ್ಲುಗಳು ಕುಸಿದು ಬೀಳುವ ಹಂತದಲ್ಲಿವೆ.
ಇನ್ನು ಮಳೆಗಾಲ ಆರಂಭ ಆದರೆ ಮಳೆಯ ನೀರಿನ ರಭಸಕ್ಕೆ ಬಿರುಕು ದೊಡ್ಡದಾಗಿ ಒಡ್ಡಿನ ಮಣ್ಣು ಕುಸಿಯುವಿಕೆ ಜಾಸ್ತಿ ಆಗುತ್ತದೆ. ಇದರಿಂದ ಒಡ್ಡಿಗೂ ಅಪಾಯ ತಪ್ಪಿದ್ದಲ್ಲ. ಮತ್ತೊಮ್ಮೆ ಒಡ್ಡು ಒಡೆಯವ ಮುನ್ನ ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಗುಣಮಟ್ಟದ ಕಾಮಗಾರಿ ಮಾಡಬೇಕು ಎಂದು ಸಾರ್ವಜನಿಕರು ಒ ತ್ತಾಯಿಸಿದ್ದಾರೆ.
ಸುಮಾರು 9 ಕೋಟಿ ರೂಪಾಯಿ ವೆಚ್ಚದ ಸರ್ಕಾರದ ಅನುದಾನದಲ್ಲಿ ಆದ ಚಿಗಳ್ಳಿ ಜಲಾಶಯದ ಕಾಮಗಾರಿ ಕಳಪೆ ಆಗಿದ್ದು, ಡ್ಯಾಂನಲ್ಲಿ ನೀರು ತುಂಬುವ ಮುಂಚೆಯೇ ಕಿಲೋ ಮೀಟರ್‌ನಷ್ಟು ಉದ್ದದ ಬಿರುಕು ಬಿದ್ದಿದೆ. ಇನ್ನು ಮಳೆಗಾಲದ ನೀರು ಬಿರುಕು ತುಂಬಿ ಪುನಃ ಡ್ಯಾಂ ಒಡೆಯುವ ಪರಿಸ್ಥಿತಿ ನಿರ್ಮಾಣ ಆಗಬಹುದು ಎಂದು ಇಲ್ಲಿನ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಇದಕ್ಕೆ ಸಂಬಧಪಟ್ಟ ಇಲಾಖೆಯವರು ಮತ್ತು ಮೇಲಾಧಿಕಾರಿಗಳು ಪರಿಶೀಲನೆ ನಡೆಸಿ ಉತ್ತಮ ದುರಸ್ತಿ ಕಾಮಗಾರಿ ಮಾಡಿಸಬೇಕು. ಈ ಹಿಂದೆ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರನ ಬಿಲ್ ತಡೆಹಿಡಿಯಬೇಕು ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಲ್.ಟಿ.ಪಾಟೀಲ್ ಆಗ್ರಹಿಸಿದ್ದಾರೆ.
ಇನ್ನು ಈ ಬಗ್ಗೆ ಅಧಿಕಾರಿ ಸಣ್ಣ ನೀರಾವರಿ ಇಲಾಖೆ ಎಇಇ ಥಾಕು ಗೌಡ ಅವರನ್ನು ಕೇಳಿದಾಗ ಅವರು ಈ ವಿಷಯ ಗಮನಕ್ಕೆ ಬಂದಿರಲಿಲ್ಲ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ಮಾಹಿತಿ ನೀಡಿದ್ದಾರೆ. ಒಟ್ಟಿನಲ್ಲಿ ಕೊಟ್ಯಂತರ ರೂಪಾಯಿ ಸುರಿದು ದುರಸ್ತಿಗೊಳಿಸಿದ ಒಡ್ಡು ಎರಡೇ ವರ್ಷಕ್ಕೆ ಬಿರುಕು ಬಿಟ್ಟಿರುವುದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎನ್ನಲಾಗುತ್ತಿದೆ. ಅಧಿಕಾರಿಗಳು ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಮುಂದಾಗುವ ಅನಾಹುತಗಳನ್ನು ತಪ್ಪಿಸುವುದರ ಜೊತೆಗೆ ಸೂಕ್ತ ತನಿಖೆ ನಡೆಸಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯ ಆಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications