Sukri Bommagowda: ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೋಲಾದ ಸುಕ್ರಿ ಬೊಮ್ಮಗೌಡ ವಿಧಿವಶ
ಕಾರವಾರ, ಫೆಬ್ರವರಿ 13: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಹಾಡುಗಾರ್ತಿ, ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ವಿಧಿವಶರಾದರು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
88 ವರ್ಷದ ಸುಕ್ರಿ ಬೊಮ್ಮಗೌಡ ಗುರುವಾರ ಮುಂಜಾನೆ ಅಂಕೋಲಾ ತಾಲೂಕಿನ ಬಡಗೇರಿಯ ನಿವಾಸದಲ್ಲಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಬರಲಾಗಿತ್ತು.

ಬುಧವಾರ ತಡರಾತ್ರಿ ತನಕ ಕುಟುಂಬ ಸದಸ್ಯರ ಜೊತೆ ಸುಕ್ರಿ ಬೊಮ್ಮಗೌಡ ಮಾತುಕತೆ ನಡೆಸಿದ್ದರು. ಗುರುವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.
ಸುಕ್ರಿ ಬೊಮ್ಮಗೌಡ ಕಳೆದ ವರ್ಷವೂ ಉಸಿರಾಟದ ಸಮಸ್ಯೆಯ ಕಾರಣ ಮಂಗಳೂರು ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ ಹಾಗೂ ಆಗಾಗ ತಲೆ ಸುತ್ತುವ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು.
ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ: ಸುಕ್ರಜ್ಜಿ ಎಂದು ಸುಕ್ರಿ ಬೊಮ್ಮಗೌಡ ಪ್ರಸಿದ್ಧಿಯನ್ನು ಪಡೆದಿದ್ದರು. ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಅವರು ಜನಪದ ಹಾಡುಗಾರ್ತಿಯಾಗಿದ್ದರು. ಬಡಗೇರಿ ಗ್ರಾಮದಲ್ಲಿ ಮದ್ಯ ಮಾರಾಟ ಹಾವಳಿ ಹೆಚ್ಚಾದಾಗ ಅದನ್ನು ತಡೆಯಲು ಜನಾಂದೋಲನ ನಡೆಸಿ, ಹೋರಾಟಗಾರ್ತಿಯಾಗಿಯೂ ಸುಕ್ರಿ ಬೊಮ್ಮಗೌಡ ಗುರುತಿಸಿಕೊಂಡಿದ್ದರು.
ಸಾರಾಯಿ ಇಂದ ಸುಕ್ರಿ ಬೊಮ್ಮಗೌಡ ಪತಿಯನ್ನು ಕಳೆದುಕೊಂಡರು. ಆಗ ಅವರ ಪುತ್ರ ಸಹ ಚಿಕ್ಕವನು. ಮಗನೂ ತೀರಿ ಹೋದಾಗ ಸಾರಾಯಿ ನಿರ್ಮೂಲನೆ ಮಾಡಬೇಕು ಎಂದು ಪಣತೊಟ್ಟು ಅವರು ಹೋರಾಟವನ್ನು ಆರಂಭಿಸಿದರು. ಸಾರಾಯಿ ವಿರುದ್ಧದ ಹೋರಾಟದಲ್ಲಿ ಸುಕ್ರಿ ಬೊಮ್ಮಗೌಡ ದೆಹಲಿಯ ತನಕ ಹೋಗಿ ಬಂದಿದ್ದಾರೆ.
ಸುಕ್ರಿ ಬೊಮ್ಮಗೌಡ 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪ್ರದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದರು. 2023ರ ವಿಧಾನಸಭೆ ಚುನಾವಣೆ ಪ್ರಚಾರದ ಸಮಯದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಸುಕ್ರಿ ಬೊಮ್ಮಗೌಡ ಭೇಟಿ ಮಾಡಿದ್ದರು.
ಸುಕ್ರಿ ಬೊಮ್ಮಗೌಡ ಕರ್ನಾಟಕ ವಿಶ್ವವಿದ್ಯಾಲಯದ ಜನಪದ ವಿಭಾಗದಲ್ಲಿ 5 ವರ್ಷಗಳ ಕಾಲ ಹಾಲಕ್ಕಿ ಸಮುದಾಯದ ಉಡುಪು, ಹಾಡು, ಆಹಾರ, ಸಾಂಸ್ಕೃತಿಕ ವಿಚಾರಗಳ ಕುರಿತು ಅತಿಥಿ ಉಪನ್ಯಾಸಕಿಯಾಗಿ ಪಾಠ ಮಾಡಿದ್ದರು. ಧಾರವಾಡ ಆಕಾಶವಾಣಿ ಕೇಂದ್ರದಲ್ಲಿ ಇವರ ಜನಪದ ಹಾಡುಗಳ ಧ್ವನಿ ಮುದ್ರಿಕೆಗಳಿವೆ.
ಸುಕ್ರಿ ಬೊಮ್ಮಗೌಡ ಹಾಲಕ್ಕಿ ಸಮುದಾಯದ ಸಾಂಸ್ಕೃತಿಕ ರಾಯಭಾರಿಯಾಗಿದ್ದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮತ್ತು ಕಾರವಾರ ತಾಲೂಕಿನಲ್ಲಿ ಹಾಲಕ್ಕಿ ಸಮಯದಾಯದ ಒಕ್ಕಲ ಪೂರ್ವಜರ ನೆಲೆಗಳನ್ನು ಕಾಣಬಹುದಾಗಿದೆ. ಈ ಒಕ್ಕಲ ಈ ನೆಲೆಗಳ ಬಗ್ಗೆ ಹೆಚ್ಚಿನ ಮಾಹಿತಿ ಹೊಂದಿದ್ದವರು ಸುಕ್ರಿ ಬೊಮ್ಮ ಗೌಡ.
ಅಂಕೋಲಾ ತಾಲೂಕು ಬಡಗೇರಿಯ ಹಾಲಕ್ಕಿ ಒಕ್ಕಲ ಮಹಿಳೆಯಾದ ಸುಕ್ರಿ ಬೊಮ್ಮಗೌಡ ಹೆಸರಿನ ಕುರಿತು ಹಲವು ಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ. ಹೆಸರಿನ ಮೊದಲ ಅಕ್ಷರ 'ಸು' ಹಾಲಕ್ಕಿ ಒಕ್ಕಲ ಸಮಾಜದ ಜನರ ಬಾಯಲ್ಲಿ 'ಸು', 'ಶು' ಎಂದು ಉಚ್ಚಾರಗೊಳ್ಳುತ್ತದೆ. ಆದ್ದರಿಂದ ಹೆಸರು ಚುಕ್ರಿ, ಸುಕ್ರಿ, ಶುಕ್ರಿ ಎಂದು ಕರೆಯಲಾಗುತ್ತದೆ. ಹಾಲಕ್ಕಿ ಒಕ್ಕಲ ಭಾಷೆಯೂ ದ್ರಾವಿಡ ಭಾಷೆಗೆ ಸೇರಿದ ಒಂದು ಸಾಮಾಜಿಕ ಉಪಭಾಷೆ ಎಂಬ ಉಲ್ಲೇಖಗಳಿವೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications