ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಟ್ಕಳ; ವೀಸಾ ಇಲ್ಲದ ಪಾಕಿಸ್ತಾನಿ ಮಹಿಳೆಯ ಬಂಧನ!

By ದೇವರಾಜ್ ನಾಯ್ಕ್
|
Google Oneindia Kannada News

ಕಾರವಾರ, ಜೂನ್ 10; ಅನಧಿಕೃತವಾಗಿ ಎಂಟು ವರ್ಷಗಳಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ವಾಸವಾಗಿದ್ದ ಪಾಕಿಸ್ತಾನಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಖತೀಜಾ ಮೆಹರಿನ್ ಎನ್ನುವ ಪಾಕಿಸ್ತಾನದ ರಾಷ್ಟ್ರೀಯತೆ ಹೊಂದಿರುವ ಮಹಿಳೆಯು ಭಟ್ಕಳ ತಾಲೂಕಿನ ನವಾಯತ ಕಾಲೋನಿ ಮನೆಯೊಂದರಲ್ಲಿ ಅಕ್ರಮವಾಗಿ ವಾಸ್ತವ್ಯ ಮಾಡುತ್ತಿರುವ ಬಗ್ಗೆ ಗುಪ್ತಚರ ಮಾಹಿತಿಯನ್ನಾಧರಿಸಿ ಭಟ್ಕಳ ನಗರ ಠಾಣಾ ಪೊಲೀಸರು ಪತ್ತೆಹಚ್ಚಿ, ಬಂಧಿಸಿದ್ದಾರೆ.

ಭಟ್ಕಳ: 'ಡಿಜಿಟಲ್ ಇಂಡಿಯಾ’ ಪರಿಕಲ್ಪನೆ ನಾಚಿಸುವಂತಿದೆ ಈ ಊರಿನ ಪರಿಸ್ಥಿತಿ ಭಟ್ಕಳ: 'ಡಿಜಿಟಲ್ ಇಂಡಿಯಾ’ ಪರಿಕಲ್ಪನೆ ನಾಚಿಸುವಂತಿದೆ ಈ ಊರಿನ ಪರಿಸ್ಥಿತಿ

ಈಕೆ ಪಾಕಿಸ್ತಾನದ ರಾಷ್ಟ್ರೀಯತೆಯನ್ನು ಹೊಂದಿದ್ದು, ಸುಮಾರು 8 ವರ್ಷಗಳ ಹಿಂದೆ ಭಟ್ಕಳದ ನವಾಯತ ಕಾಲೋನಿಯ ಜಾವೀದ್ ಮೊಹಿದ್ದೀನ್ ರುಕ್ಕುದ್ದೀನ್ ಎಂಬಾತನನ್ನು ದುಬೈನಲ್ಲಿ ವಿವಾಹವಾಗಿ, 2014ರಲ್ಲಿ 3 ತಿಂಗಳ ವಿಸಿಟಿಂಗ್ ವೀಸಾದ ಮೇಲೆ ಭಾರತಕ್ಕೆ ಬಂದಿದ್ದಳು.

'ಆನ್ಲೈನ್ ಗೆಳತಿ'ಗಾಗಿ ಪಾಕಿಸ್ತಾನದಿಂದ ಗೋವಾಕ್ಕೆ ವೀಸಾ ಪಡೆಯದೇ ಬಂದಳಾ ಯುವತಿ?'ಆನ್ಲೈನ್ ಗೆಳತಿ'ಗಾಗಿ ಪಾಕಿಸ್ತಾನದಿಂದ ಗೋವಾಕ್ಕೆ ವೀಸಾ ಪಡೆಯದೇ ಬಂದಳಾ ಯುವತಿ?

ಬಳಿಕ ವಾಪಸ್ಸಾಗಿ 2015ರ ಪ್ರಾರಂಭದಲ್ಲಿ ಕಳ್ಳ ಮಾರ್ಗದಲ್ಲಿ ಭಾರತಕ್ಕೆ ನುಸುಳಿ ಬಂದು ತನ್ನ ಗಂಡನ ಮನೆಯಾದ ಭಟ್ಕಳದ ನವಾಯತ ಕಾಲೋನಿಯಲ್ಲಿ ತನ್ನ 3 ಮಕ್ಕಳೊಂದಿಗೆ ಅಕ್ರಮವಾಗಿ ವಾಸವಾಗಿದ್ದಳು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮಾಹಿತಿ ನೀಡಿದ್ದಾರೆ.

Bhatkal

ಭಟ್ಕಳದಲ್ಲಿ ಈಕೆಯು ಸುಳ್ಳು ದಾಖಲೆಗಳನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿ ರೇಷನ್ ಕಾರ್ಡ್, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದಕೊಂಡಿದ್ದಾಳೆ. ಪೊಲೀಸರು ಆಕೆಯನ್ನು ಬಂಧಿಸಿ, ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಈಕೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೆಲವು ತಿಂಗಳುಗಳಿಂದ ಸ್ಥಳೀಯ ಪೊಲೀಸರು ಇತರ ತನಿಖಾ ಸಂಸ್ಥೆಯ ಸಹಕಾರದೊಂದಿಗೆ ಪತ್ತೆಗೆ ಸತತವಾಗಿ ಪ್ರಯತ್ನಿಸಿ, ಅಕ್ರಮವಾಗಿ ವಾಸವಾಗಿದ್ದ ಈಕೆಯನ್ನು ಅಂತೂ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಈಕೆಯ ಮೇಲೆ ವಿದೇಶಿ ಕಾಯಿದೆ ಉಲ್ಲಂಘನೆ ಮತ್ತು ಇತರೆ ಐಪಿಸಿ ಪ್ರಕರಣಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಕಾರ್ಯಾಚರಣೆಯು ಎಸ್. ಪಿ. ಶಿವಪ್ರಕಾಶ್ ದೇವರಾಜು, ಎಎಸ್ ಪಿ ಬದರಿನಾಥ, ಭಟ್ಕಳ ಡಿವೈಎಸ್ ಪಿ ಬೆಳ್ಳಿಯಪ್ಪ ಕೆ.ಯು. ಹಾಗೂ ಸಿಪಿಐ ದಿವಾಕರ ಪಿ.ಎಮ್ ಅವರ ಮಾರ್ಗದರ್ಶನ ಹಾಗೂ ಸೂಚನೆಯ ಮೇರೆಗೆ ಭಟ್ಕಳ ನಗರ ಪೊಲೀಸ್ ಠಾಣಿಯ ಪಿಎಸ್ಐ ಸುಮಾ ಬಿ. ಮತ್ತು ಸಿಬ್ಬಂದಿ ನಾರಾಯಣ ನಾಯ್ಕ, ಮುಗ್ದುಂ ಪತ್ತೆಖಾನ್, ಲೋಕಪ್ಪ ಪತ್ತಿ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ಹೀನಾ ಎಫ್. ತಂಡದಿಂದ ನಡೆದಿತ್ತು.

ದಿಕ್ಕು ತಪ್ಪಿಸಿದ ಏಜೆಂಟ್ ಗಳು?; ಪ್ರಕರಣದಲ್ಲಿ ಮೇಲ್ನೋಟಕ್ಕೆ ಮಹಿಳೆಯು ತನ್ನ ಪತಿಯೊಂದಿಗೆ ವಾಸವಿರುವ ಉದ್ದೇಶದಿಂದಲೇ ಭಟ್ಕಳಕ್ಕೆ ಬಂದಿದ್ದಾಳೆನ್ನಲಾಗಿದೆ. ಭಟ್ಕಳಕ್ಕೆ ಬರುವ ಮುನ್ನ, ಅಂದರೆ ದುಬೈನಲ್ಲಿದ್ದಾಗಲೇ ಒಂದು ಮಗುವನ್ನು ಕೂಡ ಈಕೆ ಹೊಂದಿದ್ದು, ಈ ಸಂದರ್ಭದಲ್ಲಿ ಏಜೆಂಟ್ ಗಳು ದಿಕ್ಕು ತಪ್ಪಿಸಿದ ಕಾರಣಕ್ಕೆ ವೀಸಾ ಪಡೆಯದೇ ನೇಪಾಳದ ಮೂಲಕ ಭಟ್ಕಳಕ್ಕೆ ಬಂದಿದ್ದಳೆನ್ನಲಾಗಿದೆ. ಆದರೆ ಈ ಬಗ್ಗೆ ಇನ್ನೂ ತನಿಖೆ ಮುಂದುವರಿದಿದೆ.

English summary
Pakistani woman arrested in Uttara Kannada district Bhatkal who living in Karnataka from 8 years without visa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X