• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ ಟಫ್ ರೂಲ್ಸ್: ಗೋವಾದಿಂದ ಕಾರವಾರಕ್ಕೆ ಆಗಮಿಸುತ್ತಿದ್ದ 'ವರ' ಗಡಿಯಲ್ಲಿ ಪರದಾಟ!

|
Google Oneindia Kannada News

ಕಾರವಾರ, ಆಗಸ್ಟ್ 05: ಕೊರೊನಾ ಮೂರನೆಯ ಅಲೆ ಆತಂಕ ಹಿನ್ನಲೆ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರಿಂದಾಗಿ ನಿಶ್ಚಿತಾರ್ಥವೊಂದಕ್ಕೆ ಗೋವಾದಿಂದ ಬರುತ್ತಿದ್ದವರಿಗೆ ಅಡ್ಡಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ‌.

ಕಾರವಾರ ತಾಲ್ಲೂಕಿನ ಮಾಜಾಳಿ ಗಡಿಯಲ್ಲಿ ಗೋವಾದಿಂದ ನಿಶ್ಚಿತಾರ್ಥಕ್ಕೆಂದು ಕಾರವಾರಕ್ಕೆ ಬರುತ್ತಿದ್ದವರನ್ನು ಆರ್‌ಟಿ- ಪಿಸಿಆರ್ ಪ್ರಮಾಣಪತ್ರ ಇಲ್ಲದ ಕಾರಣದಿಂದ ತಡೆ ಹಿಡಿಯಲಾಯಿತು. ಕಾರವಾರದ ಯುವತಿಗೆ ಗೋವಾ ಮೂಲದ ಯುವಕನೊಂದಿಗೆ ಮದುವೆ ನಿಶ್ಚಯವಾಗಿದ್ದು, ಇಂದು ನಿಶ್ಚಿತಾರ್ಥ ನಡೆಯಬೇಕಾಗಿತ್ತು.

ಕೋವಿಡ್: ಉತ್ತರ ಕನ್ನಡದಲ್ಲಿ ಮದುವೆಗೆ 50 ಜನ ಮಾತ್ರ, ದೇವಾಲಯಗಳಲ್ಲಿ ಸೇವೆ ಬಂದ್!ಕೋವಿಡ್: ಉತ್ತರ ಕನ್ನಡದಲ್ಲಿ ಮದುವೆಗೆ 50 ಜನ ಮಾತ್ರ, ದೇವಾಲಯಗಳಲ್ಲಿ ಸೇವೆ ಬಂದ್!

ಆದರೆ ಉತ್ತರ ಕನ್ನಡ ಜಿಲ್ಲೆಗೆ ಮಹಾರಾಷ್ಟ್ರ ಹಾಗೂ ಕೇರಳದಿಂದ ಆಗಮಿಸುವವರಿಗೆ ಆರ್‌ಟಿ- ಪಿಸಿಆರ್ ಕಡ್ಡಾಯಗೊಳಿಸಲಾಗಿದ್ದು, ಗಡಿಯಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಗೋವಾ ಭಾಗದಿಂದ ಪ್ರವೇಶಿಸಿವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರಲೇಬೇಕೆಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಆದೇಶ ಮಾಡಿದೆ.

ಆದರೆ ನಿಶ್ಚಿತಾರ್ಥಕ್ಕೆಂದು ಬಸ್ ಮಾಡಿಕೊಂಡು ಕಾರವಾರಕ್ಕೆ ಆಗಮಿಸುತ್ತಿದ್ದ ಗೋವಾದ ವರನ ಯಾವುದೇ ಕುಟುಂಬಸ್ಥರ ಬಳಿ ಆರ್‌ಟಿ- ಪಿಸಿಆರ್ ಪ್ರಮಾಣಪತ್ರ ಇರಲಿಲ್ಲ. ಈ ಹಿನ್ನಲೆ ಕರ್ನಾಟಕ ಗಡಿಯಲ್ಲಿ ಗೋವಾ ಕುಟುಂಬಸ್ಥರಿಗೆ ಪ್ರವೇಶ ನಿರಾಕರಿಸಿ ಅಧಿಕಾರಿಗಳು ತಡೆಹಿಡಿದಿದ್ದು, ನಿಶ್ಚಿತಾರ್ಥಕ್ಕೆಂದು ಬಂದವರು ಸುಮಾರು ಎರಡು ತಾಸುಗಳ ಕಾಲ ಗಡಿಯಲ್ಲಿಯೇ ಕಾದು ಕುಳಿತುಕೊಳ್ಳುವಂತಾಯಿತು.

ಬಳಿಕ ವರ ಹಾಗೂ ವಧುವಿನ ಕಡೆಯವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಕೊನೆಗೆ ಮಾನವೀಯತೆಯ ಆಧಾರದ ಮೇಲೆ ವರನ ಕಡೆಯ ಕೇವಲ 8 ಮಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಯಿತು‌. ನಿಶ್ಚಿತಾರ್ಥ ಕಾರ್ಯಕ್ರಮದ ಬಳಿಕ ವಾಪಸ್ಸಾಗುವಂತೆ ವರನ ಕಡೆಯವರಿಗೆ ಅಧಿಕಾರಿಗಳು ಸೂಚಿಸಿ ಕಾರವಾರಕ್ಕೆ ತೆರಳಲು ಅನುವು ಮಾಡಿಕೊಟ್ಟರು. ವರನೊಂದಿಗೆ ಬಂದಿದ್ದ ಇನ್ನುಳಿದವರು ಗಡಿ ಪ್ರವೇಶಿಸಲಾಗದೇ ವಾಪಸ್ ಮನೆಗೆ ತೆರಳಿದರು‌.

People Entering Without Negative RTPCR Test Report Restricted At Goa Kannada Border

ದೇವಸ್ಥಾನ ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಸೇವಾ ಕಾರ್ಯಗಳಿಗೆ ಅವಕಾಶವಿರುವುದಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ದೇವಸ್ಥಾನ, ಧಾರ್ಮಿಕ ಸ್ಥಳಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯು ಕಡ್ಡಾಯವಾಗಿದ್ದು, ಅದರ ನಿರ್ವಹಣೆಯು ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿರುತ್ತದೆ. ದೇವಸ್ಥಾನ/ ಧಾರ್ಮಿಕ ಸ್ಥಳಗಳಲ್ಲಿ ದಿನಕ್ಕೆ ಒಂದು ಬಾರಿ ಕಡ್ಡಾಯವಾಗಿ ಸ್ಯಾನಿಟೈಸೇಷನ್ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕೇವಲ 50 ಜನರಿಗೆ ಮಾತ್ರ ಅವಕಾಶ ನೀಡಿ ಆದೇಶಿಸಲಾಗಿದೆ. ಮದುವೆ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಆಯಾ ತಾಲೂಕಾ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಮದುವೆ ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಯ ಪಾಲನೆಯನ್ನು ಆಯಾ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ಪಿಡಿಓ ಹಾಗೂ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕಿದೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮದುವೆ ಕಾರ್ಯಕ್ರಮದಲ್ಲಿ ಹಾಜರಿದ್ದವರ ವಿವರಗಳನ್ನು ಮೊಬೈಲ್ ಸಂಖ್ಯೆಯೊಂದಿಗೆ ಸಂಗ್ರಹಿಸಬೇಕಿದೆ. ಮದುವೆ ಕಾರ್ಯಕ್ರಮಕ್ಕೆ ಹಾಜರಿದ್ದವರು ಇದೇ ಜಿಲ್ಲೆಯವರಾಗಿದ್ದಲ್ಲಿ ಎರಡು ದಿನಗಳ ಒಳಗಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

   ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣವರ್ ರಾಜಕೀಯ ಪ್ರವೇಶ | Oneindia Kannada

   ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ವಿಭಾಗ 51ರಿಂದ 60 ರನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರನ್ವಯ ಹಾಗೂ ಸಾಂಕ್ರಾಮಿಕ ರೋಗ ಕಾಯ್ದೆ 2020ರ ವಿಭಾಗ 4, 5 ಮತ್ತು 10ರಂತೆ ಕ್ರಮಗಳನ್ನು ಜರುಗಿಸಲಾಗುವುದು. ಈ ಆದೇಶದ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಬದ್ಧರಾಗಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

   English summary
   Those coming to uttar kannada from Goa on the border of Karwar Taluk were barred for not having an Negative RT-PCR test report.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X