ಅಂಕೋಲಾದಲ್ಲಿ ಮೋದಿ ಪ್ರಚಾರ ಸಮಾವೇಶ: ಕಾರ್ಯಕ್ರಮದ ಯಶಸ್ಸಿಗೆ ಶಾಸಕಿಯಿಂದ ಗಣಹೋಮ
ಕಾರವಾರ, ಮೇ 03: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಧಾನಿಯೊಬ್ಬರು ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದು ಈ ಐತಿಹಾಸಿಕ ಸಮಾವೇಶಕ್ಕೆ ಬಿಜೆಪಿ ಅಂತಿಮ ಹಂತದ ಸಿದ್ಧತೆ ಮಾಡಿಕೊಂಡಿದೆ.
ಅಂಕೋಲಾದ ಹಟ್ಟಿಕೇರಿ ಬಳಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹೊಂದಿಕೊಂಡೆ ಇರುವ ನೌಕಾನೆಲೆಯ 40 ಎಕರೆ ಜಾಗದಲ್ಲಿ ಪ್ರಚಾರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಎಸ್‌ಪಿಜಿ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು ವೇದಿಕೆ ಸೇರಿದಂತೆ ಸಮಾವೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಂಡಿದೆ. ಅಲ್ಲದೇ ಸಮುದ್ರ, ರಸ್ತೆ ಮಾರ್ಗದಲ್ಲಿ ಭದ್ರತೆಗಳನ್ನು ಹೆಚ್ಚಿಸಲಾಗಿದೆ. ಸಮುದ್ರದಿಂದ ಬರುವ ಎಲ್ಲಾ ಬೋಟುಗಳನ್ನು ತಪಾಸಣೆ ನಡೆಸಲಾಗುತ್ತಿದೆ.

ದಕ್ಷಿಣ ಕನ್ನಡಕ್ಕೆ ಮೊದಲ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಬಳಿಕ 12 ಗಂಟೆಗೆ ಸರಿಯಾಗಿ ಅಂಕೋಲಾಕ್ಕೆ ಆಗಮಿಸಲಿದ್ದಾರೆ. ಸಮಾವೇಶದ ಹಿಂಭಾಗದಲ್ಲಿಯೇ ಹೆಲಿಪ್ಯಾಡ್ ವ್ಯವಸ್ಥೆ ಮಾಡಿದ್ದು, ಅಂಕೋಲಾದ ಹಟ್ಟಿಕೇರಿ ಟೋಲ್‌ಗೆಟ್ ಬಳಿ ನೌಕನೆಲೆ ಜಾಗದಲ್ಲಿ ಹಮ್ಮಿಕೊಂಡಿರುವ ಈ ಪ್ರಚಾರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಸಮಾವೇಶಕ್ಕೆ ಮೂರು ಲಕ್ಷ ಜನ ನಿರೀಕ್ಷೆ
ಇನ್ನು ಸಮಾವೇಶಕ್ಕೆ ಕೈಗೊಂಡಿದ್ದ ವ್ಯವಸ್ಥೆಯನ್ನು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮಂಗಳವಾರ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಬ್ಬಾರ್ 'ಪ್ರಧಾನಿ ನರೇಂದ್ರ ಮೋದಿ ಅವರು ಸಮಾವೇಶಕ್ಕೆ ಮೂರು ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ಮೋದಿ ಆಗಮನದಿಂದ ಜಿಲ್ಲೆಯ 6 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ರಚನೆಯ ಅವಕಾಶ ಆಗಬಾರದು. ಸ್ವತಂತ್ರ ಬಿಜೆಪಿ ಸರಕಾರ ರಚನೆ ಗುರಿಯಾಗಿದೆ. ಇದಕ್ಕಾಗಿ ಮೋದಿ ರಾಜ್ಯದ ಜನತೆಗೆ ಕರೆ ನೀಡಿದ್ದಾರೆ' ಎಂದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪಕ್ಷದ ಅಭೈರ್ಥಿಗಳು, ಬಿಜೆಪಿ ಮುಖಂಡರು ಸೇರಿ 17 ಮಂದಿ ವೇದಿಕೆ ಮೇಲಿರಲಿದ್ದಾರೆ. ಈಗಾಗಲೇ ಬಿಜೆಪಿ ಕೂಡ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದು, ಆರಕ್ಕೆ ಆರು ಕ್ಷೇತ್ರ ಗೆಲ್ಲುವುದರ ಜೊತೆಗೆ ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ. ಕಾಂಗ್ರೆಸ್‌ನ ಒಳ ಜಗಳದಿಂದಾಗಿ ಮತದಾರರು ವಿಚಲಿತರಾಗಿದ್ದಾರೆ. ಮತ್ತೆ ಅವರು ಅಧಿಕಾರದ ಕನಸು ಕಾಣುವುದು ಬಿಡಬೇಕು ಎಂದು ಹೇಳಿದರು.

ಇನ್ನು ಸಮವೇಶಕ್ಕಾಗಿ ವೇದಿಕೆ, ಆಸನ, ವಿಐಪಿಗೆ, ಜನಸಾಮಾನ್ಯರಿಗೆ, ಮಾಧ್ಯಮದವರಿಗೆ ಪ್ರತ್ಯೇಕ ಗ್ಯಾಲರಿ ಮೂಲಕ ಆಸನ ವ್ಯವಸ್ಥೆ ಮಾಡಲಾಗಿದ್ದು, ಸಮಾವೇಶಕ್ಕೆ ಪ್ರವೇಶ ಪಡೆಯುವವರನ್ನು ಹಲವು ಹಂತಗಳಲ್ಲಿ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ. ಸುಮಾರು 3 ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ ಎಂದರು.
ಪ್ರಧಾನಿ ತಂಡಕ್ಕೆ ವಿಶೇಷ ಖಾದ್ಯ
ಪ್ರಧಾನಿ ನರೇಂದ್ರ ಮೋದಿಗೆ ಉತ್ತರ ಕನ್ನಡ ಜಿಲ್ಲೆಯ ವಿಶೇಷವಾದ ಇಡಗುಂಜಿಯ ಮಹಾಗಣಪತಿ ವಿಗ್ರಹ, ಶಿರಸಿಯಲ್ಲಿ ತಯಾರಿಸುವ ಗಂಧದ ಹಾರ, ಹಾಗೂ ವಿಶೇಷ ಕಿರೀಟ ತೊಡಿಸಲಾಗುತ್ತಿದೆ. ಅಲ್ಲದೇ ಪ್ರಧಾನ ಮಂತ್ರಿಯೊಂದಿಗೆ ಆಗಮಿಸುತ್ತಿರುವ ಸುಮಾರು 50 ಜನರ ತಂಡಕ್ಕೆ ಕ್ಷೇತ್ರದ ವಿಶೇಷವಾದ ಕರಿ ಇಶಾಡು, ಆಪೂಸ್ ಮಾವು, ಕೆಂಪು ಸೊಪ್ಪಿನ ಬಾಜಿ, ರವೆ ಪಾಯಸ, ಹಾಗೂ ರವೆ ಕರ್ಜೂರ ಸ್ವೀಟ್ ಸೇರಿದಂತೆ ಇನ್ನಿತರ ತಿಂಡಿಯೊಂದಿಗೆ ಊಟದ ವ್ಯವಸ್ಥೆ ಮಾಡಿರುವುದಾಗಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.

ಮೋದಿ ಸಮಾವೇಶ ಯಶಸ್ಸಿಗೆ ಗಣಹೋಮ
ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಯಶಸ್ಸಿಗೆ ಶಾಸಕಿ ರೂಪಾಲಿ ನಾಯ್ಕ 108 ತೆಂಗಿನಕಾಯಿಗಳ ಗಣಹೋಮ ನೆರವೇರಿಸಿದ್ದಾರೆ. ಕಾರವಾರ ತಾಲೂಕಿನ ಅಮದಳ್ಳಿಯ ವೀರಗಣಪತಿ ದೇಗುಲದಲ್ಲಿ ಸಮಾವೇಶಕ್ಕೆ ಯಾವುದೇ ವಿಘ್ನ ಬಾರದಂತೆ ಯಶಸ್ವಿಯಾಗಿ ನೆರವೇರಲು ದೇಗುಲದ ಪ್ರಧಾನ ಅರ್ಚಕ ಮಹಾಬಲೇಶ್ವರ ಹಾಗೂ ಮಧುಕೇಶ್ವರ ಭಟ್ ಅವರ ಅರ್ಚಕತ್ವದಲ್ಲಿ ಮಂಗಳವಾರ 108 ಕಾಯಿಯ ಗಣಹೋಮ ನಡೆಸಿದ್ದಾರೆ. ಪುತ್ರ ಪರ್ಭತ್, ಸೊಸೆ ರೇಖಾ ಅವರೊಂದಿಗೆ ಸೇರಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಯಶಸ್ಸಿಗೆ ಪ್ರಾರ್ಥಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications