ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಟಾದ ಮತ ಎಣಿಕೆ ಕೇಂದ್ರದ ಪ್ರವೇಶ ದ್ವಾರದಲ್ಲಿ ಕಾರ್ಯಕರ್ತರ ತಪಾಸಣೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಕಾರವಾರ, ಮೇ 15 : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಮತ ಎಣಿಕೆ ಕೇಂದ್ರ ಡಾ.ಎ.ವಿ.ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರವೇಶ ದ್ವಾರದಲ್ಲಿ ಪೊಲೀಸರು ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರ ತಪಾಸಣಾ ಕಾರ್ಯ ಕೈಗೊಳ್ಳುತ್ತಿದ್ದಾರೆ.

ಕಾಲೇಜಿನಲ್ಲಿ 14 ಎಣಿಕೆ ಟೇಬಲ್ ಗಳನ್ನು ಸಿದ್ಧಪಡಿಸಲಾಗಿದ್ದು, 234 ಸೂಕ್ಷ್ಮ ವೀಕ್ಷಕರು, 600 ಮಂದಿ ಪೊಲೀಸ್ ಸಿಬ್ಬಂದಿ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಮತ ಎಣಿಕೆ ಇನ್ನೂ ಶುರುವಾಗಿಲ್ಲ, ಟ್ವೀಟಿಗರು ಆಗಲೇ ಭವಿಷ್ಯ ನುಡಿತಾವ್ರಲ್ಲ.! ಮತ ಎಣಿಕೆ ಇನ್ನೂ ಶುರುವಾಗಿಲ್ಲ, ಟ್ವೀಟಿಗರು ಆಗಲೇ ಭವಿಷ್ಯ ನುಡಿತಾವ್ರಲ್ಲ.!

ಮತ ಎಣಿಕೆ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಎರಡು ದಿನಗಳ ನಿಷೇಧಾಜ್ಞೆ ಜಾರಿಗೊಳಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ.

Police are conducting inspections to various political parties activists

ಮತ ಎಣಿಕೆ ಸಂದರ್ಭದಲ್ಲಿ ಕಾನೂನು ಭಂಗಗೊಳಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ.ಪಾಟೀಲ ಎಚ್ಚರಿಸಿದ್ದಾರೆ.

Police are conducting inspections to various political parties activists

ಜಿಲ್ಲೆಯಲ್ಲಿ ಮೇ 14ರ ಮಧ್ಯರಾತ್ರಿ 12 ರಿಂದ ಮೇ 16ರ ರಾತ್ರಿ 12 ಗಂಟೆವರೆಗೆ ವಿಜಯೋತ್ಸವ ನಡೆಸುವುದನ್ನು ನಿಷೇಧಿಸಲಾಗಿದೆ. ಈ ಎರಡು ದಿನ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಆರ್ ಪಿಸಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಈ ವೇಳೆ ಮದ್ಯಮಾರಾಟ ನಿಷೇಧ ಮಾಡಲಾಗಿದೆ.

English summary
Karnataka Election Results 2018: Police are conducting inspections to various political parties activists at the entrance gate of Kumta Voter Center. There are 46 candidates contested in six constituencies at Uttar Kannada district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X