ಯುವತಿಯನ್ನು ವೇಶ್ಯಾವಾಟಿಕೆಗೆ ತಳ್ಳಲು ಯತ್ನ: ವ್ಯಕ್ತಿಯ ಬಂಧನ
ಕಾರವಾರ, ಜೂನ್.27: ಯುವತಿಯೊಬ್ಬಳನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ವ್ಯಕ್ತಿಯೊಬ್ಬನನ್ನು ಯಲ್ಲಾಪುರ ಠಾಣಾ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.
ಯಲ್ಲಾಪುರ ತಾಲೂಕಿನ ಮಂಚಿಕೇರಿ ಗ್ರಾಮದ ಜನತಾ ಕಾಲೋನಿ ನಿವಾಸಿ ಅಮಿತ್ ಆಂಜನೇಯ ಗಬ್ಬೂರ್ (೨೮) ಬಂಧಿತ ವ್ಯಕ್ತಿ.
ಈತ ಶಿವಮೊಗ್ಗ ಮೂಲದ 27 ವರ್ಷದ ಯುವತಿಯೊಬ್ಬಳನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಎಂದು ಆರೋಪಿಸಲಾಗಿದೆ. ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದ ಬಳಿ ಮಂಗಳವಾರ ರಾತ್ರಿಯ ವೇಳೆ ಯುವತಿಯನ್ನು ಕರೆತಂದು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಳ್ಳುವಂತೆ ಈತ ಒತ್ತಾಯಿಸುತ್ತಿದ್ದ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಯುವತಿಯನ್ನು ರಕ್ಷಿಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಕಲಂ 3, 4, 5, 7 ರ ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣ ದಾಖಲಾಗಿದೆ.
ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ ನಾಯ್ಕ ತನಿಖೆ ಮುಂದುವರೆಸಿದ್ದಾರೆ.












Click it and Unblock the Notifications