ಶಿರಸಿ ಮನೆಯೊಂದರಲ್ಲಿ ವೇಶ್ಯಾವಾಟಿಕೆ; ನಾಲ್ವರ ಬಂಧನ
ಶಿರಸಿ, ಮಾರ್ಚ್ 10: ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಇಲ್ಲಿನ ಮಾರುಕಟ್ಟೆ ಠಾಣೆಯ ಪೊಲೀಸರು ಸಂತ್ರಸ್ತೆಯನ್ನು ರಕ್ಷಿಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
Recommended Video
ಮರಾಠಿ ಕೊಪ್ಪದ ಸಾವಿತ್ರಿ ಭಟ್ (56), ಅಗಸೇಬಾಗಿಲಿನ ರಾಮಚಂದ್ರ ಗಜಾನನ ನಾಯ್ಕ (59), ಹೊನ್ನಾವರದ ಲಕ್ಷ್ಮೀಕಾಂತ ನಾಯ್ಕ (22), ಹುಬ್ಬಳ್ಳಿಯ ಆನಂದ ರೋಣಿಮಠ (57) ಬಂಧಿತ ಆರೋಪಿಗಳು. ಇವರಿಂದ 2,850 ನಗದು, ನಾಲ್ಕು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾವಿತ್ರಿ ಭಟ್ ಹಾಗೂ ರಾಮಚಂದ್ರ ನಾಯ್ಕ ಹಣ ಗಳಿಸುವ ಉದ್ದೇಶದಿಂದ ಒತ್ತಾಯಪೂರ್ವಕವಾಗಿ ಇಬ್ಬರು ಮಹಿಳೆಯರನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಶಿರಸಿಯಲ್ಲಿ ಮಾರಿಕಾಂಬಾ ದೇವಿಯ ಜಾತ್ರೆ ನಡೆಯುತ್ತಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಹೊರ ಜಿಲ್ಲೆ, ರಾಜ್ಯದ ಜನರು ಇಲ್ಲಿಗೆ ಬರುತ್ತಾರೆ. ಈ ಸಂದರ್ಭದಲ್ಲಿ ಪೊಲೀಸರು ಕೂಡ ಭದ್ರತೆಯಲ್ಲಿ ಕಾರ್ಯನಿರತರಾಗಿರುವುದರಿಂದ ವೇಶ್ಯಾವಾಟಿಕೆ ನಡೆಸಲು ಅನುಕೂಲಕರ ಸಂದರ್ಭ ಎಂದು ಈ ಸಮಯದಲ್ಲಿ ದಂಧೆ ನಡೆಸಲಾಗುತ್ತಿತ್ತು.

ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ, ಸಿಪಿಐ ಪ್ರದೀಪ ಬಿ.ಯು ಮಾರ್ಗದರ್ಶನದಲ್ಲಿ ಮಾರುಕಟ್ಟೆ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications