ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ ಕಲ್ಪಿಸಲು ಪೋರ್ಟಲ್ ಆರಂಭ
Jeevana sangama Portal: ರಾಜ್ಯದ ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ ಕಲ್ಪಿಸುವ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲಾಡಳಿತ "ಜೀವನ ಸಂಗಮ" ಪೋರ್ಟಲ್ ಅನ್ನು ಆರಂಭಿಸಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಜೀವನ ಸಂಗಮ ಎಂಬ ಪೋರ್ಟಲ್ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಇದರ ಸದುಪಯೋಗವನ್ನು ಯಾರೆಲ್ಲಾ ಪಡೆದುಕೊಳ್ಳಬಹುದಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಉತ್ತರ ಕನ್ನಡ ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆಯ್ಕೆ ಮಾಡುಕೊಳ್ಳಲು ಮತ್ತು ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹ ಆಗಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ.
ʼಜೀವನ ಸಂಗಮʼ ಎಂಬ ಪೋರ್ಟಲ್ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ವಿನೂತನ ಪ್ರಯೋಗ ಕೈಗೊಂಡಿದೆ. ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿ ಆರಿಸಲು ಹಾಗೂ ಹೆಚ್‌ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧವನ್ನು ಬೆಸೆದು ಅವರು ವಿವಾಹವಾಗಲು ವೇದಿಕೆಯನ್ನು… pic.twitter.com/L5J8OvgxsE
— DIPR Karnataka (@KarnatakaVarthe) July 5, 2024
ಈ ಪೋರ್ಟಲ್ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಸಂರಕ್ಷಿಸಲು ಸಂಪೂರ್ಣ ಬದ್ಧವಾಗಿದ್ದು, ಎಲ್ಲಾ ದತ್ತಾಂಶವನ್ನು ಗೌಪ್ಯವಾಗಿ ಇರಿಸಿ, ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ-ಯುವತಿಯರಿಗೆ ಮಾತ್ರ ಈ ವಿವಾಹ ನೋಂದಣಿ ವೇದಿಕೆ ಕಲ್ಪಿಸಲಾಗಿದ್ದು, ಜಿಲ್ಲೆಯ ನಿವಾಸಿಗಳು ಮಾತ್ರ ಇದರ ಸದುಪಯೋಗ ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ: ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ ಹಾಗೂ ಕೆಐಡಿಬಿ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ, ಕೈಗಾರಿಕಾ ಕಾರಿಡಾರ್ ಯೋಜನೆಗಳನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಚುನಾವಣಾ ನೀತಿ ಸಂಹಿತೆಯಿಂದಾಗಿ ಯೋಜನೆ ಕಾಮಗಾರಿಗಳು ಮಂದಗತಿಯಾಗಿದ್ದು, ಇದೀಗ ಯೋಜನೆಗಳ ಪೂರ್ಣಗೊಳಿಸಲು ವೇಗ ನೀಡಲಾಗುವುದು ಎಂದರು.
ಬೋರನಕಣಿವೆ ಜಲಾಶಯದ ವಿವರ ಪರಿಶೀಲಿಸಿ ಹೆಚ್ಚಿನ ನೀರಿನ ಅಲೋಕೇಶನ್ ತಂದು ಅಲ್ಲಿಂದ ಗಾಯಿತ್ರಿ ಜಲಾಶಯಕ್ಕೆ ತರಲು ಕ್ರಮವಹಿಸಲಾಗುವುದು. ಹೊಸಹಳ್ಳಿ ಬ್ಯಾರೇಜ್‍ನ ವಿದ್ಯುತ್ ಸಮಸ್ಯೆಯನ್ನು ಆ ಭಾಗದ ರೈತರೊಂದಿಗೆ ಚರ್ಚಿಸಿ ಶೀಘ್ರ ಬಗೆಹರಿಸಿ ಬಹುದೊಡ್ಡ ಈ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕಿದೆ ಎಂದರು.
ಕೆಐಡಿಬಿ ಅಧಿಕಾರಿ ಲಕ್ಷ್ಮೀಶ್ ಮಾತನಾಡಿ, ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆಯ 1,156 ಹೆಕ್ಟೇರ್ ಪ್ರದೇಶದಲ್ಲಿ 920 ಹೆಕ್ಟೇರ್ ಪ್ರದೇಶದ ರೈತರಿಗೆ ಪರಿಹಾರ ನೀಡಲಾಗಿದೆ. ಇನ್ನೂ 336 ಹೆಕ್ಟೇರ್‌ಗೆ ಪರಿಹಾರ ಕೊಡಬೇಕು. ಇಲ್ಲಿಯವರೆಗೆ 380 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಅದರಲ್ಲಿ 312 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದರು.
ಮೇಟಿಕುರ್ಕೆ ಕರಿಯೋಬನಹಳ್ಳಿಯಲ್ಲಿ ಲೇಔಟ್ ಅನುಮೋದನೆ ಆಗಿದೆ. ನಾಲ್ಕರಲ್ಲಿ ಮೂರು ಪ್ಯಾಕೇಜ್ ವರ್ಕ್ ಅವಾರ್ಡ್ ಆಗಿದ್ದು, ಕೆಲಸ ನಡೆಯುತ್ತಿದೆ. ಒಂದರಲ್ಲಿ ಕೆಲಸ ಶುರು ಆಗಬೇಕಿದೆ. 1,156 ಹೆಕ್ಟೇರ್ ಪ್ರದೇಶದಲ್ಲಿ 764 ಹೆಕ್ಟೇರ್ ಕೈಗಾರಿಕಾ ಪ್ರದೇಶವಾಗಿದ್ದು, ಉಳಿದ ಪ್ರದೇಶದಲ್ಲಿ ಉದ್ಯಾನವನ, ಆಸ್ಪತ್ರೆ, ವಸತಿ ಗೃಹಗಳಿಗೆ ಮೀಸಲಿರಿಸಲಾಗಿದೆ ಎಂದರು.
ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆಗೆ 1,210 ಹೆಕ್ಟೇರ್ ಬೇಕಾಗಿದ್ದು, ಹಿರಿಯೂರಿನಲ್ಲಿ 55 ಕಿಲೋ ಮೀಟರ್ ಹಾದು ಹೋಗಲಿದೆ. ತಾಲ್ಲೂಕಿನಲ್ಲಿ 113 ಹೆಕ್ಟೇರ್ ಭೂ ಸ್ವಾಧೀನ ಬಾಕಿಯಿದೆ. ಎರಡು ತಿಂಗಳಲ್ಲಿ 70 ಹೆಕ್ಟೇರ್ ಭೂ ಸ್ವಾಧೀನಪಡಿಸಿಕೊಂಡು ಕೆಲಸ ಪ್ರಾರಂಭ ಮಾಡಲಾಗುವುದು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ವಿವೇಕ್ ಸಭೆಗೆ ಮಾಹಿತಿ ನೀಡಿದರು.
ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಸ್.ಎಚ್.ಲಮಾಣಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಿಂದ ಅನುಮೋದನೆ ಆಗಿರುವ ಕೆರೆಗಳಿಗೆ ನೀರು ಬರಲಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಇನ್ನು ಜವನಗೊಂಡನಹಳ್ಳಿ ಹಾಗೂ ಕರಿಯಾಲ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ನಮಗೆ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಕರಿಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಅವರು ಸಚಿವರಿಗೆ ಮನವಿ ಮಾಡಿದರು.












Click it and Unblock the Notifications