• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಜೂ.15ರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ

By ಕಾರವಾರ ಪ್ರತಿನಿಧಿ
|

ಕಾರವಾರ, ಜೂನ್ 10: ಕೇಂದ್ರ ಸರ್ಕಾರವು ಪ್ರಸಕ್ತ ವರ್ಷಕ್ಕೆ ಅನ್ವಯಿಸುವಂತೆ ಪಶ್ಚಿಮ ಕರಾವಳಿಯ ವಿಶೇಷ ಆರ್ಥಿಕ ವಲಯದಲ್ಲಿ ಜೂನ್ 15ರಿಂದ ಜುಲೈ 31ರ ವರೆಗೆ ಒಟ್ಟು 47 ದಿನಗಳ ಅವಧಿಗೆ ಇಳಿಕೆ ಮಾಡಿ ಮೀನುಗಾರಿಕೆ ನಿಷೇಧ ಅವಧಿಯನ್ನು ಜಾರಿ ಮಾಡಿ ಆದೇಶ ಹೊರಡಿಸಿದೆ ಎಂದು ಜಿಲ್ಲಾ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರಾದ ಪಿ. ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   June is going to be a menacing month in terms of Corona | Oneindia Kannada

   ಉತ್ತರ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಎಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ ಅಥವಾ ಔಟ್ ಬೋರ್ಡ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧಿಸಲಾಗಿದೆ.

   ವಾಯುಭಾರ ಕುಸಿತ; ಮಂಗಳೂರಿನಲ್ಲಿ ಜೂನ್ 4ರವರೆಗೆ ಮೀನುಗಾರಿಕೆ ನಡೆಸದಂತೆ ಸೂಚನೆ

   ಸರ್ಕಾರದ ಈ ಅಧಿಸೂಚನೆಯನ್ನು ಉಲ್ಲಂಘಿಸಿದ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ 1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆ ಆಗುವುದಲ್ಲದೆ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡಿಸೇಲ್ ಪಡೆಯಲು ಮತ್ತು ಕೇಂದ್ರ ಅಬಕಾರಿ ತೆರಿಗೆ ಮರುಪಾವತಿಯನ್ನು ಪಡೆಯಲು ಅನರ್ಹರಾಗಿರುತ್ತಾರೆಂದು ತಿಳಿಸಲಾಗಿದೆ.

   English summary
   Central government has issued notice to prohibition of fishing in coastal areas till july 31
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X