ಕುಮಟಾಕ್ಕೆ ಪುನೀತ್ ರಾಜಕುಮಾರ್ ಭೇಟಿ: ನೆಚ್ಚಿನ ನಟನ ನೋಡಲು ಜನಸಾಗರ
ಕಾರವಾರ, ಜನವರಿ 6: ಸ್ಯಾಂಡಲ್ವುಡ್ ನಟ ಪವರ್ಸ್ಟಾರ್ ಪುನೀತ್ ರಾಜಕುಮಾರ ಆಪ್ತರೊಬ್ಬರ ವಿವಾಹದಲ್ಲಿ ಭಾಗಿಯಾಗಲು ಬುಧವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾಕ್ಕೆ ಭೇಟಿ ನೀಡಿದರು.
ಕುಮಟಾ ಪಟ್ಟಣದ ದೇವರಹಕ್ಕಲ ಸಭಾ ಭವನದಲ್ಲಿ ಪುನೀತ್ ರಾಜಕುಮಾರ ಅವರ ಕಚೇರಿಯ ಅಕೌಂಟ್ ವಿಭಾಗದಲ್ಲಿ ಕೆಲಸ ನಿರ್ವಹಿಸುವ ಗುರುರಾಜ್ ಎಂಬುವವರ ಮದುವೆ ನಿಮಿತ್ತ ಆಗಮಿಸಿದ ಅಪ್ಪು, ನೂತನ ವಧು-ವರರಿಗೆ ಶುಭಕೋರಿ ತೆರಳಿದರು.

ಇನ್ನು ಪವರ್ಸ್ಟಾರ್ ಆಗಮನದ ಸುದ್ದಿ ತಿಳಿದು ಅವರು ಸಾವಿರಾರು ಅಭಿಮಾನಿಗಳು ಸಭಾಭವನದ ಹೊರಗೆ ಕಿಕ್ಕಿರಿದು ಜಮಾಯಿಸಿದ್ದರು. ಅಭಿಮಾನಿಗಳು ತಮ್ಮ ನೆಚ್ಚಿನ ನಟ ಪುನೀತ್ ರಾಜಕುಮಾರ ಆಗಮಿಸುತ್ತಿದ್ದಂತೆ ಘೋಷಣೆಗಳನ್ನು ಕೂಗಿ, ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದರು.

ಗುರುರಾಜ್ ಅವರ ಮದುವೆಯಲ್ಲಿ ಭಾಗವಹಿಸಿದ ಪುನೀತ್ ರಾಜಕುಮಾರ, ವಾಪಸ್ ತೆರಳುವವರೆಗೂ ಅಭಿಮಾನಿಗಳು ಕಾದು ಕುಳಿತಿದ್ದರು. ನಂತರ ನಟ ಪುನೀತ್ ಹೊರಬರುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವುದಕ್ಕೆ ಅಭಿಮಾನಿಗಳು ಮುಗಿಬಿದ್ದರು.
ಕುಮಟಾಕ್ಕೆ ಪುನೀತ್ ರಾಜಕುಮಾರ್ ಭೇಟಿ.
— Kannada Filmibeat (@FilmibeatKa) January 6, 2021
ಆಪ್ತರೊಬ್ಬರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಉತ್ತರ ಕನ್ನಡ ಜಿಲ್ಲೆಯ ಕುಮಟಾ ನಗರಕ್ಕೆ ಆಗಮಿಸಿದ್ದರು.#Kumta #PuneethRajkumar @PuneethRajkumar pic.twitter.com/hsfmVuVhe3
ತಮ್ಮ ಊರಿನಲ್ಲಿ ನೆಚ್ಚಿನ ನಟನನ್ನು ಕಂಡು ಪವರ್ಸ್ಟಾರ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದು, ಇನ್ನು ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಗೋಕರ್ಣದ ಪುರಾಣ ಪ್ರಸಿದ್ಧ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದರು. ಅರ್ಚಕರಾದ ವೇ.ಪ್ರಶಾಂತ್ ಭಟ್ ಹಿರೇಗಂಗೆ ಪೂಜಾ ಕೈಂಕರ್ಯ ನೆರವೇರಿಸಿದರು. ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಶ್ರೀ ದೇವಾಲಯದ ಆಡಳಿತಾಧಿಕಾರಿ ಜಿ.ಕೆ ಹೆಗಡೆ ಹಾರ ಹಾಕಿ ಸ್ವಾಗತಿಸಿದರು.
Recommended Video
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications