ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೋಕರ್ಣ ದೇವಾಲಯದಲ್ಲಿ ರಾಮಚಂದ್ರಾಪುರ ಮಠದ ಅಧಿಕಾರ ಆಬಾಧಿತ

|
Google Oneindia Kannada News

ಕಾರವಾರ, ಸೆ 7: ಗೋಕರ್ಣ ಶ್ರೀಮಹಾಬಲೇಶ್ವರ ದೇವಾಲಯವನ್ನು ಸರ್ಕಾರಕ್ಕೆ ವಹಿಸುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ನೀಡಿದ್ದ ಆದೇಶವನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ರಾಮಚಂದ್ರಾಪುರ ಮಠ ಪ್ರಶ್ನಿಸಿದ್ದು, ಇಂದು (ಸೆ 7) ಮಠದ ಅರ್ಜಿಯನ್ನು ಮಾನ್ಯ ಮಾಡಿದ ಘನ ನ್ಯಾಯಾಲಯ ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶವನ್ನು, ಮುಂದಿನ ಆದೇಶದವರೆಗೂ ಮುಂದುವರಿಸುವಂತೆ ಸೂಚಿಸಿದೆ.

ಇದರಿಂದಾಗಿ ಮಠಕ್ಕಿರುವ ದೇವಾಲಯದ ನಿರ್ವಹಣಾಧಿಕಾರ ಆಬಾಧಿತವಾಗಿ ಸದ್ಯಕ್ಕೆ ಮುಂದುವರಿಯಲಿದೆ. ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರಕ್ಕೆ ವಹಿಸುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ಕಳೆದ ಆಗಸ್ಟ್ 10 ರಂದು ತೀರ್ಪು ನೀಡಿತ್ತು

ಕೈತಪ್ಪಿದ ಗೋಕರ್ಣ ದೇಗುಲ: ನಿಲುವು ಸ್ಪಷ್ಟಪಡಿಸಿದ ರಾಮಚಂದ್ರಾಪುರ ಮಠಕೈತಪ್ಪಿದ ಗೋಕರ್ಣ ದೇಗುಲ: ನಿಲುವು ಸ್ಪಷ್ಟಪಡಿಸಿದ ರಾಮಚಂದ್ರಾಪುರ ಮಠ

ಮತ್ತು ಅದೇ ದಿನ ಮಧ್ಯಂತರ ಆದೇಶವನ್ನು ನೀಡಿ, ತೀರ್ಪಿನಲ್ಲಿ ಉಲ್ಲೇಖಿಸಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಸೆಪ್ಟೆಂಬರ್ 10 ನಂತರ ಕಾರ್ಯ ನಿರ್ವಹಿಸಲಿದೆ, ಸೆಪ್ಟೆಂಬರ್ 10ವರೆಗೆ ಶ್ರೀಮಠವೇ ಆಡಳಿತವನ್ನು ಸಡೆಸಲಿದೆ ಎಂದು ಮಧ್ಯಂತರ ಆದೇಶದಲ್ಲಿ ಹೇಳಿತ್ತು.

Ramachandrapura Mutt administration will continue in Gokarna till further order

ಇಂದು ಈ ಪ್ರಕರಣದ ಮೇಲ್ಮನವಿಯ ವಿಚಾರಣೆ ಸರ್ವೋಚ್ಛ ನ್ಯಾಯಾಲಯದಲ್ಲಿ ನಡೆದಿದ್ದು, ಶ್ರೀಮಠದ ಅರ್ಜಿಯನ್ನು ಮಾನ್ಯ ಮಾಡಿ, ಪ್ರತಿವಾದಿಗಳಿಗೆ ನೊಟೀಸ್ ಜಾರಿ ಮಾಡಿದೆ. ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ.

ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ ವ್ರತದಲ್ಲಿ ಬದಲಾವಣೆ ರಾಘವೇಶ್ವರ ಶ್ರೀಗಳ ಚಾತುರ್ಮಾಸ್ಯ ವ್ರತದಲ್ಲಿ ಬದಲಾವಣೆ

ಅಂದರೆ ಸೆಪ್ಟೆಂಬರ್ 10 ರ ನಂತರ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಅಧಿಕಾರ ವಹಿಸಿಕೊಳ್ಳುವುದನ್ನು ಮುಂದೂಡಿದಂತಾಗಿದ್ದು, ಸುಪ್ರೀಂ ಕೋರ್ಟಿನಲ್ಲಿ ತೀರ್ಮಾನ ಆಗುವವರೆಗೂ ದೇವಾಲಯದ ಆಡಳಿತವನ್ನು ಶ್ರೀಮಠವೇ ನಿರ್ವಹಿಸಲಿದೆ.

ಗೋಸ್ವರ್ಗ ಸಂವಾದ - ಗೋಸಂಪದ ಸಮರ್ಪಣೆ, ಬೆಂಗಳೂರಿನಲ್ಲಿ ಗೋಸ್ವರ್ಗ ಸಂವಾದ - ಗೋಸಂಪದ ಸಮರ್ಪಣೆ, ಬೆಂಗಳೂರಿನಲ್ಲಿ

ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ನಿರ್ವಹಣೆಯ ಕುರಿತಾಗಿ ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ಆದೇಶಕ್ಕೆ ನ್ಯಾಯಾಲಯವೇ ಒಂದು ತಿಂಗಳ ತಡೆ ನೀಡಿತ್ತು.

English summary
Ramachandrapura Mutt administration will continue in Gokarna Mahabaleshwara Temple till further order, Supreme Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X