• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉತ್ತರ ಕನ್ನಡ: 12 ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ಪ್ರಕಟ

|

ಕಾರವಾರ, ಅಕ್ಟೋಬರ್ 9: ಉತ್ತರ ಕನ್ನಡ ಜಿಲ್ಲೆಯ 12 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲು ಪಟ್ಟಿಯನ್ನು ಸರ್ಕಾರ ಅಕ್ಟೋಬರ್ 8, ಗುರುವಾರ ಪ್ರಕಟಿಸಿ ರಾಜ್ಯಪತ್ರ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಗೊಂದಲದಿಂದಾಗಿ ಸದಸ್ಯರ ಆಯ್ಕೆಯಾಗಿ 2 ವರ್ಷ ಕಳೆಯುತ್ತಿದ್ದರೂ ಇದುವರೆಗೆ ಆಡಳಿತ ಮಂಡಳಿ ರಚನೆಯೇ ಆಗಿರಲಿಲ್ಲ. 2018ರ ಸೆ.3ರಂದು ಮತ್ತು 6ರಂದು ಸರಕಾರ ಮೀಸಲಾತಿ ಪ್ರಕಟ ಮಾಡಿತ್ತು. ಆ ಬಳಿಕವೂ ಗೊಂದಲ ಬಗೆಹರಿದಿರಲಿಲ್ಲ. ಇದೇ ವರ್ಷದ ಮಾರ್ಚ್ 11ರಂದು ನಗರಾಭಿವೃದ್ಧಿ ಇಲಾಖೆ ಪರಿಷ್ಕೃತ ಮೀಸಲಾತಿ ಪ್ರಕಟಿಸಿದ್ದರೂ ಮೀಸಲಾತಿ ಸಮರ್ಪಕವಾಗಿಲ್ಲ ಎಂದು ಆರೋಪಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲು ಏರಿದ್ದರಿಂದ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರು ಇರಲಿಲ್ಲ.

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ; ಗೆದ್ದು ಬೀಗಿದ ಕಾಂಗ್ರೆಸ್

ಇನ್ನು, ಜಿಲ್ಲೆಯ ಮೂರು ನಗರಸಭೆ, ನಾಲ್ಕು ಪುರಸಭೆ ಹಾಗೂ ಐದು ಪಟ್ಟಣ ಪಂಚಾಯತಿಗಳಿಗೆ ಸರ್ಕಾರ ಪ್ರಕಟಿಸಿರುವ ಮೀಸಲಾತಿ ಹೀಗಿದೆ...

ನಗರಸಭೆಗಳು: ಕಾರವಾರ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ 'ಅ' ವರ್ಗ, ಶಿರಸಿ: ಅಧ್ಯಕ್ಷ- ಹಿಂದುಳಿದ 'ಎ' ವರ್ಗ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ದಾಂಡೇಲಿ: ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ 'ಬಿ' ವರ್ಗ

ಪುರಸಭೆಗಳು: ಭಟ್ಕಳ: ಅಧ್ಯಕ್ಷ, ಉಪಾಧ್ಯಕ್ಷ- ಸಾಮಾನ್ಯ, ಕುಮಟಾ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಹಳಿಯಾಳ: ಅಧ್ಯಕ್ಷ- ಹಿಂದುಳಿದ 'ಎ' ವರ್ಗ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಅಂಕೋಲಾ: ಅಧ್ಯಕ್ಷ- ಸಾಮಾನ್ಯ, ಉಪಾಧ್ಯಕ್ಷ- ಹಿಂದುಳಿದ 'ಬಿ' ವರ್ಗದ ಮಹಿಳೆ

ಪಟ್ಟಣ ಪಂಚಾಯತಿಗಳು: ಸಿದ್ದಾಪುರ: ಅಧ್ಯಕ್ಷ- ಹಿಂದುಳಿದ 'ಎ' ವರ್ಗದ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಯಲ್ಲಾಪುರ: ಅಧ್ಯಕ್ಷ, ಉಪಾಧ್ಯಕ್ಷ- ಸಾಮಾನ್ಯ, ಮುಂಡಗೋಡ; ಅಧ್ಯಕ್ಷ- ಪರಿಶಿಷ್ಟ ಜಾತಿಯ ಮಹಿಳೆ, ಉಪಾಧ್ಯಕ್ಷ- ಸಾಮಾನ್ಯ, ಹೊನ್ನಾವರ: ಅಧ್ಯಕ್ಷ- ಹಿಂದುಳಿದ 'ಎ' ವರ್ಗ, ಉಪಾಧ್ಯಕ್ಷ- ಸಾಮಾನ್ಯ ಮಹಿಳೆ, ಜಾಲಿ: ಅಧ್ಯಕ್ಷ- ಸಾಮಾನ್ಯ ಮಹಿಳೆ, ಉಪಾಧ್ಯಕ್ಷ- ಹಿಂದುಳಿದ 'ಎ' ವರ್ಗದ ಮಹಿಳೆ.

   Rain Alert : ರಾಜ್ಯದಂತ ಭಾರಿ ಮಳೆ ಸಾಧ್ಯತೆ | Oneindia Kannada

   English summary
   Reservations announced for president and vice President of 12 Local Bodies in uttara kannada district
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X