• search
 • Live TV
ಕಾರವಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕದ್ರಾ ಜಲಾಶಯದ ಒಳಹರಿವು ಏರಿಕೆ; ಪ್ರವಾಹದ ಮೊದಲ ಮುನ್ಸೂಚನೆ ಪ್ರಕಟ

By ಕಾರವಾರ ಪ್ರತಿನಿಧಿ
|

ಕಾರವಾರ, ಜೂನ್ 13: ಕಾಳಿ ನದಿ ಯೋಜನೆ 2ನೇ ಹಂತದ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮುಂಗಾರುಮಳೆ ಪ್ರಾರಂಭವಾಗಿದ್ದು, ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

   Haveri people neglect all the rules and participate in Bandi Run | Haveri | Oneindia Kannada

   ಕದ್ರಾ ಜಲಾಶಯದ ಗರಿಷ್ಠ ಮಟ್ಟ 34.50 ಮೀಟರ್ ಗಳಾಗಿದ್ದು, ಶುಕ್ರವಾರ ಜಲಾಶಯದ ಮಟ್ಟ 30.15 ಮೀಟರ್ ಗಳಿಗೆ ಬಂದು ತಲುಪಿದೆ. ಇದೇ ರೀತಿಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದ ಪಕ್ಷದಲ್ಲಿ ಕಡಿಮೆ ಜಲಸಂಗ್ರಹಣ ಸಾಮರ್ಥ್ಯವುಳ್ಳ ಕದ್ರಾ ಜಲಾಶಯದ 32.50 ಮೀಟರ್ ಮಟ್ಟವನ್ನು ಶೀಘ್ರವೇ ತಲುಪುವ ಸಾಧ್ಯತೆ ಇರುತ್ತದೆ.

   ಜೂ.15ರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ನಿಷೇಧ

   ಆದ್ದರಿಂದ ಕದ್ರಾ ಅಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾಗಿ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರ ಬಿಡಲಾಗುವುದು. ಅಣೆಕಟ್ಟೆಯ ಕೆಳ ದಂಡೆಯಲ್ಲಿ ಹಾಗೂ ನದಿಯ ದಂಡೆಯ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿ ಕೊಳ್ಳಬೇಕೆಂದು ಪ್ರವಾಹದ ಮೊದಲ ಮುನ್ಸೂಚನೆಯನ್ನು ನೀಡಲಾಗಿದೆ.

   ಕದ್ರಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲದ ಅವಧಿಯಲ್ಲಿ ನಡೆಸದಂತೆ ಕರ್ನಾಟಕ ವಿದ್ಯುತ್ ನಿಗಮದ ಕದ್ರಾ ಅಣೆಕಟ್ಟು ಮತ್ತು ವಿದ್ಯುದಾಗಾರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.

   English summary
   Monsoon started in the basin of the Kadra Dam, increasing the flow rate of the reservoir.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X